ಗ್ರಾಮ ಪಂಚಾಯಿತಿ ಚುನಾವಣೆ: ಡಿ.30 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ..
ಮುಂಜಾನೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಕೊರೊನಾ ವೈರಸ್ ಪ್ರಕರಣಗಳು ಇನ್ನೂ ಜೀವಂತವಾಗಿರುವುದರಿಂದ ಮತಗಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯ.
ಬೆಂಗಳೂರು: ಇಂದು ರಾಜ್ಯದಲ್ಲಿ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ನಡೆಯುತ್ತಿದೆ. 109 ತಾಲೂಕುಗಳ 2,709 ಗ್ರಾಮ ಪಂಚಾಯತಿಗಳಿಗೆ ಮತದಾನ ಆಗಲಿದೆ.
ಒಟ್ಟು 43,291 ಸ್ಥಾನಗಳಿಗೆ ಮತದಾನ ನಡೆಯಬೇಕಿತ್ತು. 3,697 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ, 39,378 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಕಣದಲ್ಲಿರುವ 1,05,431 ಅಭ್ಯರ್ಥಿಗಳಿದ್ದಾರೆ. ಅಂದಾಜು ಮತಗಟ್ಟೆಗಳ ಸಂಖ್ಯೆ 20,728 ಇದ್ದು, ಒಟ್ಟು ಮತದಾರರು 1,40,65,775 ಇದ್ದಾರೆ.
ಮುಂಜಾನೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಕೊರೊನಾ ವೈರಸ್ ಪ್ರಕರಣಗಳು ಇನ್ನೂ ಜೀವಂತವಾಗಿರುವುದರಿಂದ ಮತಗಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯ. ಇನ್ನು, ಕೊರೊನಾ ಪಾಸಿಟಿವ್ ಇರುವ ವ್ಯಕ್ತಿಗಳಿಗೆ ಕೊನೆಯ ಒಂದು ಗಂಟೆ ಅವಧಿಯಲ್ಲಿ ಮತದಾನಕ್ಕೆ ಅವಕಾಶ ಮಾಡಿಕೊಡಲು ಚುನಾವಣಾ ಆಯೋಗ ನಿರ್ಧರಿಸಿದೆ.
ಡಿಸೆಂಬರ್ 30ಕ್ಕೆ ಫಲಿತಾಂಶ ಡಿಸೆಂಬರ್ 22ರಂದು ಮೊದಲ ಹಂತದ ಚುನಾವಣೆ ನಡೆದಿತ್ತು. ಒಟ್ಟು 43,238 ಸ್ಥಾನಗಳಿಗೆ ಮತದಾನ ನಡೆದಿದ್ದು, 1,17,383 ಅಭ್ಯರ್ಥಿಗಳು ಕಣದಲ್ಲಿದ್ದರು. ಡಿ.30ರಂದು ಮತ ಎಣಿಕೆ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಫುಲ್ ಜಾಮ್ ಇಂದು ಗ್ರಾ.ಪಂ. ಚುನಾವಣೆ 2ನೇ ಹಂತದ ಮತದಾನ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಬೆಂಗಳೂರಿನಿಂದ ಊರುಗಳಿಗೆ ಜನರು ಸಾಕಷ್ಟು ಸಂಖ್ಯೆಯಲ್ಲಿ ತೆರಳಿದ್ದಾರೆ. ಯಶವಂತಪುರ, ಗೊರಗುಂಟೆಪಾಳ್ಯ, ಸಿಎಂಟಿ ಜಂಕ್ಷನ್, ಜಾಲಹಳ್ಳಿ ಕ್ರಾಸ್ನಲ್ಲಿ ಪ್ರಯಾಣಿಕರ ಜನಜಂಗುಳಿ ಕಂಡು ಬಂದಿತ್ತು.
ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧಿಸಿದ ಜರ್ಮಲಿ ರಾಜ ವಂಶಸ್ಥರು.. ಪ್ರಜಾಪ್ರಭುತ್ವದಲ್ಲಿ ದೊರೆಗಳ ಅದೃಷ್ಟ ಪರೀಕ್ಷೆ