ಪರಿಶಿಷ್ಟ ಜಾತಿ ಒಳ ಮೀಸಲಾತಿ: ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಸಿದ್ದರಾಮಯ್ಯಗೆ ಶಾಸಕರ ಒತ್ತಾಯ

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಯಾವುದೇ ಗೊಂದಲ ಇಲ್ಲದೆ ಸಹಮತ ಮೂಡಿಸುವ ಉದ್ದೇಶದಿಂದ ಗೃಹ ಸಚಿವ ಜಿ ಪರಮೇಶ್ವರ್​ ನೇತೃತ್ವದಲ್ಲಿ ಸೋಮವಾರ (ಅ.21) ರಂದು ಸದಾಶಿವನಗರದ ಗೃಹ ಕಚೇರಿಯಲ್ಲಿ ಪರಿಶಿಷ್ಟ ಸಮುದಾಯಗಳ ಸಚಿವರು ಹಾಗೂ ಶಾಸಕರ ಸಭೆ ನಡೆಯಿತು. ಸಭೆಯಲ್ಲಿ ಹಲವು ನಿರ್ಣಯ ಕೈಗೊಳ್ಳಲಾಗಿದೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿ: ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಸಿದ್ದರಾಮಯ್ಯಗೆ ಶಾಸಕರ ಒತ್ತಾಯ
ಜಿ ಪರಮೇಶ್ವರ
Follow us
|

Updated on: Oct 22, 2024 | 11:33 AM

ಬೆಂಗಳೂರು, ಅಕ್ಟೋಬರ್​ 22: ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ (G Parmeshwar) ನೇತೃತ್ವದಲ್ಲಿ ಸೋಮವಾರ ಸಭೆ ನಡೆಯಿತು. ಸಭೆಯಲ್ಲಿ ಉಪ ಜಾತಿಗಳ ಗಣತಿಗೆ ಯಾವ ದತ್ತಾಂಶವನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂಬುವುದರ ಬಗ್ಗೆ ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಕ್ಕೆ (Union Government) ಪತ್ರ ಬರೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸರ್ಕಾರಕ್ಕೆ ಸೂಚಿಸಲು ನಿರ್ಧರಿಸಲಾಯಿತು.

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಯಾವುದೇ ಗೊಂದಲ ಇಲ್ಲದೆ ಸಹಮತ ಮೂಡಿಸುವ ಉದ್ದೇಶದಿಂದ ಗೃಹ ಸಚಿವ ಜಿ ಪರಮೇಶ್ವರ್​ ನೇತೃತ್ವದಲ್ಲಿ ಸೋಮವಾರ (ಅ.21) ರಂದು ಸದಾಶಿವನಗರದ ಗೃಹ ಕಚೇರಿಯಲ್ಲಿ ಪರಿಶಿಷ್ಟ ಸಮುದಾಯಗಳ ಸಚಿವರು ಹಾಗೂ ಶಾಸಕರ ಸಭೆ ನಡೆಯಿತು.

ಒಳ ಮೀಸಲಾತಿ ಜಾರಿಗೊಳಿಸುವ ಸಂಬಂಧ ಆಗಸ್ಟ್​ 1 ರಂದು ಸುಪ್ರೀಂಕೋರ್ಟ್​ ತೀರ್ಪು ನೀಡಿತ್ತು. ಒಳ ಮೀಸಲಾತಿ ಜಾರಿಗೊಳಿಸಲು ರಾಜ್ಯಗಳಿಗೆ ಅಧಿಕಾರವಿದೆ. ಆದರೆ ಅದು ಪರಿಶೀಲಿಸಬಹುದಾದ ಪ್ರಾಯೋಗಿಕ ಡೇಟಾ ಆಧರಿಸಬೇಕು ಎಂದು ಹೇಳಿತ್ತು.

ಇದನ್ನೂ ಓದಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿ ಸ್ಪಷ್ಟತೆ ನೀಡಲಿಲ್ಲ: ಸ್ವಾಮೀಜಿ

ಸೋಮವಾರ ನಡೆದ ಸಭೆಯಲ್ಲಿ ಈ ವಿಚಾರವಾಗಿ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರದಿಂದ ಸ್ಪಷ್ಟತೆ ಪಡೆದಯದೆ ಎಸ್​ಸಿ ಕೋಟಾದ ವರ್ಗೀಕರಣವನ್ನು ಜಾರಿಗೊಳಿಸುವುದು ಪ್ರತಿಕೂಲವಾಗಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಸಂಬಂಧ 2011ರ ಜನಗಣತಿ ವರದಿಯನ್ನು ಪರಿಗಣಿಸಬೇಕೇ ಅಥವಾ ಜಾತಿ ಗಣತಿ ಎಂದು ಕರೆಯಲಾಗುವ ಸಾಮಾಜಿಕ-ಆರ್ಥಿಕ ಶೈಕ್ಷಣಿಕ ಸಮೀಕ್ಷೆಯನ್ನು ಪರಿಗಣಿಸಬಹುದೇ ಎಂಬುವುದರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕೆಂದು ನಿರ್ಧರಿಸಲಾಗಿದೆ.

ಎಸ್​ಸಿಎಸ್​ಪಿ, ಟಿಎಸ್​ಪಿ ಅನುದಾನ ಬಳಸಿ ಪರಿಶಿಷ್ಟ ಜಾತಿಗಳ ಉಪಜಾತಿಗಳ ಸಮೀಕ್ಷೆ ನಡೆಸುವುದು ಎಂದು ಕೆಲವರು ಸಲಹೆ ನೀಡಿದರು. ಇನ್ನೂ ಕೆಲವುರು ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯಲ್ಲಿರುವ ಅಂಕಿಅಂಶಗಳನ್ನು ಪರಿಗಣಿಸುವ ಬಗ್ಗೆ ಸಲಹೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ