AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಟಿ ಮೀಸಲಾತಿ ಹೆಚ್ಚಳಕ್ಕೆ ವಾಲ್ಮೀಕಿ ಸಮುದಾಯ ಹರ್ಷ; ಸರ್ಕಾರಕ್ಕೆ ತಲೆಬಿಸಿಯಾದ ಪಂಚಮಸಾಲಿ ಮೀಸಲಾತಿ

ಎಸ್​ಟಿ ಹಾಗೂ ಎಸ್​ಸಿ ಸಮುದಾಯದ ಮೀಸಲಾತಿಯನ್ನು ಹೆಚ್ಚಳಮಾಡಿರುವುದಕ್ಕೆ ಸಮುದಾಯವು ಸಂತಸ ವ್ಯಕ್ತಪಡಿಸುತ್ತಿದೆ. ಈ ನಡುವೆ ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆಯೂ ಸರ್ಕಾರದ ಮೇಲೆ ಹೆಚ್ಚಾಗುತ್ತಿದೆ. ಇದು ಸರ್ಕಾರದ ತಲೆಬಿಸಿಯನ್ನು ಮತ್ತಷ್ಟು ಹೆಚ್ಚಿಸಿದೆ.

ಎಸ್​ಟಿ ಮೀಸಲಾತಿ ಹೆಚ್ಚಳಕ್ಕೆ ವಾಲ್ಮೀಕಿ ಸಮುದಾಯ ಹರ್ಷ; ಸರ್ಕಾರಕ್ಕೆ ತಲೆಬಿಸಿಯಾದ ಪಂಚಮಸಾಲಿ ಮೀಸಲಾತಿ
ಎಸ್​ಟಿ ಮೀಸಲಾತಿ ಹೆಚ್ಚಳಕ್ಕೆ ವಾಲ್ಮೀಕಿ ಸಮುದಾಯ ಹರ್ಷ; ಸರ್ಕಾರಕ್ಕೆ ತಲೆಬಿಸಿಯಾದ ಪಂಚಮಸಾಲಿ ಮೀಸಲಾತಿ
TV9 Web
| Edited By: Rakesh Nayak Manchi|

Updated on:Oct 08, 2022 | 4:45 PM

Share

ಬೆಂಗಳೂರು: ಎಸ್​ಟಿ ಮೀಸಲಾತಿ 4 ಶೇಕಡಾ ಹೆಚ್ಚಿಸಿದ್ದಕ್ಕೆ ವಾಲ್ಮೀಕಿ ಸಮುದಾಯ ಹರ್ಷ ವ್ಯಕ್ತಪಡಿಸಿದ್ದು, ವಾಲ್ಮೀಕಿ ಸಮುದಾಯದ ಪ್ರಸನ್ನಾನಂದಪುರಿ ಸ್ವಾಮೀಜಿ ಮತ್ತಿತರರು ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ. ಬಳಿಕ ಮಾತನಾಡಿದ ಸ್ವಾಮೀಜಿ, ಮೀಸಲಾತಿ ಹೆಚ್ಚಿಸಿರುವುದಕ್ಕೆ ಸಮುದಾಯದ ಒಂದೂವರೆ ಕೋಟಿ ಜನರ ಪರವಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಸಚಿವ ಸಂಪುಟದ ಸದಸ್ಯರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಬಸವರಾಜ ಬೊಮ್ಮಾಯಿ ರಾಜ್ಯದ ಧೀಮಂತ ಮುಖ್ಯಮಂತ್ರಿ. ನಾಳೆ ವಾಲ್ಮೀಕಿ ಜಯಂತಿ ಆಚರಣೆ ವೇಳೆಯೂ ವಿಜಯೋತ್ಸವ ನಡೆಸಲಾಗುವುದು. ನಾಳೆ 150 ಸಮುದಾಯದವರಿಂದ ಸರ್ಕಾರ, ಸಿಎಂಗೆ ಅಭಿನಂದನೆ ಸಲ್ಲಿಸಲಾಗುವುದು. ಇಷ್ಚು ದಿನ ನಡೆಸಿದ ಧರಣಿ ವಾಪಸ್​​ ಪಡೆದಿದ್ದೇವೆ ಎಂದು ಘೋಷಣೆ ಮಾಡಿದರು. ಸ್ವಾಮೀಜಿ ಅವರು ಮಾತನಾಡುತ್ತಿದ್ದ ವೇಳೆ ಕಂದಾಯ ಸಚಿವ ಆರ್.ಅಶೋಕ್ ಅವರು ಕ್ಯಾಮೆರಾದ ಮೂಲಕ ಚಿತ್ರೀಕರಣ ಮಾಡಿದರು.

ಎಸ್​ಸಿ ಎಸ್​ಟಿ ಸಮುದಾಯದ ಮೀಸಲಾತಿ ಹೆಚ್ಚಳದ ಬೆನ್ನಲ್ಲೆ ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಒತ್ತಡ ಸರ್ಕಾರದ ಮೇಲೆ ಹೆಚ್ಚುತ್ತಿದೆ. ಇದು ಸರ್ಕಾರಕ್ಕೆ ತಲೆಬಿಸಿಯಾಗಿ ಪರಿಣಮಿಸಿದೆ. ಪಂಚಮಸಾಲಿ ಸಮುದಾಯಕ್ಕೂ ಮೀಸಲಾತಿ ಘೋಷಿಸಬೇಕು ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ವಚನಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಮೀಸಲಾತಿಗಾಗಿ ಪಂಚಮಸಾಲಿ ಸಮಾಜ ಹೋರಾಟ ಮಾಡುತ್ತಿದೆ. ಮುಖ್ಯಮಂತ್ರಿಯವರು ಶೀಘ್ರದಲ್ಲೇ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಸಂಜೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡುತ್ತೇವೆ. ಆದಷ್ಟು ಬೇಗ ಮೀಸಲಾತಿ ಕೊಡುತ್ತಾರೆ ಎಂಬ ನಂಬಿಕೆ ಇದೆ ಎಂದರು.

ಕ್ಲಿಷ್ಟಕರ ಮೀಸಲಾತಿಯನ್ನ ಹೇಗೆ ಬಗೆಹರಿಸಿದರೂ ಗೊತ್ತಿಲ್ಲ, ಅದೇ ರೀತಿ ಪಂಚಮಸಾಲಿ ಸಮುದಾಯ ಮೀಸಲಾತಿ ಸಮಸ್ಯೆ ಬಗೆಹರಿಸಬೇಕು. ನಾವು ಮೀಸಲಾತಿ ಪಡೆದೇ ಪಡೆಯುತ್ತೇವೆ. ನಮ್ಮ ಸಮುದಾಯದ ಸ್ವಾಮೀಜಿಗಳ ಉದ್ದೇಶ ಒಂದೇ ಇದೆ. ಆದಷ್ಟು ಬೇಗ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳಬೇಕು. ಸರ್ಕಾರವು ಮೀಸಲಾತಿ ಕೊಡುತ್ತದೆ ಎಂಬ ನಂಬಿಕೆ ಇದೆ. ನಾವು ಕೂಡ ತಾಳ್ಮೆಯಿಂದ ಇರಬೇಕು ಎಂದು ಸ್ವಾಮೀಜಿ ಹೇಳಿದರು.

ಸಾಮಾಜಿಕ ನ್ಯಾಯ ಬೊಮ್ಮಾಯಿಗೆ ರಕ್ತಗತವಾಗಿ ಬಂದಿದೆ

ಮೀಸಲಾತಿ ಹೆಚ್ಚಳ ಮಾಡಿದ್ದಕ್ಕೆ ಸಮುದಾಯದ ಪರವಾಗಿ ಸಚಿವ ಎಂ.ಗೋವಿಂದ ಕಾರಜೋಳ ಅವರು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕೊಡಬೇಕು ಎಂದು ಅನೇಕ ವರ್ಷಗಳಿಂದ ಹೋರಾಟ ನಡೆಸುತ್ತಾ ಬರಲಾಗಿತ್ತು. 250 ದಿನ ಸ್ವಾಮೀಜಿಗಳು ಸತ್ಯಾಗ್ರಹ ಮಾಡಿದ್ದಾರೆ. ಅದರಂತೆ ಸಚಿವ ಸಂಪುಟ ಸಭೆಯಲ್ಲಿ ಅನುಮೋಧನೆ ನೀಡಲಾಗಿದೆ. ಈ ಸಮುದಾಯದ ಹಿರಿಯ ಸಚಿವನಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ಸಾಮಾಜಿಕ ನ್ಯಾಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ರಕ್ತಗತವಾಗಿ ಬಂದಿದೆ ಎಂದರು.

1950ರ ನಂತರ ಎಸ್​ಸಿ, ಎಸ್​ಟಿಗೆ ಅನೇಕ ಜಾತಿಗಳ ಸೇರ್ಪಡೆಯಾಗಿದೆ. ಸಹಜವಾಗಿಯೇ ಜನಸಂಖ್ಯೆ ಹೆಚ್ಚಳವಾಗಿದ್ದರಿಂದ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯವಿತ್ತು. ಜಾತಿ ಜನಸಂಖ್ಯೆವಾಗಿ ಮೀಸಲಾತಿಗೆ ಒತ್ತಾಯಿಸಿ ಹೋರಾಟ ನಡೆಸಲಾಗುತ್ತಿತ್ತು. ಇದಕ್ಕಾಗಿ ನ್ಯಾ.ನಾಗಮೋಹನ ದಾಸ್​ ಸಮಿತಿ ರಚನೆ ಮಾಡಲಾಗಿತ್ತು. ಅದರಂತೆ ಸಮಿತಿಯು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಸದ್ಯ ನ್ಯಾ.ನಾಗಮೋಹನ ದಾಸ್ ವರದಿ ಜಾರಿಗೆ ಸಂಪುಟ ಅನುಮೋದಿಸಿದೆ ಎಂದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:45 pm, Sat, 8 October 22

Follow Us
TV9 Web
TV9 Web

TV9 Kannada

Read More