ಮಳೆಯಾರ್ಭಟ: ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಜೂನ್ ಆರಂಭದಲ್ಲಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ವರುಣ ಇದೀಗ ಸೈಲೆಂಟ್ ಆಗಿದ್ದು, ಬಿತ್ತನೆ ಮಾಡಿದ ರೈತರು ಕಂಗಾಲಾಗಿದ್ದಾರೆ. ಮತ್ತೊಂದೆಡೆ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮಳೆಯಾರ್ಭಟ ಮುಂದುವರೆದಿದೆ. ಹೀಗಾಗಿ ಕೆಲ ಜಿಲ್ಲೆಗಳಲ್ಲಿ ನಾಳೆ ಅಂದರೆ ಜುಲೈ 17ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗಾದ್ರೆ, ಯಾವೆಲ್ಲಾ ಜಿಲ್ಲೆಗಳಲ್ಲಿ ಗುರುವಾರ ರಜೆ ನೀಡ;ಆಗಿದೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ಮಂಗಳೂರು/ಉಡುಪಿ, (ಜುಲೈ 16): ಕರಾವಳಿ (Karavali) ಭಾಗದ ಜಿಲ್ಲೆಗಳಲ್ಲಿ ವರುಣನ (Rain) ಅರ್ಭಟ ಮುಂದುವರೆದಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಉಡುಪಿ (Udupi), ದಕ್ಷಿಣ ಕನ್ನಡ (Dakshina Kannada) ಹಾಗೂ ಕೊಡಗು (Kodagu) ಜಿಲ್ಲೆಗಳಲ್ಲಿ ನಾಳೆ(ಜುಲೈ 17) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜೂನ್ ಆರಂಭದಲ್ಲಿ ಅಬ್ಬರಿಸಿದ್ದ ವರುಣ ಇದೀಗ ಏಕಾಏಕಿ ಸೈಲೆಂಟ್ ಆಗಿದ್ದು, ಮಳೆಗಾಗಿ ಜನರು ಆಕಾಶದತ್ತ ನೋಡುವಂತಾಗಿದೆ. ಆದ್ರೆ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯಾರ್ಭಟ ಕಡಿಮೆಯಾಗಿಲ್ಲ. ಇದರಿಂದ ಶಾಲೆ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಉಡುಪಿಯಲ್ಲಿ ಪ್ರಾಥಮಿಕ- ಪ್ರೌಢಶಾಲೆಗಳಿಗೆ ರಜೆ
ಉಡುಪಿ ಜಿಲ್ಲೆಯಲ್ಲಿ ಮಳೆಯಾರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾವಾಗಿ ಜುಲೈ 17ರಂದು ಗುರುವಾರ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದ್ದು, ಪದವಿ ಪೂರ್ವ, ಪದವಿ ಕಾಲೇಜುಗಳು ಎಂದಿನಂತೆ ತೆರೆದಿರುತ್ತವೆ ಎಂದು ಉಡುಪಿ ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ್ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ದಕ್ಷಿಣಕನ್ನಡ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ನಾಳೆ (ಜುಲೈ 17) ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ಪದವಿಪೂರ್ವ ಕಾಲೇಜುವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ
ಇನ್ನು ಕೊಡಗು ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ನಾಳೆ(ಜುಲೈ 17) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.
Published On - 9:45 pm, Wed, 16 July 25




