Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಶಿಕ್ಷಣ ರಂಗದಲ್ಲಿ ಇಂದು ಐತಿಹಾಸಿಕ ದಿನ, ಕಳಚಲಿದೆ ಕೊರೊನಾ ಗುಮ್ಮ! ಶಾಲೆಗಳಲ್ಲಿ ಪೂರ್ಣಾವಧಿಗೆ ಮಕ್ಕಳ ಹಾಜರಾತಿ

School reopening: ಇಂದಿನಿಂದ 6 ನೆಯ ತರಗತಿಯಿಂದ 10ನೆ ತರಗತಿಯ ಶಾಲಾ ಮಕ್ಕಳು ರಾಜ್ಯಾದ್ಯಂತ ಇಂದಿನಿಂದ ಶಾಲೆಗಳಿಗೆ ಪೂರ್ವಾವಧಿಗೆ ಹಾಜರಾಗಲಿದ್ದಾರೆ. ಇದರೊಂದಿಗೆ ಸುಮಾರು ಒಂದೆರಡು ವರ್ಷಗಳ ಕಾಲ ಕಾಡಿದ್ದ ಮಹಾಮಾರಿ ಕೊರೊನಾ ಗುಮ್ಮನ ಭೀತಿ ಕಳಚಲಿದೆ.

ರಾಜ್ಯ ಶಿಕ್ಷಣ ರಂಗದಲ್ಲಿ ಇಂದು ಐತಿಹಾಸಿಕ ದಿನ, ಕಳಚಲಿದೆ ಕೊರೊನಾ ಗುಮ್ಮ! ಶಾಲೆಗಳಲ್ಲಿ ಪೂರ್ಣಾವಧಿಗೆ ಮಕ್ಕಳ ಹಾಜರಾತಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Oct 18, 2021 | 8:41 AM

ಬೆಂಗಳೂರು: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಇಂದು ಚರಿತ್ರಾರ್ಹ ದಿನವಾಗಲಿದೆ. ಶಾಲಾ ಮಕ್ಕಳು ಸುಮಾರು ಒಂದೆರಡು ವರ್ಷಗಳ ಸುದೀರ್ಘ, ಅನಪೇಕ್ಷಿತ, ಅನಿವಾರ್ಯ, ಆತಂಕಮಯ ರಜೆ ಬಳಿಕ ಇಂದು ಪೂರ್ಣ ಪ್ರಮಾಣದಲ್ಲಿ ಮೊದಲಿನಂತೆ, ಸ್ವಚ್ಛಂದವಾಗಿ ಶಾಲೆಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಹೌದು ಇಂದಿನಿಂದ 6 ನೆಯ ತರಗತಿಯಿಂದ 10ನೆ ತರಗತಿಯ ಶಾಲಾ ಮಕ್ಕಳು ರಾಜ್ಯಾದ್ಯಂತ ಇಂದಿನಿಂದ ಶಾಲೆಗಳಿಗೆ ಪೂರ್ವಾವಧಿಗೆ ಹಾಜರಾಗಲಿದ್ದಾರೆ. ಇದರೊಂದಿಗೆ ಸುಮಾರು ಒಂದೆರಡು ವರ್ಷಗಳ ಕಾಲ ಕಾಡಿದ್ದ ಮಹಾಮಾರಿ ಕೊರೊನಾ ಗುಮ್ಮನ ಭೀತಿ ಕಳಚಲಿದೆ.

1ರಿಂದ 5ನೇ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಪ್ಲ್ಯಾನ್: ಈ ಮಧ್ಯೆ, 1ರಿಂದ 5ನೇ ತರಗತಿ ಶಾಲೆ ಆರಂಭ ಬಗ್ಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಕೊವಿಡ್ ತಾಂತ್ರಿಕ ಸಲಹಾ ಸಮಿತಿ, ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಜತೆ ಸಿಎಂ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ಶಾಲೆ ಆರಂಭ ದಿನಾಂಕ ಹೊರಬೀಳುವ ಸಾಧ್ಯತೆಯಿದೆ.

ವಿಶ್ವಸನೀಯ ಮೂಲಗಳ ಪ್ರಕಾರ ಅಕ್ಟೋಬರ್ 21ರಿಂದ ಕಿರಿಯ ಪ್ರಾಥಮಿಕ ಶಾಲೆ ಆರಂಭಿಸಲು ಚೀಮತನೆ ನಡದಿದ್ದು, ರಾಜ್ಯ ಶಿಕ್ಷಣ ಇಲಾಖೆ ಶಾಲೆ ಆರಂಭಿಸಲು ಸಿದ್ಧವಾಗಿದೆ ಎಂದು ತಿಳಿದುಬಂದಿದೆ. ಇನ್ನು ಅಕ್ಟೋಬರ್ 21ರಿಂದ ಶಾಲೆಗಳಲ್ಲಿ ಬಿಸಿಯೂಟ ವಿತರಣೆಯೂ ಆರಂಭವಾಗಲಿದೆ ಎಂದು ಶಿ್ಷಣ ಸಚಿವ ಬಿಸಿ ನಾಗೇಶ್​ ಈಗಾಗಲೇ ಪ್ರಕಟಿಸಿದ್ದಾರೆ. ಹೀಗಾಗಿ ಅ.21ರಿಂದಲೇ ಶಾಲೆ ಆರಂಭ ಮಾಡಲು ಪ್ಲ್ಯಾನ್ ಮಾಡಲಾಗಿದೆ.

Also Read: 1ರಿಂದ 8ನೇ ತರಗತಿಯವರೆಗೆ ಶಾಲೆ ಆರಂಭಿಸಬೇಕು; ರಾಜ್ಯ ಸರ್ಕಾರಕ್ಕೆ ಖಾಸಗಿ ಶಾಲಾ ಒಕ್ಕೂಟದಿಂದ ಒತ್ತಾಯ

(Schools reopening in karnataka from today october 18)

Published On - 7:49 am, Mon, 18 October 21

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ