AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ ಹೆಚ್ಚಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ILI ಮತ್ತು SARI ಪ್ರಕರಣಗಳ ಕಡ್ಡಾಯ ಪರೀಕ್ಷೆ, ಔಷಧ ಹಾಗೂ ಲಸಿಕೆಗಳ ಸಂಗ್ರಹ, ವೆಂಟಿಲೇಟರ್ ಸಿದ್ಧತೆ ಮತ್ತು ಸಮುದಾಯದಲ್ಲಿ ಜಾಗೃತಿ ಮೂಡಿಸಲು ಸೂಚಿಸಲಾಗಿದೆ. ಮಕ್ಕಳು, ಗರ್ಭಿಣಿಯರು ಸೇರಿ ಎಲ್ಲರೂ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ನೀಡಲಾಗಿದೆ.

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ
ಪ್ರಾತಿನಿಧಿಕ ಚಿತ್ರ
Vinay Kashappanavar
| Edited By: |

Updated on:Dec 21, 2025 | 7:20 AM

Share

ಬೆಂಗಳೂರು, ಡಿಸೆಂಬರ್​​ 21: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ಈ ಹವಾಮಾನ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸದ್ಯ ಸೀಸನಲ್ ಫ್ಲೂ (seasonal flu) ಭೀತಿ ಶುರುವಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆಯಿಂದ (Karnataka Health Department) ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಡಿಸೆಂಬರ್​​ ಸೇರಿದಂತೆ ಜನವರಿಯಿಂದ ಮಾರ್ಚ್​​ ವರೆಗೆ ಸೀಸನಲ್ ಫ್ಲೂ ಹೆಚ್ಚಳ ಭೀತಿ ಹಿನ್ನಲೆ ಸೂಕ್ತ ಕ್ರಮಕೈಗೊಳ್ಳುವಂತೆ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಎಲ್ಲಾ ಲ್ಯಾಬ್‌ಗಳಲ್ಲಿ ಸೂಕ್ತ ಟೆಸ್ಟಿಂಗ್ ಕಿಟ್‌ಗಳನ್ನು ಇರಿಸಿಕೊಳ್ಳುವುದು, ಫ್ಲೂ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸರಿಯಾದ ಸಮಯದಲ್ಲಿ ಮಾನಿಟರಿಂಗ್‌ಗೆ ಸೂಚಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕದಾದ್ಯಂತ ಇಂದಿನಿಂದ ಡಿ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

ಇನ್ನು ಸೋಂಕಿತರ ಎಂಜಿಲಿನಿಂದ ಸೋಂಕು ಹರಡುತ್ತದೆ. ಮಕ್ಕಳು, ಹಿರಿಯರು, ಗರ್ಭಿಣಿಯರು, ಔಷಧಿಗಳ ಮೇಲೆ ಅವಲಂಬಿತರಾದವರಿಗೆ ಹೆಚ್ಚಿನ ಅಪಾಯವಿದೆ. ಸೀಸನಲ್ ಫ್ಲೂ ತಗುಲಿದರೆ ಆಸ್ಪತ್ರೆಗೆ ದಾಖಲಾಗುವ ಅಪಾಯವಿದೆ. ಹೀಗಾಗಿ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ.

ಸೀಸನಲ್ ಫ್ಲೂ ಲಕ್ಷಣಗಳು

ಜ್ವರ, ಕೆಮ್ಮು, ಕೆಂಪು ಗುಳ್ಳೆ, ಹಸಿವು ಆಗದಿರುವುದು, ಮೈ-ಕೈ ನೋವು, ಶೀತ, ಒಣ ಕೆಮ್ಮು ಇದರ ಪ್ರಮುಖ ಗುಣಲಕ್ಷಣಗಳು. ಸೀಸನಲ್ ಫ್ಲೂ ಸಾಮಾನ್ಯವಾಗಿ ಒಂದು ವಾರಗಳ ಕಾಲ ಇರಬಹುದು ಅಥವಾ ಕೆಲವೊಮ್ಮೆ 3 ವಾರಗಳ ಕಾಲ ಇರಬಹುದು.

ಆರೋಗ್ಯ ಇಲಾಖೆ ಸೂಚನೆಗಳೇನು?

  • ಪ್ರತಿ ದಿನ ಕನಿಷ್ಟ 5ರಷ್ಟು ಐಎಲ್ಐ ಕೇಸ್, 100ರಷ್ಟು ಸಾರಿ (SARI) ಕೇಸ್​​ಗಳ ಪರೀಕ್ಷೆಗೆ ಸೂಚನೆ.
  • ಎಲ್ಲಾ ಪ್ರಯೋಗಾಲಯಗಳಲ್ಲಿ ಸೂಕ್ತ ಟೆಸ್ಟಿಂಗ್ ಕಿಟ್​​ಗಳನ್ನು ಇರಿಸಿಕೊಳ್ಳುವುದು
  • ಪಿಪಿಇ ಕಿಟ್​​ಗಳು, ಎನ್95 ಮಾಸ್ಕ್, oseltamivir ಮಾತ್ರೆಗಳು ಸೇರಿ ಅಗತ್ಯ ಔಷಧಗಳ ಶೇಖರಣೆಗೆ ಸೂಚನೆ
  • ಇನ್ಫ್ಲೂಯೆನ್ಸ್ ಲಸಿಕೆ ಶೇಖರಣೆ
  • ಹೆಲ್ತ್ ಕೇರ್ ವರ್ಕರ್ಸ್, ಗರ್ಭಿಣಿಯರು, ಹೆಚ್ಚಿನ ಅಪಾಯವುಳ್ಳ ರೋಗಿಗಳು ಸೂಕ್ತ ಲಸಿಕೆ ಪಡೆಯುವಂತೆ ಸಲಹೆ
  • ಕ್ಲಿನಿಕಲ್ ಮ್ಯಾನೇಜ್ಮೆಂಟ್ ಹಾಗೂ ಕ್ರಿಟಿಕಲ್ ಕೇರ್ ಸಿದ್ಧತೆ
  • ವೆಂಟಿಲೇಟರ್​​ಗಳ ಸಿದ್ಧತೆಗೆ ಸಲಹೆ
  • ಜಾಗೃತಿ ಮೂಡಿಸುವುದು ಮತ್ತು ಸರಿಯಾದ ಸಮಯದಲ್ಲಿ ಮಾನಿಟರಿಂಗ್​​ಗೆ ಕರೆ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:19 am, Sun, 21 December 25

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?