ಗುತ್ತಿಗೆದಾರರ ಬಾಕಿ ಬಿಲ್ ಪಾವತಿ: ಬಿಗ್ ಅಪ್ಡೇಟ್ ಕೊಟ್ಟ ಸಚಿವ ಸತೀಶ್ ಜಾರಕಿಹೊಳಿ
ಗುತ್ತಿಗೆದಾರರಿಗೆ ಬಾಕಿ ಇರುವ 9 ಸಾವಿರ ಕೋಟಿ ರೂಪಾಯಿ ಬಿಲ್ ಪಾವತಿಗೆ ಸಮಯ ಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಈ ಮೊದಲು 12,000 ಕೋಟಿ ರೂಪಾಯಿ ಬಿಲ್ ಬಾಕಿ ಇತ್ತು. ಆ ಪೈಕಿ 3,000 ಕೋಟಿ ರೂ. ಪಾವತಿಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಬೆಂಗಳೂರು, ಅಕ್ಟೋಬರ್ 30: ಗುತ್ತಿಗೆದಾರರಿಗೆ ಪಾವತಿಸಬೇಕಿರುವ ಸುಮಾರು 9,000 ಕೋಟಿ ರೂಪಾಯಿ ಬಾಕಿ ಬಿಲ್ ತಕ್ಷಣವೇ ಪಾವತಿ ಕಷ್ಟ. ಇದು ಬಜೆಟ್‌ನಲ್ಲಿ ಅನುದಾನ ಮೀಸಲಿಡದೆ ನೀಡಲಾದ ಮೊತ್ತವಾಗಿದ್ದು, ಇದರ ಪಾವತಿಗೆ ಸಮಯ ಬೇಕಾಗುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ತಿಳಿಸಿದ್ದಾರೆ. ಈ ಮೊದಲು 12,000 ಕೋಟಿ ರೂಪಾಯಿ ಬಿಲ್ ಬಾಕಿ ಇತ್ತು. ಆ ಪೈಕಿ 3,000 ಕೋಟಿ ರೂಪಾಯಿ ಪಾವತಿಯಾಗಿ ಈಗ 9,000 ಕೋಟಿ ರೂಪಾಯಿ ಬಾಕಿ ಉಳಿದಿದೆ ಎಂದು ಅವರು ತಿಳಿಸಿದ್ದಾರೆ. ಇನ್ನು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ನೂರು ಕಚೇರಿಗಳನ್ನು ನಿರ್ಮಿಸುವ ಗುರಿ ಹೊಂದಿರುವ ಬಗ್ಗೆಯೂ ಸತೀಶ್ ಮಾತಾಡಿದ್ದಾರೆ. ಈ ಗುರಿ ತಲುಪಲು ಕೆಲವು ಶಾಸಕರು ಮತ್ತು ಉಸ್ತುವಾರಿ ಸಚಿವರು ಸ್ಪಂದಿಸಿಲ್ಲ ಎಂಬ ಶಿವಕುಮಾರ್ ಹೇಳಿಕೆ ಒಪ್ಪಿದ ಅವರು, ಪಕ್ಷಕ್ಕೆ ಶಾಶ್ವತ ಕಚೇರಿಗಳು ಇರುವುದು ಉತ್ತಮ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
