ಯೋಗೇಶ್ವರ್‌ಗೆ ಮತ ನೀಡಿ ಕರಪತ್ರವಿದ್ದ ಸೀರೆಗಳು ಜಪ್ತಿ
ಮೈಸೂರು: ಡಿಸೆಂಬರ್ 5 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಮತದಾರರಿಗೆ ಹಂಚಲು ಅಕ್ರಮವಾಗಿ ಸಂಗ್ರಹಿದ್ದ ಸೀರೆಗಳನ್ನು ವಿಜಯನಗರ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ರಮೇಶ್ ಬಾಬು ನೇತೃತ್ವದಲ್ಲಿ ನೋಡಲ್ ಅಧಿಕಾರಿ ಡಿಸಿಎಫ್ ಪ್ರಶಾಂತ್, ಎಸಿ ಡಾ. ವೆಂಕಟರಾಜು ದಾಳಿ ನಡೆಸಿದ್ದಾರೆ. ಚೀಲಗಳಲ್ಲಿ ತುಂಬಿಸಿಡಲಾಗಿದ್ದ ಬರೋಬ್ಬರಿ 30 ಸಾವಿರ ಸೀರೆಗಳು ಹಾಗೂ ಅಪಾರ ಪ್ರಮಾಣದ ಕರಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿ.ಪಿ.ಯೋಗೇಶ್ವರ್‌ಗೆ ಮತ ನೀಡಿ ಎಂಬ ಕರಪತ್ರ: […]
ಮೈಸೂರು: ಡಿಸೆಂಬರ್ 5 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಮತದಾರರಿಗೆ ಹಂಚಲು ಅಕ್ರಮವಾಗಿ ಸಂಗ್ರಹಿದ್ದ ಸೀರೆಗಳನ್ನು ವಿಜಯನಗರ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ರಮೇಶ್ ಬಾಬು ನೇತೃತ್ವದಲ್ಲಿ ನೋಡಲ್ ಅಧಿಕಾರಿ ಡಿಸಿಎಫ್ ಪ್ರಶಾಂತ್, ಎಸಿ ಡಾ. ವೆಂಕಟರಾಜು ದಾಳಿ ನಡೆಸಿದ್ದಾರೆ. ಚೀಲಗಳಲ್ಲಿ ತುಂಬಿಸಿಡಲಾಗಿದ್ದ ಬರೋಬ್ಬರಿ 30 ಸಾವಿರ ಸೀರೆಗಳು ಹಾಗೂ ಅಪಾರ ಪ್ರಮಾಣದ ಕರಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿ.ಪಿ.ಯೋಗೇಶ್ವರ್‌ಗೆ ಮತ ನೀಡಿ ಎಂಬ ಕರಪತ್ರ: ವಿಜಯನಗರ ಬಡಾವಣೆಯ ಮನೆಯಲ್ಲಿ ಬರೋಬ್ಬರಿ 30 ಸಾವಿರ ಸೀರೆಗಳನ್ನು ಶೇಖರಿಸಿಟ್ಟಿದ್ದರು. ಪ್ರತಿ ಸೀರೆಯ ಜೊತೆ ಸಿ.ಪಿ.ಯೋಗೇಶ್ವರ್‌ಗೆ ಮತ ನೀಡಿ ಎಂಬ ಕರಪತ್ರವಿದೆ. ಈ ಹಿಂದೆ ಸಿ.ಪಿ.ಯೋಗೇಶ್ವರ್ ಹುಣಸೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಬದಲಾದ ರಾಜಕೀಯವ ಪರಿಸ್ಥಿತಿಯಲ್ಲಿ ಹೆಚ್.ವಿಶ್ವನಾಥ್ ಅಭ್ಯರ್ಥಿಯಾದರು. ಅಭ್ಯರ್ಥಿ ಘೋಷಣೆಗೂ ಮುನ್ನವೇ ಸೀರೆ ಸಂಗ್ರಹಿಸಿಟ್ಟಿರುವ ಸಾಧ್ಯತೆಯಿದೆ.
Published On - 8:55 am, Sat, 16 November 19