ಶಾಲಾ-ಕಾಲೇಜು ಆರಂಭ.. ಸರಣಿ ಟ್ವೀಟ್ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಿದ ಸಚಿವ ಸುಧಾಕರ್

ರಾಜ್ಯದಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳು ಆರಂಭವಾದ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ, ಶೈಕ್ಷಣಿಕ ಪ್ರಗತಿ ಗಮನದಲ್ಲಿಟ್ಟುಕೊಂಡು ಎಚ್ಚರಿಕೆ, ಜವಾಬ್ದಾರಿಯಿಂದ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಿದ್ದಾರೆ.

ಶಾಲಾ-ಕಾಲೇಜು ಆರಂಭ.. ಸರಣಿ ಟ್ವೀಟ್ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಿದ ಸಚಿವ ಸುಧಾಕರ್
ಡಾ.ಕೆ.ಸುಧಾಕರ್​
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on: Jan 01, 2021 | 1:09 PM

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳು ಆರಂಭವಾದ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ, ಶೈಕ್ಷಣಿಕ ಪ್ರಗತಿ ಗಮನದಲ್ಲಿಟ್ಟುಕೊಂಡು ಎಚ್ಚರಿಕೆ, ಜವಾಬ್ದಾರಿಯಿಂದ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಿದ್ದಾರೆ.

ಇಂದಿನಿಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗುತ್ತಿವೆ. ಮಕ್ಕಳ ಆರೋಗ್ಯ ಮತ್ತು ಶೈಕ್ಷಣಿಕ ಪ್ರಗತಿ ಎರಡನ್ನೂ ಗಮನದಲ್ಲಿಟ್ಟುಕೊಂಡು ಸರ್ಕಾರ ಬಹಳ ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಈ ನಿರ್ಧಾರ ಕೈಗೊಂಡಿದೆ. 8 ತಿಂಗಳ ನಂತರ ಶಾಲೆ ಕಾಲೇಜುಗಳಿಗೆ ಮರಳುತ್ತಿರುವ ವಿದ್ಯಾರ್ಥಿಗಳಿಗೆ, ಮತ್ತು ಅವರ ಪೋಷಕರಿಗೆ ನನ್ನ ಕಿವಿಮಾತು.

SSLC ಪರೀಕ್ಷೆ ಸಂದರ್ಭದಲ್ಲೂ ಇದೇ ರೀತಿ ಆತಂಕ ಇದ್ದದ್ದು ಸಹಜ. ಆದರೆ ಅತ್ಯಂತ ಯಶಸ್ವಿಯಾಗಿ ಪರೀಕ್ಷೆ ನಡೆಸುವ ಮೂಲಕ ಸರ್ಕಾರ ತನ್ನ ಬದ್ಧತೆ ನಿರೂಪಿಸಿತ್ತು. ಈಗಲೂ ಸಹ ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.’ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’ ಎಂಬುದೇ ಸರ್ಕಾರದ ಧ್ಯೇಯ ಎಂದು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಪೋಷಕರಲ್ಲಿ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಪೋಷಕರಲ್ಲಿ ನನ್ನ ಮನವಿ. ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಶಾಲೆಗೆ ಕಳುಹಿಸಿ. ಮಕ್ಕಳ ಆಗಮನಕ್ಕೆ ಅವರ ಶಾಲೆ ಕಾಯುತ್ತಿದೆ, ಶಿಕ್ಷಕರು ಮಕ್ಕಳನ್ನು ಸ್ವಾಗತಿಸಲು ಎದುರು ನೋಡುತ್ತಿದ್ದಾರೆ. ಸರ್ಕಾರ ಸದಾ ನಿಮ್ಮೊಂದಿಗಿದೆ. ಬನ್ನಿ, ಕೊರೊನಾ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ ಎಂದು ಟ್ವೀಟ್ ಮಾಡಿ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಿದ್ದಾರೆ.

10 ತಿಂಗಳ ಬಳಿಕ ಕಾಲೇಜಿಗೆ ಮರಳಿದ ವಿದ್ಯಾರ್ಥಿಗಳ ಮೇಲೆ ಹೂ ಚೆಲ್ಲಿ ಅದ್ಧೂರಿ ಸ್ವಾಗತ ಕೋರಿದ JDS ಶಾಸಕ!

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ