ಹುಬ್ಬಳ್ಳಿ: ಸರಳವಾಸ್ತುವಿನಿಂದ ದೇಶ-ವಿದೇಶಗಳಲ್ಲಿ ಖ್ಯಾತಿ ಗಳಿಸಿದ್ದ ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಪಟ್ಟಂತೆ ಪೊಲೀಸ್ ಕಮಿಷನರೇಟ್ ನ್ಯಾಯಾಲಯಕ್ಕೆ ಬರೋಬ್ಬರಿ 800 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದೆ. ಜೆಎಂಎಫ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾಜ್‌ಶೀಟ್‌ನಲ್ಲಿ ಕೊಲೆಗೆ ಏನು ಕಾರಣ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖವಾಗಿದೆ.
840 ಪುಟ ಜಾರ್ಜ್ ಶೀಟ್ನಲ್ಲಿ ಕೇಸ್ನ ಮಹತ್ವದ ಅಂಶಗಳು ಉಲ್ಲೇಖವಾಗಿದ್ದು, ಸರ್ವೆ ನಂಬರ್ 166/1 ,5.11 ಗುಂಟೆ ಜಮೀನು ವಿಚಾರ ಗುರೂಜಿ ಕೊಲೆಗೆ ಮುಖ್ಯ ಕಾರಣ ಎಂದು ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಚಂದ್ರಶೇಖರ ಗುರೂಜಿ ಹತ್ಯೆ: 800 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ
ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಇದ್ದ ಜಮೀನು ಬಸವರೆಡ್ಡಿ ಎಂಬುವರ ಹೆಸರಿನಲ್ಲಿತ್ತು. ಈ ಬಸವರೆಡ್ಡಿ ಕೂಡ ಸರಳವಾಸ್ತು ಕಂಪನಿಯ ಹಳೇ ಉದ್ಯೋಗಿ. ಗುರೂಜಿ ಕಂಪನಿ ಬಿಟ್ಟ ಬಳಿಕ ಮಹಾಂತೇಶ್, ಮಂಜುನಾಥ ಮತ್ತು ಬಸವರೆಡ್ಡಿ ಗುರೂಜಿ ವಿರುದ್ಧ ಸೇಡು ತೀರಿಸಿಕೊಳ್ಳಲು ಕಾಯುತ್ತಿದ್ದರು. ಹೀಗಾಗಿ ಬಸವರೆಡ್ಡಿ ಹತ್ತಿರ ಇದ್ದ ಜಮೀನನ್ನು ಮಹಾಂತೇಶ್ ಹೆಸರಿಗೆ ವರ್ಗಾಯಿಸಿ ಮಾರಾಟ ಮಾಡಲು ಪ್ಲಾನ್ ಮಾಡಿದ್ದರು.
ಬಳಿಕ ಆ ಜಮೀನನ್ನು ಬೇರೆಯವರಿಗೆ ಮಾರಾಟ ಮಾಡಿ ಹಣ ಹಂಚಿಕೆ ಮಾಡಿಕೊಳ್ಳಲು ಪ್ಲಾನ್ ಆಗಿತ್ತು. ಆದರೆ ಗುರೂಜಿ ಕೊಲೆಯ ಸ್ಕೆಚ್ ನಲ್ಲಿ ಬಸವರೆಡ್ಡಿ ಪಾತ್ರವಿಲ್ಲ ಎನ್ನುವ ಅಂಶವೂ ಕೂಡ ಚಾರ್ಜ್ ಶೀಟ್ನಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ ಎಂದು ಎನ್ನಲಾಗಿದೆ,
ಜುಲೈ 5ರಂದು ಇಲ್ಲಿನ ಉಣಕಲ್ ಶ್ರೀನಗರ ಕ್ರಾಸ್ ಬಳಿಯಿರುವ ಖಾಸಗಿ ಹೋಟೆಲ್‌ನಲ್ಲಿ ಕಲಘಟಗಿ ತಾಲೂಕಿನ ದುಮ್ಮವಾಡ ಗ್ರಾಮದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡ ಅವರು ಗುರೂಜಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಈ ಇಬ್ಬರು ಗುರೂಜಿ ಬಳಿಯೇ ಕೆಲಸಕ್ಕೆ ಇದ್ದು, ಅವರ ಆಪ್ತರಾಗಿದ್ದರು. ಆದಾಗ್ಯೂ ಹಾಡಹಗಲೇ ಖಾಸಗಿ ಹೋಟೆಲ್‌ನ ಲಾಂಜ್‌ನಲ್ಲಿ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದರು. ಬರೋಬ್ಬರಿ 46 ಬಾರಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ್ದರು.
Published On - 4:57 pm, Fri, 7 October 22