AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿಗಳಿಗೆ ಎಸ್‌ಸಿಪಿ, ಟಿಎಸ್‌ಪಿ ಹಣ ನೀಡೋದಕ್ಕೆ ವಿರೋಧ: ಸಚಿವ ಮಹದೇವಪ್ಪ ನಿವಾಸದಲ್ಲಿ ದಲಿತ ನಾಯಕರ ಸಭೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭಿವೃದ್ಧಿಗೆ ಮೀಸಲಾದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ ಇದೀಗ ಆ ಬಗ್ಗೆ ಚರ್ಚಿಸಲು ಕಾಂಗ್ರೆಸ್​ನ ದಲಿತ ನಾಯಕರು ಸಭೆ ಸೇರಿದ್ದು, ಗ್ಯಾರಂಟಿಗಳಿಗೆ ಹಣ ಬಳಸದಂತೆ ಮನವಿ ಮಾಡಲು ನಿರ್ಧರಿಸಿದ್ದಾರೆ. ಒಳ ಮೀಸಲಾತಿ ಮತ್ತು ಹೆಚ್ಚಿನ ಅನುದಾನಕ್ಕಾಗಿ ಮುಖ್ಯಮಂತ್ರಿಯನ್ನು ಭೇಟಿ ಮಾಡಲು ನಿಯೋಗ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಗ್ಯಾರಂಟಿಗಳಿಗೆ ಎಸ್‌ಸಿಪಿ, ಟಿಎಸ್‌ಪಿ ಹಣ ನೀಡೋದಕ್ಕೆ ವಿರೋಧ: ಸಚಿವ ಮಹದೇವಪ್ಪ ನಿವಾಸದಲ್ಲಿ ದಲಿತ ನಾಯಕರ ಸಭೆ
ಮಹದೇವಪ್ಪ ನಿವಾಸದಲ್ಲಿ ಸಭೆ
Pramod Shastri G
| Updated By: Ganapathi Sharma|

Updated on:Mar 18, 2025 | 9:12 AM

Share

ಬೆಂಗಳೂರು, ಮಾರ್ಚ್ 18: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (SC ST) ಅಭಿವೃದ್ಧಿಗೆ ಮೀಸಲಿದ್ದ 25 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ರಾಜ್ಯ ಸರ್ಕಾರ ಗ್ಯಾರಂಟಿಗೆ (Gurantee Schemes) ಬಳಸಿದೆ ಎಂದು ಆರೋಪಿಸಿ ಬಿಜೆಪಿ ಹೆಜ್ಜೆ ಹೆಜ್ಜೆಗೂ ಹೋರಾಟ ಮಾಡುತ್ತಿದೆ. ಇದರ ಬೆನ್ನಲ್ಲೇ, ಸಚಿವ ಮಹದೇವಪ್ಪ (HC Mahadevappa) ನಿವಾಸದಲ್ಲಿ ದಲಿತ ನಾಯಕರೆಲ್ಲಾ ಸೇರಿ ಚರ್ಚೆ ನಡೆಸಿದ್ದಾರೆ. ಗ್ಯಾರಂಟಿಗಳಿಗೆ ದಲಿತರ ಹಣ ನೀಡುವುದರಿಂದ ಎಸ್​ಸಿಪಿ, ಟಿಎಸ್​ಪಿ ಯೋಜನೆಯ ಮೂಲ ಉದ್ದೇಶ ಈಡೇರಿದಂತೆ ಆಗುವುದಿಲ್ಲ. ಹಾಗಾಗಿ ಸರ್ಕಾರಕ್ಕೆ ಗ್ಯಾರಂಟಿಗಳಿಗೆ ಎಸ್​ಸಿಪಿ, ಟಿಎಸ್​ಪಿ ಹಣ ನೀಡದಂತೆ ಮನವಿ ಮಾಡುವ ಬಗ್ಗೆ ಕೆಲ ಹಿರಿಯ ಶಾಸಕರು ಸಭೆಯಲ್ಲಿ ಸಲಹೆ ನೀಡಿದ್ದಾರೆ.

ದಲಿತ ನಾಯಕರ ಸಭೆಯಲ್ಲಿ ಚರ್ಚೆ ಆಗಿದ್ದೇನು?

ಎಲ್ಲಾ ಇಲಾಖೆಗಳಿಂದ ದಲಿತ ಸಮಾಜಕ್ಕೆ 42 ಸಾವಿರ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ವಾಸ್ತವದಲ್ಲಿ ಕೇವಲ 4 ಸಾವಿರ ಕೋಟಿ ರೂಪಾಯಿ ಮಾತ್ರ ಸಮಾಜಕ್ಕೆ ತಲುಪುತ್ತಿದೆ. ವಿವಿಧ ಇಲಾಖೆಗಳ ಫಲಾನುಭವಿ ಯೋಜನೆಗಳಿಗೆ ಸರಿಸುಮಾರು 2 ಲಕ್ಷಕ್ಕಿಂತ ಹೆಚ್ಚು ಅರ್ಜಿ ಸಲ್ಲಿಕೆ ಆಗುತ್ತದೆ. ಆದರೆ ಮೀಸಲಿಟ್ಟ ಹಣದಲ್ಲಿ ಶೇಕಡ 2ರಷ್ಟು ಮಾತ್ರ ಸಮುದಾಯಕ್ಕೆ ತಲುಪುತ್ತಿದೆ. ಈ ಪ್ರಮಾಣ ಕನಿಷ್ಠ ಶೇಕಡ 40 ರಷ್ಟಾದರೂ ಏರಿಕೆಯಾದರೆ ದಲಿತ ಸಮುದಾಯಕ್ಕೆ ಲಾಭಕರ ಎಂದು ಸಭೆಯಲ್ಲಿ ನಾಯಕರು ಚರ್ಚಿಸಿದ್ದಾರೆ.

ದಲಿತ ನಾಯಕರ ಸಭೆಯಲ್ಲಿ ಒಳ ಮೀಸಲಾತಿ ಚರ್ಚೆ

2011ರ ಜನಗಣತಿ ಆಧಾರದಲ್ಲಿ ಒಳ ಮೀಸಲಾತಿ ಘೋಷಣೆ ಬಗ್ಗೆ ಕೆಲವರ ಬೇಡಿಕೆ ಇದೆ. ಆದರೆ ಕಳೆದ 15 ವರ್ಷಗಳಲ್ಲಿ ಸಮುದಾಯದ ಸಂಖ್ಯೆ ಸಾಕಷ್ಟು ಏರಿಕೆ ಆಗಿದೆ. ಹೀಗಾಗಿ ಜನಗಣತಿಯ ಅಂಕಿಅಂಶ ಸದ್ಯಕ್ಕೆ ಯಾರ ಬಳಿಯೂ ಇಲ್ಲ. ಪ್ರಸ್ತುತ ಜನಸಂಖ್ಯೆ ಆಧರಿಸಿ ಮೀಸಲಾತಿ ಪ್ರಕಟಿಸಬೇಕು. ಹಾಗಾಗಿ ಸರ್ಕಾರ ವೈಜ್ಞಾನಿಕವಾಗಿ ಒಳ ಮೀಸಲಾತಿ ನೀಡುವ ಬಗ್ಗೆ ಚಿಂತಿಸಬೇಕು. ಇನ್ನೊಂದೆಡೆ ಬಿಜೆಪಿ, ಮಾದಿಗ ಸಮಾಜದ ಹೋರಾಟಕ್ಕೆ ಸಾಥ್ ನೀಡುತ್ತಿದೆ. ರಾಜಕೀಯವಾಗಿ ಹೋರಾಟ ರೂಪುಗೊಳ್ಳುವಂತೆ ಮಾಡುತ್ತಿದೆ. ಈ ಸಮಯದಲ್ಲಿ ಮಾದಿಗ ಸೇರಿದಂತೆ ಎಲ್ಲಾ ದಲಿತ ಒಳ ಸಮುದಾಯಕ್ಕೆ ಸೂಕ್ತ ಮಾಹಿತಿ ನೀಡಬೇಕು. ಸಮಾಜದ ಒಳತಿಗಾಗಿ ಕೈಗೊಳ್ಳುವ ಕ್ರಮದ ಬಗ್ಗೆ ಸಂಪೂರ್ಣವಾಗಿ ವಿವರಿಸಬೇಕು ಎಂದು ದಲಿತ ನಾಯಕರು ಸಭೆಯಲ್ಲಿ ಸಲಹೆ ನೀಡಿದರು.

ಇದನ್ನೂ ಓದಿ
Image
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ
Image
ಕೇವಲ ಮುಸ್ಲಿಮರಿಗೆ ಮಾತ್ರ ಮೀಸಲಾತಿ ಎಂದು ಹೇಳಿದವರು ಯಾರು? ಡಿಕೆ ಶಿವಕುಮಾರ್
Image
ವಿಜಯೇಂದ್ರ-ಯತ್ನಾಳ್​ ಬಣದ ನಡುವೆ ಮತ್ತೊಂದು ಕದನ ಶುರು: ಹೈಕಮಾಂಡ್ ಮೌನ!
Image
ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ತರಲು ಸಂಪುಟ ಒಪ್ಪಿಗೆ

ಇದನ್ನೂ ಓದಿ: ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ತೇಜಸ್ವಿ ಸೂರ್ಯ, ರಾಷ್ಟ್ರ ಮಟ್ಟದಲ್ಲಿ ಹೋರಾಟ

ಸದ್ಯ ದಲಿತ ಸಮಾಜಕ್ಕೆ ಹೆಚ್ಚಿನ ಅನುದಾನ ಕೋರಿ ಹಾಗೂ ಒಳ ಮೀಸಲಾತಿ ವಿಚಾರದಲ್ಲಿ ಸೂಕ್ತವಾದ ನಿರ್ಣಯ ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಬಳಿ ನಿಯೋಗ ಕೊಂಡೊಯ್ಯಲು ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ದಲಿತ ಸಚಿವರು ಶೀಘ್ರದಲ್ಲಿ ಮುಖ್ಯಮಂತ್ರಿ ಬಳಿ ನಿಯೋಗ ಕೊಂಡೊಯ್ಯಲು ನಿರ್ಧರಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:44 am, Tue, 18 March 25

ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ