AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದಾ ನೆಲದೊಳಗೆ ಭಾರಿ ಸದ್ದು, ಗೋಡೆಗಳಲ್ಲಿ ಬಿರುಕು: ಗ್ರಾಮಸ್ಥರು ಕಂಗಾಲು!

ವಿಜಯಪುರ: ತಿಕೋಟಾ ತಾಲೂಕಿನ ಮಲಕನದೇವರಹಟ್ಟಿ ಗ್ರಾಮದಲ್ಲಿ ಹಗಲು ರಾತ್ರಿಯೆನ್ನದೆ ನೆಲದಲ್ಲಿ ಭಾರಿ ಸದ್ದು ಉಂಟಾಗುತ್ತಿದೆ. ಇದ್ದಕ್ಕಿದ್ದಂತೆ ಕೇಳೋ ಈ ಸದ್ದಿನಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಜತೆಗೆ ಮನೆಗಳ ಗೋಡೆಗಳಲ್ಲಿ ಬಿರುಕು ಸಹ ಕಾಣಿಸಿಕೊಳ್ಳುತ್ತಿದೆ. ನೆಲದೊಳಗೆ ಆಗುವ ಕಂಪನದಿಂದ ಹೀಗಾಗಿದೆಯೆಂದು ಕೆಲವರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. 4 ವರ್ಷಗಳ ಹಿಂದೆಯೂ ಸದ್ದು ಕೇಳಿಸಿತ್ತು: 4 ವರ್ಷಗಳ ಹಿಂದೆಯೂ ಇದೇ ರೀತಿಯ ಸದ್ದು ಕೇಳಿಸಿತ್ತು. ಆಗ ಭೂಮಿಯ ಒಳಗಿನ ಸದ್ದಿನ ಮೂಲ ಪತ್ತೆ ಹಚ್ಚುವ ಕೆಲಸವಾಗಿತ್ತು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ […]

ಸದಾ ನೆಲದೊಳಗೆ ಭಾರಿ ಸದ್ದು, ಗೋಡೆಗಳಲ್ಲಿ ಬಿರುಕು: ಗ್ರಾಮಸ್ಥರು ಕಂಗಾಲು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 10, 2019 | 4:15 PM

Share

ವಿಜಯಪುರ: ತಿಕೋಟಾ ತಾಲೂಕಿನ ಮಲಕನದೇವರಹಟ್ಟಿ ಗ್ರಾಮದಲ್ಲಿ ಹಗಲು ರಾತ್ರಿಯೆನ್ನದೆ ನೆಲದಲ್ಲಿ ಭಾರಿ ಸದ್ದು ಉಂಟಾಗುತ್ತಿದೆ. ಇದ್ದಕ್ಕಿದ್ದಂತೆ ಕೇಳೋ ಈ ಸದ್ದಿನಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಜತೆಗೆ ಮನೆಗಳ ಗೋಡೆಗಳಲ್ಲಿ ಬಿರುಕು ಸಹ ಕಾಣಿಸಿಕೊಳ್ಳುತ್ತಿದೆ. ನೆಲದೊಳಗೆ ಆಗುವ ಕಂಪನದಿಂದ ಹೀಗಾಗಿದೆಯೆಂದು ಕೆಲವರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

4 ವರ್ಷಗಳ ಹಿಂದೆಯೂ ಸದ್ದು ಕೇಳಿಸಿತ್ತು: 4 ವರ್ಷಗಳ ಹಿಂದೆಯೂ ಇದೇ ರೀತಿಯ ಸದ್ದು ಕೇಳಿಸಿತ್ತು. ಆಗ ಭೂಮಿಯ ಒಳಗಿನ ಸದ್ದಿನ ಮೂಲ ಪತ್ತೆ ಹಚ್ಚುವ ಕೆಲಸವಾಗಿತ್ತು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಸದ್ದಿನ ಬಗ್ಗೆ ಸಿಸ್ಮೋ ಮೀಟರ್ ಅಳವಡಿಸಿ ಅಧ್ಯಯನ ನಡೆಸಿದ್ದರು. ಸದ್ದಿಗೆ ಭೂಮಿಯ ಒಳಪದರದಲ್ಲಿ ಆಗುವ ಕಂಪನವೇ ಕಾರಣವೆಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ವರದಿ ನೀಡಿದ್ದರು. ಇದೀಗ ಹಿಂದಿಗಿಂತಲೂ ಹೆಚ್ಚಾಗಿ ಕಂಪನದ ಸದ್ದು ಕೇಳಿಸುತ್ತಿದೆ.

ಗ್ರಾಮದಲ್ಲಿ ಸದ್ದಿನ ಬಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಪಡೆಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಮತ್ತೆ ಗ್ರಾಮಕ್ಕೆ ತೆರಳಿ ಸದ್ದಿನ ಬಗ್ಗೆ ಅಧ್ಯಯನ ನಡೆಸುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಅಲ್ಲದೆ, ಭೂಕಂಪದ ಭಯ ಬೇಡ ಎಂದು ಗ್ರಾಮಸ್ಥರಿಗೆ ಡಿಸಿ ಅಭಯ ನೀಡಿದ್ದಾರೆ. ಆದಾಗ್ಯೂ ಹಗಲು ರಾತ್ರಿ ಭಯದಲ್ಲೇ ಗ್ರಾಮದ ಜನ ಕಾಲಕಳೆಯುತ್ತಿದ್ದಾರೆ.

Published On - 4:06 pm, Tue, 10 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ