AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಲ್ಲಿ ನೇರ ಸಂದರ್ಶನದ ಮೂಲಕ ವಿವಿಧ ಹುದ್ದೆಗಳ ನೇಮಕಾತಿ

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಕರ್ನಾಟಕ ಸರ್ಕಾರದ ಅಧೀನದಲ್ಲಿ ಆಯುಷ್ಮಾನ್ ಭಾರತ್ ಯೋಜನೆಗಳ ಅನುಷ್ಠಾನಕ್ಕಾಗಿ ವೈದ್ಯರು, ಡೇಟಾ ಅನಾಲಿಸ್ಟ್ ಸೇರಿದಂತೆ 16 ಗುತ್ತಿಗೆ ಆಧಾರಿತ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳಿಂದ ಸೆ.11 ರಂದು ಬೆಂಗಳೂರಿನಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಹೆಚ್ಚಿನ ವಿವರಗಳಿಗೆ SAST ವೆಬ್‌ಸೈಟ್‌ಗೆ ಭೇಟಿ ನೀಡಿ.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಲ್ಲಿ ನೇರ ಸಂದರ್ಶನದ ಮೂಲಕ ವಿವಿಧ ಹುದ್ದೆಗಳ ನೇಮಕಾತಿ
ಆರೋಗ್ಯ ಸುರಕ್ಷಾ ಟ್ರಸ್ಟ್‌ನಲ್ಲಿ ನೇರ ಸಂದರ್ಶನ
ಅಕ್ಷತಾ ವರ್ಕಾಡಿ
|

Updated on: Sep 06, 2026 | 1:25 PM

Share

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಗಸಂಸ್ಥೆಯಾದ ‘ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್’ (SAST) ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ‘ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ’ ಹಾಗೂ ಇತರೆ ಆರೋಗ್ಯ ಯೋಜನೆಗಳ ಅನುಷ್ಠಾನಕ್ಕಾಗಿ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಕಚೇರಿ ಹಾಗೂ ಕ್ಷೇತ್ರ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸಬೇಕಿರುತ್ತದೆ.

ಖಾಲಿ ಇರುವ ಹುದ್ದೆಗಳ ವಿವರ:

ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 16 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅವುಗಳಲ್ಲಿ 11 ಹಿರಿಯ ಎಕ್ಸಿಕ್ಯೂಟಿವ್ ವೈದ್ಯರು (Senior Executive Doctors), 2 ಎಕ್ಸಿಕ್ಯೂಟಿವ್ ವೈದ್ಯರು (2A Claims), 1 ಪ್ರಾದೇಶಿಕ ಸಲಹೆಗಾರರು (Regional Consultant – ಮೈಸೂರು ವಿಭಾಗ), 1 ಟೀಮ್ ಲೀಡರ್ ವೈದ್ಯರು (Team Leader-Doctor – KASS Scheme) ಮತ್ತು 1 ಡೇಟಾ ಅನಾಲಿಸ್ಟ್ (Data Analyst – M&E) ಹುದ್ದೆಗಳು ಸೇರಿವೆ. ಅಭ್ಯರ್ಥಿಗಳನ್ನು ಮೆರಿಟ್, ಶೈಕ್ಷಣಿಕ ಅರ್ಹತೆ, ರೋಸ್ಟರ್ ಹಾಗೂ ಟ್ರಸ್ಟ್‌ನ ನಿಯಮಾವಳಿಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

ಗುತ್ತಿಗೆ ಅವಧಿ ಮತ್ತು ಸಂದರ್ಶನದ ಸಮಯ:

ಆಯ್ಕೆಯಾಗುವ ಅಭ್ಯರ್ಥಿಗಳ ಗುತ್ತಿಗೆ ಅವಧಿಯನ್ನು ಆರಂಭದಲ್ಲಿ ಒಂದು ವರ್ಷಕ್ಕೆ ಸೀಮಿತಗೊಳಿಸಲಾಗಿದ್ದು, ಕಾರ್ಯಕ್ಷಮತೆ ಹಾಗೂ ಅಗತ್ಯಕ್ಕೆ ಅನುಗುಣವಾಗಿ ವಿಸ್ತರಿಸುವ ಅವಕಾಶವಿರುತ್ತದೆ. ನೇರ ಸಂದರ್ಶನವು ದಿನಾಂಕ 11.09.2026 ರಂದು ನಡೆಯಲಿದೆ. ಅಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ನೋಂದಣಿ ಪ್ರಕ್ರಿಯೆ, ಬೆಳಿಗ್ಗೆ 10.45 ರಿಂದ ಮಧ್ಯಾಹ್ನ 01.30 ರವರೆಗೆ ಕಂಪ್ಯೂಟರ್ ಪರೀಕ್ಷೆ ಹಾಗೂ ಮಧ್ಯಾಹ್ನ 02.30 ರಿಂದ ಸಂಜೆ 05.30 ರವರೆಗೆ ನೇರ ಸಂದರ್ಶನ ನಡೆಯಲಿದೆ.

ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ

ಸಂದರ್ಶನ ನಡೆಯುವ ಸ್ಥಳ ಮತ್ತು ಅರ್ಜಿ ಸಲ್ಲಿಸುವ ವಿವರ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು “ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಆರೋಗ್ಯ ಸೌಧ, 7ನೇ ಮಹಡಿ, ಮಾಗಡಿ ರಸ್ತೆ, ಬೆಂಗಳೂರು-560023” ಈ ವಿಳಾಸದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಅರ್ಜಿ ನಮೂನೆ ಹಾಗೂ ಹುದ್ದೆಗಳ ಕುರಿತು ಹೆಚ್ಚಿನ ನಿಯಮ ಮತ್ತು ವಿವರಗಳನ್ನು ಪಡೆಯಲು ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ https://sast.karnataka.gov.in/sast/ ಗೆ ಭೇಟಿ ನೀಡಬಹುದಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ