AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI recruitment 2026: ಎಸ್‌ಬಿಐ ಬೃಹತ್ ನೇಮಕಾತಿ; 9,100ಕ್ಕೂ ಹೆಚ್ಚು ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಕರ್ನಾಟಕದಲ್ಲಿ ಬ್ಯಾಂಕ್ ಕೆಲಸ ಹುಡುಕುತ್ತಿರುವ ಪದವೀಧರರಿಗೆ ಶುಭ ಸುದ್ದಿ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 9,124 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಆಯ್ಕೆಯಾದ ಆಭ್ಯರ್ಥಿಗಳಿಗೆ ಮಾಸಿಕ 64,480ರೂ. ವರೆಗೆ ವೇತನ ಸಿಗಲಿದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಇರಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 31 ಎಂದು ನಿಗದಿಪಡಿಸಲಾಗಿದೆ.

SBI recruitment 2026: ಎಸ್‌ಬಿಐ ಬೃಹತ್ ನೇಮಕಾತಿ; 9,100ಕ್ಕೂ ಹೆಚ್ಚು ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ!
ಎಸ್‌ಬಿಐ ಬೃಹತ್ ನೇಮಕಾತಿ
ಅಕ್ಷತಾ ವರ್ಕಾಡಿ
|

Updated on: Aug 19, 2026 | 1:28 PM

Share

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭವಿಷ್ಯವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸುವರ್ಣಾವಕಾಶವೊಂದನ್ನು ತಂದಿದೆ. ಎಸ್‌ಬಿಐ ಸಂಸ್ಥೆಯು 2026ನೇ ಸಾಲಿಗಾಗಿ ಬೃಹತ್ ಪ್ರಮಾಣದಲ್ಲಿ 9,124 ಕ್ಲರ್ಕ್ (ಜೂನಿಯರ್ ಅಸೋಸಿಯೇಟ್) ಹುದ್ದೆಗಳ ನೇಮಕಾತಿಗೆ ಅಧಿಕೃತ ಚಾಲನೆ ನೀಡಿದೆ. ಕರ್ನಾಟಕ ಸೇರಿದಂತೆ ದೇಶದಾದ್ಯಂತ ಇರುವ ಪದವೀಧರ ಉದ್ಯೋಗಾಕಾಂಕ್ಷಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ವಿವರಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ (Graduation) ಪಡೆದಿರಬೇಕು. ಪದವಿಯ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಸಹ ನಿಗದಿತ ಷರತ್ತುಗಳೊಂದಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಹಾಗೂ ಗರಿಷ್ಠ ವಯಸ್ಸು 28 ವರ್ಷಗಳಾಗಿರಬೇಕು. ಸರ್ಕಾರದ ನಿಯಮಾವಳಿಗಳ ಪ್ರಕಾರ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಇತರೆ ಹಿಂದುಳಿದ ವರ್ಗಗಳು (OBC) ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

ವೇತನ ಶ್ರೇಣಿ ಮತ್ತು ಆಯ್ಕೆ ಪ್ರಕ್ರಿಯೆ:

ಎಸ್‌ಬಿಐ ನಿಯಮಾವಳಿಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ನೀಡಲಾಗುತ್ತದೆ. ಮಾಸಿಕ 24,050 ರಿಂದ ಗರಿಷ್ಠ 64,480 ರೂ. ರವರೆಗೆ ವೇತನ ಶ್ರೇಣಿ ನಿಗದಿಯಾಗಿದ್ದು, ಇದರೊಂದಿಗೆ ವಿವಿಧ ಭತ್ಯೆಗಳು ಮತ್ತು ಬ್ಯಾಂಕಿಂಗ್ ಕ್ಷೇತ್ರದ ಇತರ ಸೌಲಭ್ಯಗಳು ಲಭ್ಯವಿರುತ್ತವೆ. ಇನ್ನು ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಸ್ಪರ್ಧಾತ್ಮಕ ಪರೀಕ್ಷೆಗಳ ಆಧಾರದ ಮೇಲೆ ನಡೆಯಲಿದ್ದು, ಪ್ರಾಥಮಿಕ ಪರೀಕ್ಷೆ (Prelims), ಮುಖ್ಯ ಪರೀಕ್ಷೆ (Mains) ಹಾಗೂ ಸ್ಥಳೀಯ ಭಾಷಾ ಪರೀಕ್ಷೆ (LPT) ಮತ್ತು ದಾಖಲೆಗಳ ಪರಿಶೀಲನೆಯನ್ನು ಒಳಗೊಂಡಿರುತ್ತದೆ.

ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ

ಅರ್ಜಿ ಶುಲ್ಕ ಮತ್ತು ಪ್ರಮುಖ ದಿನಾಂಕಗಳು:

ಆಸಕ್ತ ಅಭ್ಯರ್ಥಿಗಳು ಎಸ್‌ಬಿಐ ಅಧಿಕೃತ ವೆಬ್‌ಸೈಟ್ ಮೂಲಕವೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಸಾಮಾನ್ಯ, 2a/2b/3a/3b (OBC) ಹಾಗೂ EWS ವರ್ಗದ ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, SC, ST ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆಗಸ್ಟ್ 11 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕವಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸ್ಥಿರ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳು ತಡಮಾಡದೆ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!