AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳಾಟವಾಡ್ತಿದ್ದ ಬ್ಯಾಂಕ್​ಗಳಿಗೆ ಬಿಸಿ ಮುಟ್ಟಿಸಿದ್ದ ಸಿಎಂ, ಸರ್ಕಾರದ ಖಜಾನೆಗೆ ವಾಪಸ್ ಬಂತು 22 ಕೋಟಿ ರೂ.

ನಿಶ್ಚಿತ ಠೇವಣಿಯನ್ನು ಮರುಪಾವತಿಸದೇ ಸರ್ಕಾರದ ಜೊತೆ ಕಳ್ಳಾಟವಾಡುತ್ತಿದ್ದ ಭಾರತೀಯ ಸ್ಟೇಟ್ ಬ್ಯಾಂಕ್ ಮತ್ತು ಪಂಜಾಬ್ ನ್ಯಾಶನಲ್ ಬ್ಯಾಂಕ್ ಸಿದ್ದರಾಮಯ್ಯ ಬಿಸಿ ಮುಟ್ಟಿಸಿದ್ದು, ಇದರ ಬೆನ್ನಲ್ಲೇ ಈ ಎರಡೂ ಬ್ಯಾಂಕ್​ಗಳು, ಸರ್ಕಾರಕ್ಕೆ ನಿಶ್ಚಿತ ಠೇವಣಿಯನ್ನು ಮರುಪಾವತಿಸಿವೆ. ಸರ್ಕಾರದ ಒಂದೇ ಆದೇಶಕ್ಕೆ ಬ್ಯಾಂಕ್​ಗಳಿಂದ ವಾಪಸ್ ಬಂತು 22 ಕೋಟಿ ರೂಪಾಯಿ ಬಂದಿದೆ.

ಕಳ್ಳಾಟವಾಡ್ತಿದ್ದ ಬ್ಯಾಂಕ್​ಗಳಿಗೆ ಬಿಸಿ ಮುಟ್ಟಿಸಿದ್ದ ಸಿಎಂ, ಸರ್ಕಾರದ ಖಜಾನೆಗೆ ವಾಪಸ್ ಬಂತು 22 ಕೋಟಿ ರೂ.
TV9 Web
| Edited By: |

Updated on: Sep 03, 2024 | 7:10 PM

Share

ಬೆಂಗಳೂರು, (ಸೆಪ್ಟೆಂಬರ್ 03): ಸಿದ್ದರಾಮಯ್ಯ ಬಿಸಿಮುಟ್ಟಿಸಿದ ಬೆನ್ನಲ್ಲೇ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ ಬಿಐ) ಹಾಗೂ ಪಂಜಾಬ್ ನ್ಯಾಶನಲ್ ಬ್ಯಾಂಕ್ (ಪಿಎನ್ ಬಿ)ನಿಂದ ಸರ್ಕಾರಕ್ಕೆ ವಾಪಸ್ 22 ಕೋಟಿ ರೂಪಾಯಿ ಬಂದಿದೆ. ಈ ಹಿಂದೆ ಮಾಡಿದ್ದ ಎರಡು ಪ್ರತ್ಯೇಕ ನಿಶ್ಚಿತ ಠೇವಣಿಗಳನ್ನು ಹಿಂದಿರುಗಿಸಲು ಎಸ್ ಬಿಐ ಹಾಗೂ ಪಿಎನ್ ಬಿ ನಿರಾಕರಿಸಿದ್ದವು. ಇದರ ಬೆನ್ನಲ್ಲೇ ಈ ಎರಡೂ ಬ್ಯಾಂಕಿನಲ್ಲಿ ಇರಿಸಿರುವ ಸರ್ಕಾರದ ಎಲ್ಲ ಠೇವಣಿಗಳನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಇದರ ಬೆನ್ನಲ್ಲೇ ಬ್ಯಾಂಕ್​ಗಳು ಸರ್ಕಾರಕ್ಕೆ ನಿಶ್ಚಿತ ಠೇವಣಿಯನ್ನು ಮರುಪಾವತಿಸಿವೆ. ಈ ಮೂಲಕ ಸರ್ಕಾರಕ್ಕೆ 22 ಕೋಟಿ ರೂಪಾಯಿ ಬಂದಿದೆ.

ರಾಜ್ಯ ಸರ್ಕಾರದ ಒಂದೇ ಒಂದು ಆದೇಶಕ್ಕೆ ಬೆದರಿದ ಬ್ಯಾಂಕ್​ಗಳು ವರ್ಷಗಟ್ಟಲೇ ಬಾಕಿಯಿದ್ದ 22 ಕೋಟಿ ರೂ. ಹಣ ಸರ್ಕಾರದ ಖಜಾನೆಗೆ ಜಮೆ ಮಾಡಿವೆ. ಎಸ್‌ಬಿಐನಿಂದ 9.67 ಕೋಟಿ ರೂಪಾಯಿ ಸರ್ಕಾರದ ಖಜಾನೆಗೆ ಜಮೆಯಾಗಿದೆ. ಇನ್ನು ಪಿಎನ್‌ಬಿನಿಂದ ಒಂದು ವರ್ಷದ ಬಡ್ಡಿ ಸಹಿತ 13.9 ಕೋಟಿ ರೂ. ಜಮೆಯಾಗಿದೆ.

ಇದನ್ನೂ ಓದಿ: ಖಾತೆಗಳ ಸ್ಥಗಿತಕ್ಕೆ ಬೆಚ್ಚಿದ ಎಸ್‌ಬಿಐ, ಪಂಜಾಬ್‌ ಬ್ಯಾಂಕ್‌: ಸಿಎಂ ಜತೆಗಿನ ಸಂಧಾನ ಸಭೆ ಯಶಸ್ವಿ

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸರ್ಕಾರಕ್ಕೆ ಬರಬೇಕಿದ್ದ 22 ಕೋಟಿ ರೂ. ಹಣವನ್ನು ನೀಡಿದೆ ವರ್ಷಗಟ್ಟಲೇ ಬಾಕಿ ಉಳಿಸಿಕೊಂಡಿದ್ದವು. ಈ ಬಗ್ಗೆ ಸರ್ಕಾರ ಎಷ್ಟೇ ಪತ್ರ ಬರೆದರೂ ಸಹ ನಿಶ್ಚಿತ ಠೇವಣಿಗಳನ್ನು ಹಿಂದಿರುಗಿಸಲು ಬ್ಯಾಂಕ್​ಗಳು ನಿರಾಕರಿಸಿದ್ದವು. ಇದರಿಂದ ಸಿಡಿಮಿಡಿಗೊಂಡಿದ್ದ ಸಿದ್ದರಾಮಯ್ಯ, ಈ 2 ಬ್ಯಾಂಕ್‌ಗಳಲ್ಲಿದ್ದ ಸರ್ಕಾರದ ಎಲ್ಲಾ ಖಾತೆ ಕ್ಲೋಸ್‌ ಮಾಡುವಂತೆ ಸುತ್ತೋಲೆ ಹೊರಡಿಸಿದ್ದರು. ಸರ್ಕಾರದ ಈ ನಿರ್ಧಾರಕ್ಕೆ ಕಂಗೆಟ್ಟು ಎರಡೂ ಬ್ಯಾಂಕಿನ ಅಧಿಕಾರಿಗಳು, ಸಿದ್ದರಾಮಯ್ಯನವರ ಬಳಿ ಓಡೋಡಿ ಬಂದು ಶೀಘ್ರದಲ್ಲೇ ಶ್ಚಿತ ಠೇವಣಿ ಮರುಪಾವತಿಸುವುದಾಗಿ ಹೇಳಿದ್ದರು. ಅದರಂತೆ ಇದೀಗ ಎರಡು ಬ್ಯಾಂಕ್​ಗಳಿಂದ ಸರ್ಕಾರದ ಖಜಾನೆಗೆ ಬರೋಬ್ಬರಿ 22 ಕೋಟಿ ರೂಪಾಯಿ ವಾಪಸ್ ಬಂದಿದೆ.

ಖಾತೆ ಸ್ಥಗಿತಕ್ಕೆ ಆದೇಶಿಸಿದ್ದ ಸರ್ಕಾರ

ರಾಜ್ಯ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು ವಿಶ್ವವಿದ್ಯಾಲಯಗಳು, ಮತ್ತಿತರ ಸಂಸ್ಥೆಗಳು ಮಾಡಿರುವ ಎಲ್ಲಾ ರೀತಿಯ ಠೇವಣಿಗಳನ್ನು/ಹೂಡಿಕೆಗಳನ್ನು ತಕ್ಷಣದಿಂದ ಹಿಂಪಡೆಯುವಂತೆ ಹಾಗೂ ಇನ್ನು ಮುಂದೆ ಈ ಬ್ಯಾಂಕುಗಳಲ್ಲಿ ಯಾವುದೇ ರೀತಿಯ ಠೇವಣಿಗಳನ್ನು/ ಹೂಡಿಕೆಗಳನ್ನು ಮಾಡಬಾರದು ಎಂದು ಸುತ್ತೋಲೆಯಲ್ಲಿ ಆದೇಶಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ