ವಿದ್ಯಾಕಾಶಿಯಲ್ಲಿ ಮಾರ್ಚ್ 2 ರವರೆಗೆ ವಿಜ್ಞಾನ ಜಾತ್ರೆ; ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಿ..

|

Updated on: Feb 26, 2021 | 4:05 PM

ಇಂದು ಬೆಳಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆದಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ, ಕರ್ನಾಟಕ ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಕೆ.ಟಿ. ಹನುಮಂತಪ್ಪ ಅತಿಥಿಗಳಾಗಿ ಆಗಮಿಸಿದ್ದಾರೆ.

ವಿದ್ಯಾಕಾಶಿಯಲ್ಲಿ ಮಾರ್ಚ್ 2 ರವರೆಗೆ ವಿಜ್ಞಾನ ಜಾತ್ರೆ; ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಿ..
ಕರ್ನಾಟಕ ವಿಶ್ವವಿದ್ಯಾನಿಲಯದ ಆವರಣ
Follow us on

ಧಾರವಾಡ: ಕರ್ನಾಟಕ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರ ಅನೇಕ ವಿಷಯಗಳಿಗೆ ಚಿರಪರಿಚಿತ. ಅದರಲ್ಲೂ ಮಕ್ಕಳಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ಕೇಂದ್ರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಲೇ ಇರುತ್ತದೆ. ಇದೀಗ ಇದೇ ಮಾದರಿಯ ಮತ್ತೊಂದು ಕಾರ್ಯಕ್ರಮವನ್ನು ಆಯೋಜಿಸಿದ್ದು, ಇಂದಿನಿಂದ ಮಾರ್ಚ್ 2 ರವರೆಗೆ ವಿಜ್ಞಾನ ಕೇಂದ್ರದಲ್ಲಿ ವಿಜ್ಞಾನ ಜಾತ್ರೆ ನಡೆಯಲಿದೆ.

ಇಂದು ಬೆಳಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆದಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ, ಕರ್ನಾಟಕ ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಕೆ.ಟಿ. ಹನುಮಂತಪ್ಪ ಅತಿಥಿಗಳಾಗಿ ಆಗಮಿಸಿದ್ದಾರೆ. ಡಿಡಿಪಿಐ ಮೋಹನಕುಮಾರ ಹಂಚಾಟೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಎ. ಖಾಜಿ, ಉಮೇಶ ಬೊಮ್ಮಕ್ಕನವರ ಉಪಸ್ಥಿತರಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಕೇಶವ ಬುಲ್‌ಬುಲೆ, ಮಹೇಶ ವಿ.ಎಸ್. ಈ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಇನ್ನು ಕವಿವಿ ಕುಲಪತಿ ಡಾ. ಕೆ.ಬಿ. ಗುಡಸಿ ಅಧ್ಯಕ್ಷತೆ ವಹಿಸಿದ್ದಾರೆ.

ವಿಜ್ಞಾನ ಕೇಂದ್ರದ ವಾರ್ಷಿಕೋತ್ಸವ ಹಾಗೂ ರಾಷ್ಟ್ರೀಯ ಗಣಿತ ದಿನ:
ಫೆ. 27ರಂದು ವಿಜ್ಞಾನ ಕೇಂದ್ರದ ವಾರ್ಷಿಕೋತ್ಸವ ಹಾಗೂ ರಾಷ್ಟ್ರೀಯ ಗಣಿತ ದಿನ ನಿಮಿತ್ತ ಬೆಳಗ್ಗೆ 10 ಗಂಟೆಗೆ ಗಣಿತ ಶಿಕ್ಷಕರಿಗೆ ಕಾರ್ಯಾಗಾರ ನಡೆಯಲಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಡಾ. ಅಶೋಕ ಶೆಟ್ಟರ್, ಡಾ. ಕೆ.ಟಿ. ಹನುಮಂತಪ್ಪ, ಡಾ. ಆನಂದ ಪಾಂಡುರಂಗಿ, ಡಾ. ಎಚ್. ನಿರಂಜನ ಮೂರ್ತಿ ಆಗಮಿಸಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಟಿ.ಕೆ. ಪ್ರಸನ್ನಮೂರ್ತಿ, ವಿ.ಎಸ್.ಎಸ್. ಶಾಸ್ತ್ರಿ ಪಾಲ್ಗೊಳ್ಳಲಿದ್ದಾರೆ.

ಧಾರವಾಡ ವಿಶ್ವವಿದ್ಯಾಲಯದ ಆವರಣ

ರಾಷ್ಟ್ರೀಯ ವಿಜ್ಞಾನ ದಿನಾಚರಣೆ:
ಫೆಬ್ರವರಿ 28ರಂದು ಬೆಳಗ್ಗೆ 10 ಗಂಟೆಗೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಡೆಯಲಿದ್ದು, ಗುಲ್ಬರ್ಗಾವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಡಾ. ಬಿ.ಜಿ. ಮೂಲಿಮನಿ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅತಿಥಿಗಳಾಗಿ ಪ್ರೊ. ರಂಗಸ್ವಾಮಿ, ಡಾ. ಎಸ್.ಎಂ. ಶಿವಪ್ರಸಾದ ಆಗಮಿಸಲಿದ್ದಾರೆ. ಮಾರ್ಚ್ 1ರಂದು ಪ್ರೌಢಶಾಲೆ ಶಿಕ್ಷಕರಿಗೆ ಗಣಿತ ಮತ್ತು ವಿಜ್ಞಾನ ಮಾದರಿ ತಯಾರಿಕೆ ಸ್ಪರ್ಧೆ ನಡೆಯಲಿದ್ದು, ಕರ್ನಾಟಕ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಎಚ್.ಬಿ. ವಾಲೀಕರ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಪ್ರೊ. ಪಿ.ಎಂ. ಪಾಟೀಲ, ಸವಿತಾ ಅಮರಶೆಟ್ಟಿ ಆಗಮಿಸಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಡಾ. ಎಚ್.ಬಿ. ವಾಲೀಕಾರ ಆಗಮಿಸಲಿದ್ದಾರೆ.

ವಿಜ್ಞಾನ ಜಾತ್ರೆ

ಮಾರ್ಚ್ 2ರಂದು ವಿಜ್ಞಾನ ಉಪನ್ಯಾಸ ಹಾಗೂ ಚಿತ್ರಗಳ ಮೂಲಕ ವಿಜ್ಞಾನ ಸಂವಹನ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ಪಿ.ಬಿ. ಗಾಯಿ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಶಾಸಕ ಅರವಿಂದ ಬೆಲ್ಲದ ಆಗಮಿಸಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಸುರೇಶ ಕುಲಕರ್ಣಿ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ಡಿಎನ್‌ಎ ಕೇಂದ್ರದ ಮುಖ್ಯಸ್ಥ ಪ್ರೊ. ಪ್ರಮೋದ ಗಾಯಿ ಅವರು ಮಕ್ಕಳಿಗೆ ಪ್ರಾಯೋಗಿಕವಾಗಿ ಡಿಎನ್‌ಎ ಕುರಿತು ಉಪನ್ಯಾಸ ನೀಡಲಿದ್ದಾರೆ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರ ಯಾವತ್ತೂ ಸಾರ್ವಜನಿಕರಿಗೆ, ಅದರಲ್ಲೂ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಹುಟ್ಟಿಸುವಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ಇದೀಗ ಅಂತಹವುಗಳ ಸಾಲಿಗೆ ಈ ವಿಜ್ಞಾನ ಜಾತ್ರೆ ಸೇರ್ಪಡೆಯಾಗಿದೆ. 5 ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಭಾಗವಹಿಸಿ, ಇದರ ಉಪಯೋಗ ಪಡೆಯಬೇಕು ಎಂದು ಕರ್ನಾಟಕ ವಿಶ್ವವಿದ್ಯಾನಿಲಯ ಕೇಂದ್ರದ‌ ನಿರ್ದೇಶಕ ಡಾ. ವೀರಣ್ಣ ಬೋಳಿಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: ಧಾರವಾಡ ಜಿಲ್ಲೆಯ ರಂಗಾಯಣದ ರಂಗ ನವಮಿ ನಾಟಕೋತ್ಸವಕ್ಕೆ ಚಾಲನೆ

Published On - 3:17 pm, Fri, 26 February 21