ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್, ಏನಿದು ನೋಟಿಸ್? ಪ್ರಜ್ವಲ್ ಮೇಲಾಗುವ ಪರಿಣಾಮವೇನು?

Prajwal Revanna Video case: ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗುತ್ತಿದ್ದಂತೆಯೇ ವಿದೇಶಕ್ಕೆ ಹಾರಿರುವ ಹಾಸನದ ಲೋಕಸಭಾ ಸದಸ್ಯ ಪ್ರಜ್ವಲ್‌ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ಅವರಿಗೆ ಲುಕ್ಔಟ್‌ ನೋಟಿಸ್ ಜಾರಿ ಮಾಡಲಾಗಿದೆ. ಹಾಗಾದ್ರೆ, ಲುಕೌಟ್‌ ನೋಟೀಸ್‌ ಎಂದರೇನು, ಅದರ ಪರಿಣಾಮವೇನು? ಪ್ರಜ್ವಲ್​ಗೆ ಈ ನೋಟಿಸ್​ನಿಂದ ಪ್ರಜ್ವಲ್​ಗೆ ಹೇಗೆ ಸಂಕಷ್ಟ ಎದುರಾಗಬಹುದು?ಎನ್ನುವ ವಿವರ ಇಲ್ಲಿದೆ.

ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್, ಏನಿದು ನೋಟಿಸ್? ಪ್ರಜ್ವಲ್ ಮೇಲಾಗುವ ಪರಿಣಾಮವೇನು?
ಪ್ರಜ್ವಲ್ ರೇವಣ್ಣ
Follow us
ರಮೇಶ್ ಬಿ. ಜವಳಗೇರಾ
|

Updated on:May 02, 2024 | 3:03 PM

ಬೆಂಗಳೂರು, (ಮೇ 02): ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರಿಗೆ ಲುಕ್ಔಟ್‌ ನೋಟಿಸ್ (Lookout notice) ಜಾರಿ ಮಾಡಲಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಎಸ್​ಐಟಿ ಚುರುಕುಗೊಳಿಸಿದ್ದು, ಈಗಾಗಲೇ ಪ್ರಜ್ವಲ್ ರೇವಣ್ಣ ಮತ್ತು ಎಚ್​ಡಿ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಆದ್ರೆ, ಪ್ರಜ್ವಲ್ ವಿದೇಶದಲ್ಲಿರುವುದರಿಂದ ವಿಚಾರಣೆಗೆ ಹಾಜರಾಗಲು ಏಳು ದಿನ ಕಾಲಾವಕಾಶ ಕೇಳಿದ್ದಾರೆ. ಆದ್ರೆ, ಇದಕ್ಕೆ ಒಪ್ಪದ ಎಸ್‌ಐಟಿ, ಪ್ರಜ್ವಲ್ ರೇವಣ್ಣ ಬಂಧನಕ್ಕೆ ಲುಕ್‌ಔಟ್ ನೋಟಿಸ್ ಜಾರಿಗೊಳಿಸಿದೆ. ಈ ಮೂಲಕ ವಿಮಾನ ನಿಲ್ದಾಣ, ಭೂ ಗಡಿ ಪ್ರದೇಶ ಅಥವಾ ಬಂದರುಗಳಲ್ಲಿ ಪತ್ತೆಯಾದರೂ ಬಂಧಿಸಲು ಮುಂದಾಗಿದೆ.

ಪ್ರಜ್ವಲ್‌ ರೇವಣ್ಣ ವಿರುದ್ದದ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ( SIT) ಲುಕ್‌ ಔಟ್‌ ನೊಟೀಸ್‌ ಅನ್ನು ಜಾರಿ ಮಾಡಿದ್ದು, ಕೂಡಲೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಈಗಾಗಲೇ ಭಾರತೀಯ ವಿದೇಶಾಂಗ ಸಚಿವಾಲಯ, ಪ್ರಮುಖ ವಿಮಾನ ನಿಲ್ದಾಣಗಳಿಗೂ ಪ್ರಕರಣದ ವಿವರಗಳನ್ನು ನೀಡಲಾಗಿದ್ದು. ಪ್ರಜ್ವಲ್‌ ರೇವಣ್ಣ ಕಂಡು ಬಂದರೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ನಾಳೆ ಬೆಂಗಳೂರಿಗೆ ಬರುವುದು ಅನುಮಾನ? ಮತ್ತೊಂದು ಟಿಕೆಟ್ ಬುಕ್​

ಗೃಹ ಸಚಿವರು ಹೇಳಿದ್ದೇನು?

ಇನ್ನು ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ವಿಶೇಷ ತನಿಖಾ ತಂಡ ಈಗಾಗಲೇ ಪ್ರಜ್ವಲ್‌ಗೆ ನೊಟೀಸ್‌ ನೀಡಿತ್ತು. ಅವರು ಏಳು ದಿನದ ಸಮಯ ಕೇಳಿಕೊಂಡಿದ್ದರು. ಈಗ ಲುಕ್‌ ಔಟ್‌ ನೊಟೀಸ್‌ ಅನ್ನು ಜಾರಿಗೊಳಿಸಲಾಗಿದೆ. ಅವರು ಎಸ್‌ಐಟಿ ತಂಡದ ಮುಂದೆ ಹಾಜರಾಗಿ ಮೊದಲು ಹೇಳಿಕೆ ನೀಡಬೇಕು. ಬಾರದೇ ಇದ್ದರೆ ಅನಿವಾರ್ಯವಾಗಿ ಬಂಧಿಸಲೇಬೇಕಾಗುತ್ತದೆ. ಇದರ ಮುಂದಿನ ಕ್ರಮವಾಗಿಯೇ ಲುಕ್‌ ಔಟ್‌ ನೊಟೀಸ್‌ ಜಾರಿ ಮಾಡಲಾಗಿದೆ ಎಂದು ಹೇಳಿದರು.

ಏನಿದು ಲುಕ್‌ಔಟ್ ನೋಟೀಸ್?

ಯಾವುದೇ ಒಂದು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಅಥವಾ ನಾಪತ್ತೆಯಾಗಿರುವ ಆರೋಪಿ ಪತ್ತೆಗೆ ತನಿಖಾ ಸಂಸ್ಥೆಗಳು ಅನುಸರಿಸುವ ಕ್ರಮವಾಗಿದೆ. ಇದನ್ನು ದೇಶದ ವಲಸೆ ಬ್ಯೂರೋ (Bureau of Immigration) ಹಾಗೂ ಗೃಹ ಸಚಿವಾಲಯ (MHA) ಮಾತ್ರ ನೀಡಬಹುದು. ಅಂತಾರಾಷ್ಟ್ರೀಯ ಗಡಿ, ಬಂದರು, ವಿಮಾನ ನಿಲ್ದಾಣ (Airport) ಮತ್ತಿತರ ಸಂಚಾರ ಪಾಯಿಂಟ್‌ಗಳಲ್ಲಿ ಸಂಬಂಧಪಟ್ಟ ಆರೋಪಿ ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಸೂಚನೆ ನೀಡಲಾಗುತ್ತದೆ ಹಾಗಾಗಿ ಆರೋಪಿ ಇರುವ ದೇಶದಿಂದ ಬೇರೆ ಕಡೆಗೆ ಲೀಗಲ್ ಆಗಿ ಹೋಗಲು ಸಾಧ್ಯವಿಲ್ಲ. ಯಾವುದೇ ಏರ್ಪೋರ್ಟ್, ಬಂದರು, ಅಂತಾರಾಷ್ಟ್ರೀಯ ಗಡಿಗೆ ಹೋದರು ಅಲ್ಲಿರುವ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆಯಬಹುದು.

ಪ್ರಜ್ವಲ್ ಮೇಲೆ ಲುಕ್‌ ಔಟ್ ನೊಟೀಸ್ ಪರಿಣಾಮವೇನು?

ಈಗ ಕರ್ನಾಟಕದ ಪೊಲೀಸರ ನೇತೃತ್ವದ ಎಸ್‌ಐಟಿ ತಂಡದಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್‌ಔಟ್ ನೊಟೀಸ್ ಜಾರಿ ಮಾಡಲಾಗಿದೆ. ಈ ನೊಟೀಸ್‌ನಿಂದಾಗಿ ಜರ್ಮನಿಯಿಂದ ಬೇರೆ ದೇಶಗಳಿಗೆ ತೆರಳುವುದನ್ನು ತಪ್ಪಿಸಲು ಸಹಾಯಕವಾಗಿದೆ. ಈ ಮೂಲಕ ಪ್ರಜ್ವಲ್ ಬಗ್ಗೆ ಎಲ್ಲ ಏರ್​ಪೋರ್ಟ್​ ಅಧಿಕಾರಿಗಳಿಗೆ ಮಾಹಿತಿ ರವಾನಿಸಲಾಗಿದೆ. ವಿಮಾನ ನಿಲ್ದಾಣಗಳಲ್ಲಿ, ರಸ್ತೆ ಮಾರ್ಗದ ಪ್ರಮುಖ ಗಡಿ ಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಅಥವಾ ಬಂದರುಗಳಲ್ಲಿ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷವಾದರೆ ಸಂಬಂಧಪಟ್ಟ ತನಿಖಾ ಸಂಸ್ಥೆಗಳಿಗೆ ಮಾಹಿತಿ ನೀಡಬೇಕು. ಒಂದು ವೇಳೆ ಅಗತ್ಯ ಬಿದ್ದರೆ ಅಲ್ಲಿನ ಅಧಿಕಾರಿಗಳಿಗಳೇ ಆರೋಪಿಯನ್ನು ಬಂಧಿಸಿ ತನಿಖಾ ಸಂಸ್ಥೆಯ ವಶಕ್ಕೆ ಒಪ್ಪಿಸುವುದಕ್ಕೆ ಲುಕ್‌ ಔಟ್ ನೋಟೀಸ್‌ನಲ್ಲಿ ಅವಕಾಶವಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನುಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:58 pm, Thu, 2 May 24

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್