ಖಾಸಗಿ ಶಾಲೆಗಳು ಅಗ್ನಿ ಸುರಕ್ಷತಾ ಪ್ರಮಾಣಪತ್ರ ಪಡೆಯಲು ಮುಂದಿನ ಶೈಕ್ಷಣಿಕ ವರ್ಷದವರೆಗೆ ಅವಕಾಶ ನೀಡಿ: ಹೈಕೋರ್ಟ್
ಖಾಸಗಿ ಅನುದಾನ ರಹಿತ ಶಾಲೆಗಳು ಕಟ್ಟಡ ಸುರಕ್ಷತೆ ಮತ್ತು ಅಗ್ನಿ ಸುರಕ್ಷತಾ ಪ್ರಮಾಣಪತ್ರಗಳನ್ನು ಪಡೆಯಲು ಮುಂದಿನ ಶೈಕ್ಷಣಿಕ ವರ್ಷದವರೆಗೆ ಕಾಲಾವಕಾಶ ನೀಡಬೇಕೆಂದು ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ. 2022ರ ಜೂನ್ನಲ್ಲಿ ಹೊರಡಿಸಲಾದ ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ಸರ್ಕಾರಿ ಶಾಲೆಗಳಿಗೂ ಈ ನಿಯಮ ಅನ್ವಯವಾಗಬೇಕೆಂದು ಸೂಚಿಸಿದೆ.
ಬೆಂಗಳೂರು, ಡಿಸೆಂಬರ್ 03: ಮಾನ್ಯತೆ ಪಡೆದುಕೊಳ್ಳಲು ಮತ್ತು ಮಾನ್ಯತೆ ನವೀಕರಣ ಮಾಡಿಕೊಳ್ಳಲು ಕಟ್ಟಡ ಸುರಕ್ಷತೆ ಮತ್ತು ಅಗ್ನಿ ಸುರಕ್ಷತಾ ಪ್ರಮಾಣಪತ್ರಗಳನ್ನು ಕಡ್ಡಾಯವಾಗಿ ಪಡೆದುಕೊಳ್ಳುವುದು ಸೇರಿದಂತೆ ಹಲವು ಷರತ್ತುಗಳ ಪಾಲನೆಗೆ ಖಾಸಗಿ ಅನುದಾನ ರಹಿತ ಶಾಲೆಗಳಿಗೆ (Schools) ಮುಂದಿನ ಶೈಕ್ಷಣಿಕ ವರ್ಷದವರೆಗೆ ಕಾಲಾವಕಾಶ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ (Karnataka Government) ಹೈಕೋರ್ಟ್ (High Court) ಸೂಚನೆ ನೀಡಿದೆ.
ಶಾಲೆಗಳಿಗೆ ಮಾನ್ಯತೆ ಪಡೆದುಕೊಳ್ಳಲು ಅಥವಾ ಮಾನ್ಯತೆ ನವೀಕರಣಕ್ಕೆ ಕಟ್ಟಡ ಸುರಕ್ಷತೆ ಹಾಗೂ ಅಗ್ನಿ ಸುರಕ್ಷತೆ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕೆಂದು 2022ರ ಜೂನ್ 6 ರಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿತ್ತು.
ಈ ಸುತ್ತೋಲೆ ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆ ಸಂಘ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿತ್ತು. ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಖಾಸಗಿ ಶಾಲೆಗಳಿಗೆ ಕಡ್ಡಾಯಗೊಳಿಸಿರುವುದು ಸರ್ಕಾರಿ ಶಾಲೆಗಳಿಗೂ ಅನ್ವಯವಾಗಬೇಕು. ಸುತ್ತೋಲೆ ಪಾಲಿಸಿ ಸರ್ಕಾರ ಮಾದರಿ ನಾಗರಿಕನಾಗಿ ನಡೆದುಕೊಳ್ಳಬೇಕು ಎಂದು ಪೀಠ ಅಭಿಪ್ರಾಯ ಪಟ್ಟಿತು.
ಇದನ್ನೂ ಓದಿ: 2025ನೇ ಸಾಲಿನ SSLC ಮತ್ತು 2nd ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಕಟ್ಟಡ ಸುರಕ್ಷತೆ ಮತ್ತು ಅಗ್ನಿ ಸುರಕ್ಷತೆಯ ಕ್ರಮಗಳನ್ನು ಖಾಸಗಿ ಶಾಲೆಗಳಲ್ಲಿ ಬಯಸುವ ಸರ್ಕಾರ, ಅದನ್ನು ತನ್ನ ಅಧೀನದಲ್ಲಿರುವ ಸರ್ಕಾರಿ ಶಾಲೆಗಳಲ್ಲೂ ಬಯಸಬೇಕು. ಈ ವಿಚಾರದಲ್ಲಿ ಸರ್ಕಾರಿ ಶಾಲೆಗಳಿಗೆ ವಿನಾಯತಿ ಸಲ್ಲದು ಎಂದು ಹೇಳಿದೆ.
ಸರ್ಕಾರಿ ಶಾಲೆಗಳಿಗೆ ಬಂತ್ತು ಫ್ರೀ ಟ್ಯೂಷನ್ ಭಾಗ್ಯ
ಇಷ್ಟು ದಿನ ಪೋಷಕರು ಸಾವಿರಾರು ರೂಪಾಯಿ ಹಣ ಖರ್ಚುಮಾಡಿ ತಮ್ಮ ಮಕ್ಕಳನ್ನು ಖಾಸಗಿ ಟ್ಯೂಷನ್ ಸೆಂಟರ್ ಗಳಿಗೆ ಸೇರಿಸುತ್ತಿದ್ದರು. ವಿದ್ಯಾರ್ಥಿ ಯಾವ ತರಗತಿಯ ವಿಷಯದಲ್ಲಿ ಹಿಂದೆ ಇದ್ದಾನೆ ಎಂದು ಅರ್ಥ ಮಾಡಿಕೊಂಡು ಸ್ಪೆಷಲ್ ಟ್ಯೂಷನ್ಗೆ ಕಳುಹಿಸುತ್ತಿದ್ದಾರೆ. ಈಗ ಈ ಭಾಗ್ಯ ಸರ್ಕಾರಿ ಶಾಲೆಗಳ ಮಕ್ಕಳಿಗೂ ಬರುತ್ತಿದೆ.
ಮುಂಜಾನೆ ಹಾಗೂ ಸಂಜೆ ಶಾಲೆಯ ಆರಂಭಕ್ಕೂ ಮೊದಲು ಒಂದು ಗಂಟೆ ಹಾಗೂ ಶಾಲೆ ಅವಧಿ ಮುಗದ ಬಳಿಕ ಒಂದು ಕ್ಲಾಸ್ ಶಿಕ್ಷಕರು ಮಕ್ಕಳಿಗೆ ವಿಶೇಷ ತರಗತಿ ತಗೆದುಕೊಳ್ಳುತ್ತಿದ್ದಾರೆ. 1 ರಿಂದ 12 ನೇ ತರಗತಿಯಲ್ಲಿನ ಮಕ್ಕಳಿಗೆ ಇದು ಆರಂಭವಾಗುತ್ತಿದೆ. ಯಾವ ತರಗತಿಯಲ್ಲಿ ಹಿನ್ನಡೆ ಇದ್ದಾರೆ ಎಂದು ಶಾಲಾ ಶಿಕ್ಷಕರೇ ಗುರುತಿಸಿ ಆ ವಿಷಯದಲ್ಲಿ ಹಿಂದಿರುವ ವಿದ್ಯಾರ್ಥಿಗಳನ್ನ ಈ ಸ್ಪೆಷಲ್ ಕ್ಲಾಸ್ಗೆ ಕಳುಹಿಸುತ್ತಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ