ಡಿ.5ರ ಬಂದ್​ಗೆ ಕಾಂಗ್ರೆಸ್ ಬೆಂಬಲ ಖಂಡಿತ ಇಲ್ಲ: ಸತೀಶ್ ಜಾರಕಿಹೊಳಿ ಸ್ಪಷ್ಟನೆ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Nov 26, 2020 | 4:22 PM

ಯೋಜನೆಗಳಿಗೆ ಕೊಡಲು ಸರ್ಕಾರದ ಬಳಿ ಹಣವಿಲ್ಲ. ಹಾಗಿದ್ದಾಗ ನಿಗಮಗಳಿಗೆ ಎಲ್ಲಿಂದ ಹಣ ಕೊಡುತ್ತಾರೆ ಎಂಬುದೇ ಪ್ರಶ್ನೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಡಿ.5ರ ಬಂದ್​ಗೆ ಕಾಂಗ್ರೆಸ್ ಬೆಂಬಲ ಖಂಡಿತ ಇಲ್ಲ: ಸತೀಶ್ ಜಾರಕಿಹೊಳಿ ಸ್ಪಷ್ಟನೆ
ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ (ಸಂಗ್ರಹ ಚಿತ್ರ)
Follow us on

ಬೆಳಗಾವಿ: ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಸೇರಿ ವಿವಿಧ ಕನ್ನಡ ಸಂಘಟನೆಗಳು ಕರೆದಿರುವ ಡಿ.5ರ ಬಂದ್​ಗೆ ಕಾಂಗ್ರೆಸ್ ಬೆಂಬಲ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಮ್ಮ ವಿರೋಧ ಇಲ್ಲ. ಆದರೆ ರಾಜಕೀಯ ಲಾಭಕ್ಕಾಗಿ ಅದನ್ನು ರಚನೆ ಮಾಡಿದ್ದನ್ನಷ್ಟೇ ವಿರೋಧಿಸಿದ್ದೇವೆ. ಬಜೆಟ್​ ವೇಳೆ ನಿಗಮ ಸ್ಥಾಪನೆ ಘೋಷಿಸಬೇಕಿತ್ತು. ಅದನ್ನು ಬಿಟ್ಟು ಉಪಚುನಾವಣೆ ವೇಳೆ ಮಾಡಿದ್ದೇಕೆ? ಯೋಜನೆಗಳಿಗೆ ಕೊಡಲು ಹಣವಿಲ್ಲ. ಹಾಗಿದ್ದಾಗ ನಿಗಮಗಳಿಗೆ ಎಲ್ಲಿಂದ ಹಣ ಕೊಡುತ್ತಾರೆ ಎಂದು ಪ್ರಶ್ನಿಸಿದರು. ಬೆಳಗಾವಿ ಅಭಿವೃದ್ಧಿ ಮಾಡುವ ಬಗ್ಗೆ ಇಲ್ಲಿನ ಬಿಜೆಪಿ ನಾಯಕರು ಆಸಕ್ತಿ ವಹಿಸುತ್ತಿಲ್ಲ. ಅವರಿಗೆ ಇಚ್ಛಾಶಕ್ತಿಯ ಕೊರತೆ ಇದೆ ಎಂದು ವ್ಯಂಗ್ಯವಾಡಿದರು.

ಹೈಕಮಾಂಡ್ ಡಿಸೈಡ್ ಮಾಡತ್ತೆ…!
ರಾಷ್ಟ್ರ ರಾಜಕಾರಣಕ್ಕೆ ಹೋಗ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸತೀಶ್ ಜಾರಕಿಹೊಳಿ, ರಾಷ್ಟ್ರ ರಾಜಕಾರಣಕ್ಕೆ ಹೋದರೆ ಇನ್ನೂ ಹೆಚ್ಚಿನ ಕಂಟ್ರೋಲ್​ ಬರುತ್ತದೆ. ನೋಡೋಣ, ಮುಂದೆ ಎಲ್ಲವನ್ನೂ ಹೈಕಮಾಂಡ್ ಡಿಸೈಡ್ ಮಾಡುತ್ತದೆ ಎಂದು ತಿಳಿಸಿದರು.