Covid 19 Vaccination: ಇಂದಿನಿಂದ ಎರಡನೇ‌ ಹಂತದ ಕೊರೊನಾ ಲಸಿಕಾ ಅಭಿಯಾನ ಶುರು.. 60 ವರ್ಷ ಮೇಲ್ಪಟ್ಟವರಿಗೆ ಕೊಡಲಿದ್ದಾರೆ ಲಸಿಕೆ

ದೆಹಲಿ: ಎರಡನೇ‌ ಹಂತದ ಕೊರೊನಾ ಲಸಿಕಾ ಅಭಿಯಾನಕ್ಕೆ‌ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ ದೇಶಾದ್ಯಂತ ಎರಡನೇ‌ ಹಂತದ ಲಸಿಕಾ‌ ಅಭಿಯಾನ ಆರಂಭವಾಗಲಿದ್ದು, 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ‌ ಸಿಗಲಿದೆ. ಅಲ್ಲದೇ ಖಾಸಗಿ ಕೇಂದ್ರಗಳಲ್ಲೂ ವ್ಯಾಕ್ಸಿನ್ ಸಿಗಲಿದೆ. ಆದ್ರೆ, ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಲಸಿಕೆ ಸಿಗಲಿದೆ. ಖಾಸಗಿ ಕೇಂದ್ರಗಳಲ್ಲಿ ದುಡ್ಡು ಕೊಟ್ಟು ಇಂಜೆಕ್ಷನ್ ತೆಗೆದುಕೋಳ್ಳಬೇಕು.

Covid 19 Vaccination: ಇಂದಿನಿಂದ ಎರಡನೇ‌ ಹಂತದ ಕೊರೊನಾ ಲಸಿಕಾ ಅಭಿಯಾನ ಶುರು.. 60 ವರ್ಷ ಮೇಲ್ಪಟ್ಟವರಿಗೆ ಕೊಡಲಿದ್ದಾರೆ ಲಸಿಕೆ
ಕೊರೊನಾ ಲಸಿಕೆ ಹಾಕಿಸಿಕೊಳ್ಳುತ್ತಿರುವುದು
Follow us
ಆಯೇಷಾ ಬಾನು
|

Updated on:Mar 01, 2021 | 8:51 AM

ಕೊರೊನಾ ವಿರುದ್ಧದ ಸಮರದಲ್ಲಿ ಭಾರತ ಮಹತ್ವದ ಹೆಜ್ಜೆ ಇಡ್ತಿದೆ. ಕೊರೊನಾ ಲಸಿಕಾ ಅಭಿಯಾನ ಯಶಸ್ವಿಯಾಗಿ ನಡೀತಿದೆ. ಮೊದಲ ಹಂತದಲ್ಲಿ ಮೂರು ಕೋಟಿ ಕೊರೊನಾ ವಾರಿಯರ್ಸ್‌ಗೆ ವ್ಯಾಕ್ಸಿನ್ ಹಂಚಿಕೆ ಮಾಡಲು ಪ್ಲ್ಯಾನ್ ಮಾಡಲಾಗಿತ್ತು. ಇದರಲ್ಲಿ ಶೇಕಡಾ 50ರಷ್ಟು ವಾರಿಯರ್ಸ್‌ಗೆ ವ್ಯಾಕ್ಸಿನ್ ನೀಡಲಾಗಿದೆ. ಈಗ ಇಂದಿನಿಂದ ಎರಡನೇ ಹಂತದ ಕೊರೊನಾ ಲಸಿಕಾ ಕಾರ್ಯಕ್ರಮ ಆರಂಭಗೊಳ್ಳಲಿದೆ. ಹಾಗಾದ್ರೆ, ಇಂದಿನಿಂದ ದೇಶದಲ್ಲಿ ವ್ಯಾಕ್ಸಿನ್ ಹಂಚಿಕೆ ಹೇಗಿರುತ್ತೆ. ಯಾರಿಗೆಲ್ಲ ಸಿಗುತ್ತೆ ಎನ್ನುವ ಮಾಹಿತಿ ಇಲ್ಲಿದೆ.

ವ್ಯಾಕ್ಸಿನ್ ಡ್ರೈವ್ 2.O ಮೊದಲ ಹಂತದಲ್ಲಿ 1 ಕೋಟಿ 30 ಲಕ್ಷ ಜನರಿಗೆ ಲಸಿಕೆ ನೀಡಲಾಗಿದ್ದು, ಇಂದಿನಿಂದ 2ನೇ ಹಂತದ ಲಸಿಕೆ ಅಭಿಯಾನ ಶುರುವಾಗಲಿದೆ. ಇದರಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಸಿಬ್ಬಂದಿ ರೆಡಿಯಾಗಿದ್ದಾರೆ. 45 ವರ್ಷ ಮೇಲ್ಪಟ್ಟವರೂ ಸಹ ಇತರ ರೋಗಗಳಿಂದ ಬಳಲುತ್ತಿದ್ರೆ ಲಸಿಕೆ ಪಡೆಯಬಹುದು. ದೇಶದ 10 ಸಾವಿರ ಸರ್ಕಾರಿ ಕೇಂದ್ರಗಳಲ್ಲಿ ಉಚಿತ ಲಸಿಕೆ ನೀಡಲು ನಿರ್ಧರಿಸಿದ್ದು, 20 ಸಾವಿರ ಖಾಸಗಿ ಕೇಂದ್ರಗಳ ಮೂಲಕವೂ ಲಸಿಕೆ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದ್ರೆ, ಖಾಸಗಿ ಕೇಂದ್ರಗಳಲ್ಲಿ ಲಸಿಕೆಗೆ 250 ರೂಪಾಯಿ ಫಿಕ್ಸ್ ಮಾಡಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲೂ ಸಿಗಲಿದೆ ಕೊರೊನಾ ವ್ಯಾಕ್ಸಿನ್ ಇನ್ನೂ ಕೊರೊನಾ ಲಸಿಕೆ ಖಾಸಗಿ ಆಸ್ಪತ್ರೆಗಳಲ್ಲೂ ಲಭ್ಯವಾಗಲಿದೆ. ಆದ್ರೆ, ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಸಿಕ್ತಿದೆ ಅಂದಾಕ್ಷಣ ಎಲ್ಲರು ಲಸಿಕೆ ಪಡೆಯಲು ಆಗಲ್ಲ. ಎರಡನೇ ಹಂತದ ಲಸಿಕೆ ಅಭಿಯಾನದ ನಿರ್ಧಾರದಂತೆ 60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ವರ್ಷ ಮೇಲ್ಪಟ್ಟವರು ಇತರ ರೋಗಗಳಿಂದ ಬಳಲಿತ್ತಿದ್ರೆ, ಗುರುತಿನ ದಾಖಲೆ ನೀಡಿ ಲಸಿಕೆ ಪಡೆಯಬಹುದು.

ಲಸಿಕೆ ಪಡೆಯುವವರು ಸರ್ಕಾರದ ಕೋವಿನ್ ಪೋರ್ಟಲ್ ಅಥವಾ ಆರೋಗ್ಯ ಸೇತು ಆ್ಯಪ್‌ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಅಲ್ಲದೇ ನೇರವಾಗಿ ವ್ಯಾಕ್ಸಿನೇಷನ್ ಕೇಂದ್ರಗಳಿಗೆ ಹೋಗಿ ಲಸಿಕೆ ಪಡೆಯಬಹುದಾಗಿದೆ. ಲಸಿಕೆ ಪಡೆದ ವ್ಯಕ್ತಿಗಳಿಗೆ QR Code ಹೊಂದಿರುವ ಡಿಜಿಟಲ್ ಪ್ರಮಾಣ ಪತ್ರವನ್ನು ನೀಡಲಾಗುತ್ತೆ.

ಇದನ್ನೂ ಓದಿ: Oxford University: ಕೊರೊನಾ ವೈರಸ್​​ ಬಗ್ಗೆ ಅಧ್ಯಯನ ನಡೆಸುತ್ತಿರುವ ಆಕ್ಸ್​​ಫರ್ಡ್​ ಮೇಲೆ ಹ್ಯಾಕರ್ಸ್​ ದಾಳಿ

Published On - 6:42 am, Mon, 1 March 21