AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2022-23ನೇ ಶೈಕ್ಷಣಿಕ ವರ್ಷದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯಲ್ಲಿ ಇಳಿಕೆ

ಕಳೆದ ವರ್ಷಕ್ಕೆ ಹೋಲಿಸಿದರೆ 2022-23ನೇ ಶೈಕ್ಷಣಿಕ ವರ್ಷದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯಲ್ಲಿ ಶೇ 67 ರಷ್ಟು ಇಳಿಕೆಯಾಗಿದೆ.

2022-23ನೇ ಶೈಕ್ಷಣಿಕ ವರ್ಷದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯಲ್ಲಿ ಇಳಿಕೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Jul 24, 2023 | 11:41 AM

Share

ಬೆಂಗಳೂರು: ಕಳೆದ ವರ್ಷಕ್ಕೆ ಹೋಲಿಸಿದರೆ 2022-23ನೇ ಶೈಕ್ಷಣಿಕ ವರ್ಷದಲ್ಲಿ (Academic Year) ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯಲ್ಲಿ ಶೇ 67 ರಷ್ಟು ಇಳಿಕೆಯಾಗಿದೆ. 2022-23ನೇ ಸಾಲಿನಲ್ಲಿ ಕೇವಲ 5,945 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಇದು ಕಳೆದ ಐದು ವರ್ಷಗಳಲ್ಲಿ ಕಡಿಮೆ ಅಂಕಿಅಂಶವಾಗಿದೆ. ಆದರೆ 2021-22 ರಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ 18,461 ರಷ್ಟಿತ್ತು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಅಂಕಿಅಂಶಗಳಲ್ಲಿ ಬಹಿರಂಗವಾಗಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿಧಾನ ಪರಿಷತ್ತಿನಲ್ಲಿ ಮಂಡಿಸಿದ ಮಾಹಿತಿಯ ಪ್ರಕಾರ 2018-19 ಮತ್ತು 2022-23ರ ನಡುವೆ 57,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿದ್ದಾರೆ. ಈ ರೀತಿ ಶಾಲೆಯಿಂದ ಹೊರಗುಳಿಯಲು ವಲಸೆ, ಕೌಟುಂಬಿಕ ಕಲಹಗಳು, ಆರೋಗ್ಯ ಸಮಸ್ಯೆಗಳು, ದೈಹಿಕ ಅಂಗವೈಕಲ್ಯ ಹೀಗೆ ಅನೇಕ ಕಾರಣದಿಂದ ಹೊರಗುಳಿದಿದ್ದಾರೆ. ಇನ್ನು ಬುಡಕಟ್ಟು ಕುಟುಂಬಗಳ ಮಕ್ಕಳು, ಅನಾಥರು, ಅಲೆಮಾರಿಗಳು, ಬೀದಿ ಮಕ್ಕಳು ಅಥವಾ ಚಿಂದಿ ಆಯುವವರ ಮಕ್ಕಳು ಸಹ ಶಾಲೆಯಿಂದ ಹೊರಗುಳಿಯುವ ಸಾಧ್ಯತೆಯಿದೆ” ಎಂದು ಮಧು ಬಂಗಾರಪ್ಪ ಹೇಳಿದರು.

ಇದನ್ನೂ ಓದಿ: Dropout Rankings: ಹೈಸ್ಕೂಲ್​ನಲ್ಲೇ ವಿದ್ಯಾಭ್ಯಾಸಕ್ಕೆ ಗುಡ್​ಬೈ, ಮೇಘಾಲಯ ನಂ.1, ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ?

ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ ಮಾತನಾಡಿ, ರಾಜ್ಯದಲ್ಲಿ ಶಿಕ್ಷಣ ಹಕ್ಕು ಕಾಯ್ದೆ ಜಾರಿಯಲ್ಲಿ ಹಲವಾರು ಲೋಪದೋಷಗಳಿವೆ. ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್ ಮ್ಯಾಂಡಮಸ್ ನೀಡಿರುವುದರಿಂದ, ಸರಿಯಾದ ಅಂಕಿಅಂಶಗಳನ್ನು ನೀಡಲು ಸರ್ಕಾರವು ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಹೋಬಳಿ, ಕ್ಲಸ್ಟರ್, ಉಪಜಿಲ್ಲೆ ಮತ್ತು ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳನ್ನು ಹೊರತುಪಡಿಸಿ ವಿದ್ಯಾರ್ಥಿಗಳು ಶಾಲೆ ಬಿಡದಂತೆ ನೋಡಿಕೊಳ್ಳಲು ಮುಖ್ಯೋಪಾಧ್ಯಾಯ ಅಥವಾ ಮುಖ್ಯಶಿಕ್ಷಕಿಯರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ಬಂಗಾರಪ್ಪ ಸದನಕ್ಕೆ ತಿಳಿಸಿದರು. ಮಕ್ಕಳ ಹೊರಗುಳಿಯುವಿಕೆಯನ್ನು ತಡೆಯಲು 2022-23ರ ಶೈಕ್ಷಣಿಕ ವರ್ಷದಲ್ಲಿ 11 ಲಕ್ಷ ರೂ. ಮತ್ತು ಕಳೆದ ಐದು ವರ್ಷಗಳಲ್ಲಿ ಸುಮಾರು 10 ಕೋಟಿ ರೂಪಾಯಿಗಳನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಅವರು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:35 am, Mon, 24 July 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ