ಸಂಜನಾಗೆ ಸಿಗಲಿಲ್ಲ ರಿಲೀಫ್.. ಪರಪ್ಪನ ಅಗ್ರಹಾರ ಜೈಲೇ ಗಟ್ಟಿ

[lazy-load-videos-and-sticky-control id=”_ZSGVv0vuFs”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ಬಂಧನಕ್ಕೊಳಗಾಗಿರುವ ನಟಿ ಸಂಜನಾ ಗಲ್ರಾನಿಯ ಜಾಮೀನು ಅರ್ಜಿ ವಿಚಾರಣೆ ನಡೆಸಿದ 1ನೇ ಎಸಿಎಂಎಂ ‌ಕೋರ್ಟ್‌ ಸಂಜನಾಗೆ ಜಾಮೀನು ನಿರಾಕರಿಸಿದೆ. ಈ ಮಧ್ಯೆ, ಆರೋಪಿ ಸಂಜನಾರನ್ನು ತನ್ನ ಕಸ್ಟಡಿಗೆ ನೀಡುವುದು ಬೇಡ ಎಂದು ಸಿಸಿಬಿ ಕೋರ್ಟ್ ಗಮನಕ್ಕೆ ತಂದ ಕಾರಣ, ಸಂಜನಾಗೆ 2 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ. ಹಾಗಾಗಿ, ಸಂಜನಾ ಇಂದೇ ಪರಪ್ಪನ ಅಗ್ರಹಾರ ಜೈಲಿಗೆ ತೆರಳಬೇಕಾಗಿದೆ. […]

ಸಂಜನಾಗೆ ಸಿಗಲಿಲ್ಲ ರಿಲೀಫ್.. ಪರಪ್ಪನ ಅಗ್ರಹಾರ ಜೈಲೇ ಗಟ್ಟಿ
Follow us
ಸಾಧು ಶ್ರೀನಾಥ್​
|

Updated on:Sep 16, 2020 | 6:49 PM

[lazy-load-videos-and-sticky-control id=”_ZSGVv0vuFs”]

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ಬಂಧನಕ್ಕೊಳಗಾಗಿರುವ ನಟಿ ಸಂಜನಾ ಗಲ್ರಾನಿಯ ಜಾಮೀನು ಅರ್ಜಿ ವಿಚಾರಣೆ ನಡೆಸಿದ 1ನೇ ಎಸಿಎಂಎಂ ‌ಕೋರ್ಟ್‌ ಸಂಜನಾಗೆ ಜಾಮೀನು ನಿರಾಕರಿಸಿದೆ.

ಈ ಮಧ್ಯೆ, ಆರೋಪಿ ಸಂಜನಾರನ್ನು ತನ್ನ ಕಸ್ಟಡಿಗೆ ನೀಡುವುದು ಬೇಡ ಎಂದು ಸಿಸಿಬಿ ಕೋರ್ಟ್ ಗಮನಕ್ಕೆ ತಂದ ಕಾರಣ, ಸಂಜನಾಗೆ 2 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ. ಹಾಗಾಗಿ, ಸಂಜನಾ ಇಂದೇ ಪರಪ್ಪನ ಅಗ್ರಹಾರ ಜೈಲಿಗೆ ತೆರಳಬೇಕಾಗಿದೆ.

ಈ ಪ್ರಕರಣವನ್ನು 1ನೇ ಎಸಿಎಂಎಂ ಕೋರ್ಟ್​ನಿಂದ 33 ನೇ ಎಸಿಎಂಎಂಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ಸೆ.18 ರಂದು ಸಂಜನಾರನ್ನು ವಿಶೇಷ ಕೋರ್ಟ್ ಗೆ ಹಾಜರುಪಡಿಸಲು ಸೂಚನೆ ನೀಡಲಾಗಿದ್ದು, ಜಾಮೀನು ಅರ್ಜಿಯನ್ನು ಅಲ್ಲಿಯೇ ತೀರ್ಮಾನ ಮಾಡುವಂತೆ ಆದೇಶದಲ್ಲಿ ಹೇಳಲಾಗಿದೆ.

ಸಂಜನಾ ಪರ ವಕೀಲರ ವಾದ ಹೀಗಿತ್ತು.. ನಟಿ ಸಂಜನಾ ಗಲ್ರಾನಿ ಪರ ವಕೀಲರಾದ ಶ್ರೀನಿವಾಸರಾವ್ ಅವರಿಂದ ವಾದ ಮಂಡನೆ ಮಾಡಲಾಯಿತು. ಸಿಸಿಬಿ ಪೊಲೀಸರ ಕ್ರಮಕ್ಕೆ ತಕರಾರು ಎತ್ತಿದ ವಕೀಲರು, ಪ್ರಕರಣವನ್ನು NDPS ವಿಶೇಷ ಕೋರ್ಟ್‌ಗೆ ವರ್ಗಾಯಿಸಬೇಕಿತ್ತು. ಆದರೆ ಜಾಮೀನು ತಪ್ಪಿಸುವ ಉದ್ದೇಶದಿಂದ 1ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ ಎಂದು ಸಿಸಿಬಿ ಪೊಲೀಸರ ಕ್ರಮಕ್ಕೆ ತಕರಾರು ಎತ್ತಿದರು.

ಇದು NDPS ಕೇಸ್ ಆಗಿರುವುದರಿಂದ ವಿಶೇಷ ಕೋರ್ಟ್‌ ಇದೆ. ಅಲ್ಲಿ ಜಾಮೀನು ಅರ್ಜಿಯೂ ವಿಚಾರಣೆಗೆ ಬಾಕಿ ಇದೆ. ಅಲ್ಲೇ ಹಾಜರುಪಡಿಸಿದ್ದರೆ ಜಾಮೀನಿಗೆ ಮನವಿ ಸಲ್ಲಿಸಬಹುದಿತ್ತು ಎಂದರು.

ಜೊತೆಗೆ ಸಂಜನಾ ಮೇಲಿನ ಆರೋಪವೇನು ಎಂಬುದನ್ನು ಸಿಸಿಬಿ ತಿಳಿಸಿಲ್ಲ ಹಾಗೂ ಯಾವ ಸೆಕ್ಷನ್ ಅಡಿ ಸಂಜನಾ ಆರೋಪವಿದೆ ಎಂಬುದನ್ನೂ ತಿಳಿಸಿಲ್ಲ. ಹೀಗಾಗಿ ಇದು ವಿಶೇಷ ಕೋರ್ಟ್ ವ್ಯಾಪ್ತಿಗೆ ಬರುತ್ತದೋ ಇಲ್ಲವೋ ತಿಳಿದಿಲ್ಲ. ಇದರಿಂದ ಸಿಸಿಬಿ ಆರೋಪವೇ ಅಸ್ಪಷ್ಟವಾಗಿರುವುದರಿಂದ ನ್ಯಾಯಾಂಗ ಬಂಧನ ಬೇಡ ಎಂದರು. ಜೊತೆಗೆ 3 ವರ್ಷಕ್ಕಿಂತ ಕಡಿಮೆ ಶಿಕ್ಷೆಯಿದ್ದರೆ ಇಲ್ಲೇ ಜಾಮೀನು ನೀಡಬಹುದು. ಹೀಗಾಗಿ ಸಂಜನಾರಿಗೆ ಜಾಮೀನು ನೀಡಲು ಸಂಜನಾ ಪರ ವಕೀಲರು ವಾದ ಮಂಡಿಸಿದರು.

Published On - 5:30 pm, Wed, 16 September 20

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ