ಸೋಮವಾರದಿಂದ ಶಾಲೆ ಶುರು; ಏನು ಗೈಡ್​ಲೈನ್ಸ್? ಯಾವ ಜಿಲ್ಲೆಗಳಲ್ಲಿ ಶಾಲೆ ಆರಂಭ ಇಲ್ಲ? ಇಲ್ಲಿದೆ ಸಂಪೂರ್ಣ ವಿವರ

School Reopen: ಈಗಾಗಲೇ 16,850 ಪ್ರೌಢ ಶಾಲೆಗಳು ಹಾಗೂ 5,492 ಪದವಿ ಪೂರ್ವ ಕಾಲೇಜುಗಳಲ್ಲಿ ಶಾಲೆ ಪುನಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳ್ಳಗ್ಗೆ 10 ರಿಂದ 1:30 ರವರೆಗೆ ಮಾತ್ರ ತರಗತಿಗಳು ನಡೆಯಲಿವೆ. ಶಾಲಾರಂಭಕ್ಕೆ ಈಗಾಗಲೇ ಶಿಕ್ಷಣ ಇಲಾಖೆ ಗೈಡ್​ಲೈನ್ಸ್ ಬಿಡುಗಡೆ ಮಾಡಿದೆ.

ಸೋಮವಾರದಿಂದ ಶಾಲೆ ಶುರು; ಏನು ಗೈಡ್​ಲೈನ್ಸ್? ಯಾವ ಜಿಲ್ಲೆಗಳಲ್ಲಿ ಶಾಲೆ ಆರಂಭ ಇಲ್ಲ? ಇಲ್ಲಿದೆ ಸಂಪೂರ್ಣ ವಿವರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on: Aug 22, 2021 | 7:35 AM

ಬೆಂಗಳೂರು: ಸೋಮವಾರದಿಂದ (ಆಗಸ್ಟ್ 23) ಕರ್ನಾಟಕ ರಾಜ್ಯದಲ್ಲಿ ಶಾಲೆ ಶುರು ಆಗಲಿದೆ. ಕಳೆದ ಒಂದುವರೆ ವರ್ಷದಿಂದ ಬಂದ್ ಆಗಿದ್ದ ಶಾಲೆಗಳು ಪುನಾರಂಭ ಪಡೆಯಲಿವೆ. ಕೊರೊನಾ ಪ್ರಕರಣಗಳು ಇನ್ನೂ ಸಂಪೂರ್ಣ ಇಳಿಕೆಯಾಗಿಲ್ಲ. ಕೊವಿಡ್19 ಮೂರನೇ ಅಲೆ ಎಂಬ ಆತಂಕವೂ ಮುಂದಿದೆ. ಈ ಮಧ್ಯೆ, ಶಾಲೆ ಓಪನ್ ಆಗಲಿದೆ. ಹಂತ ಹಂತವಾಗಿ ಶಾಲೆ ಆರಂಭ ಆಗಲಿರುವ ಬಗ್ಗೆ ಸರ್ಕಾರ ಮಾಹಿತಿ ನೀಡಿದೆ. ನಾಳೆಯಿಂದ 9 ರಿಂದ 12 ನೇ ತರಗತಿಗಳಿಗೆ ಶಾಲೆ ಶುರು ಆಗಲಿದೆ. ಶೇಕಡಾ 2 ಕ್ಕಿಂತ ಹೆಚ್ಚು ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಲ್ಲಿ ನಾಳೆ (ಆಗಸ್ಟ್ 23) ಶಾಲೆ ಆರಂಭ ಆಗುವುದಿಲ್ಲ ಎಂದೂ ಮಾಹಿತಿ ನೀಡಲಾಗಿದೆ.

ಈಗಾಗಲೇ 16,850 ಪ್ರೌಢ ಶಾಲೆಗಳು ಹಾಗೂ 5,492 ಪದವಿ ಪೂರ್ವ ಕಾಲೇಜುಗಳಲ್ಲಿ ಶಾಲೆ ಪುನಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳ್ಳಗ್ಗೆ 10 ರಿಂದ 1:30 ರವರೆಗೆ ಮಾತ್ರ ತರಗತಿಗಳು ನಡೆಯಲಿವೆ. ಶಾಲಾರಂಭಕ್ಕೆ ಈಗಾಗಲೇ ಶಿಕ್ಷಣ ಇಲಾಖೆ ಗೈಡ್​ಲೈನ್ಸ್ ಬಿಡುಗಡೆ ಮಾಡಿದೆ.

ಶಾಲೆ ಆರಂಭವಾದ್ರೆ ಏನಿರುತ್ತೆ ಗೈಡ್​ಲೈನ್ಸ್; ಶಾಲೆಗಳ ಆರಂಭಕ್ಕೆ ಹೇಗಿದೆ ತಯಾರಿ?

  • ಶಾಲೆಯಲ್ಲಿ ಎರಡಕ್ಕಿಂತ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದರೆ ಒಂದು ವಾರ ಶಾಲೆ ಸೀಲ್​ಡೌನ್ ಆಗಲಿದೆ
  • ಶೇಕಡಾ 2 ಕ್ಕಿಂತ ಹೆಚ್ಚು ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಲ್ಲಿ ಶಾಲೆ ನಾಳೆ ಆರಂಭ ಆಗುವುದಿಲ್ಲ. ಶಾಲೆ ಬಂದ್ ಆಗಿರಲಿದೆ
  • ಕೊರೊನಾ ಲಕ್ಷಣ ಕಂಡು ಬರುವ ಮಗುವಿಗೆ ಶಾಲೆಯ ಪ್ರವೇಶ ಇರುವುದಿಲ್ಲ
  • ಶಾಲೆ, ಕಾಲೇಜು ಆವರಣದಲ್ಲಿ ಸಮಾಜಿಕ ಅಂತರ ಪಾಲಿಸುವುದು ಕಡ್ಡಾಯ
  • ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಂದ ಮಾಸ್ಕ್ ಪಾಲನೆ ಕಡ್ಡಾಯ
  • ಶಿಕ್ಷಕ ಹಾಗೂ ಶಾಲಾ ಸಿಬ್ಬಂದಿಗೆ ಕಡ್ಡಾಯ ವ್ಯಾಕ್ಸಿನ್ ಆಗಿರಬೇಕು
  • ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ತರಬೇಕು
  • ಶಾಲೆ-ಕಾಲೇಜಿಗೆ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯ ಇಲ್ಲ
  • ಆನ್​ಲೈನ್ ಹಾಗೂ ಆಫ್​ಲೈನ್ ಎರಡಕ್ಕೂ ವಿದ್ಯಾರ್ಥಿಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ
  • ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಮಾತ್ರ ಕಲಿಕೆಗೆ ಅವಕಾಶ ನೀಡಲಾಗಿದೆ
  • ಶಾಲೆಯ ಇಡೀ ಆವರಣ ಸ್ಯಾನಿಟೈಸ್ ಮಾಡಬೇಕು
  • ಕುಡಿಯುವ ನೀರಿನ ಸೌಲ್ಯಭ್ಯ ನೀಡಬೇಕು ಹಾಗೂ ಆವರಣ ಸ್ವಚ್ಛಗೊಳಿಸಬೇಕು
  • ಶಾಲೆಯ ಶೌಚಾಲಯವನ್ನು ಶುಚಿಗೊಳಿಸಿ ವಿದ್ಯಾರ್ಥಿಗಳಿಗೆ ಅನಕೂಲ ಮಾಡಬೇಕು
  • ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಸಾಮಾಜಿಕ ಅಂತರ ಕಾಪಾಡುವುದರ ಜೊತೆ ಆಗಾಗ ಕೈ ತೊಳೆಯಬೇಕು
  • ಮನೆಯಿಂದಲೇ ಊಟದ ಡಬ್ಬಿ ಹಾಗೂ ಕಾಯಿಸಿ ಆರಿಸಿದ ನೀರನ್ನು ತರಬೇಕು
  • ಬಿಸಿಯಾದ ಆಹಾರ ಪದಾರ್ಥ ಸೇವಿಸಬೇಕು
  • ಯಾವುದೇ ಪೆನ್ನು, ನೋಟ್ ಬುಕ್, ನೀರಿನ ಬಾಟಲ್ ಹಂಚಿಕೊಳ್ಳಬಾರದು
  • ವಿದ್ಯಾರ್ಥಿಗಳು ಸಾಮಾಜಿಕ ಅಂತರದೊಂದಿಗೆ ಶಾಲೆ ಪ್ರವೇಶ ಮಾಡಬೇಕು
  • ವಿದ್ಯಾರ್ಥಿಗಳು ಬೇಕಾದ ತಿಂಡಿ ಆಹಾರವನ್ನು ಮನೆಯಿಂದಲೇ ತರಬೇಕು
  • ಶಾಲಾ ಪ್ರವೇಶಕ್ಕೆ ಥರ್ಮಲ್ ಸ್ಕ್ಯಾನಿಂಗ್ ಮಾಡಬೇಕು

ಐದು ಜಿಲ್ಲೆಗಳಿಗೆ ಶಾಲೆ ಓಪನ್ ಭಾಗ್ಯ ಸಧ್ಯಕ್ಕಿಲ್ಲ ಶೇಕಡಾ 2 ಕ್ಕಿಂತ ಹೆಚ್ಚು ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಾ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಉಡಪಿ ಹಾಗೂ ಹಾಸನ ಜಿಲ್ಲೆಗಳಲ್ಲಿ ಸೋಮವಾರದಿಂದ ಶಾಲೆ ಆರಂಭ ಇರುವುದಿಲ್ಲ. ಕೇರಳ ಭಾಗದಲ್ಲಿ ಕೊರೊನಾ ಪ್ರಕರಣಗಳು ಏರಿಕೆ ಆಗಿರುವುದರಿಂದ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕೊವಿಡ್ ಕೇಸ್​​ಗಳ ಸಂಖ್ಯೆ ಇಳಿಕೆಯಾಗಿಲ್ಲ. ಹೀಗಾಗಿ ಪಾಸಿಟಿವಿಟಿ ದರ ನಿಗದಿತ ಪ್ರಮಾಣಕ್ಕೆ ಇಳಿಕೆಯಾಗಿಲ್ಲ. ಹೀಗಾಗಿ ಈ ಐದು ಜಿಲ್ಲೆಗಳಲ್ಲಿ ಸ್ಥಿತಿಗತಿ ಹೊಂದಿಕೊಂಡು ಶಾಲೆ ಪುನಾರಂಭ ಆಗಲಿದೆ.

ಇದನ್ನೂ ಓದಿ: ಕರ್ನಾಟಕದ ಕೊರೊನಾ ಹಾಟ್​ಸ್ಪಾಟ್ ಆಗುತ್ತಿದೆ ದಕ್ಷಿಣ ಕನ್ನಡ; ಕರಾವಳಿಯಲ್ಲಿ ಕೊವಿಡ್ ಹೆಚ್ಚಾಗಲು ಕಾರಣವೇನು?

ಶೇಕಡಾ 2ಕ್ಕಿಂತ ಹೆಚ್ಚು ಕೊರೊನಾ ಪ್ರಕರಣ ಕಂಡುಬಂದರೆ ಅಂತಹ ಶಾಲೆ ಮುಚ್ಚಲಾಗುವುದು: ಕೆ ಸುಧಾಕರ್

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ