ಬೆಂಗಳೂರು: ನಾಳೆ(ಜ.07) ರಾಜ್ಯಾದ್ಯಂತ ಎರಡನೇ ಹಂತದ ಕೊವಿಡ್ ವ್ಯಾಕ್ಸಿನ್ ಡ್ರೈ ರನ್ ನಡೆಯಲಿದೆ. ಬೆಂಗಳೂರಿನಲ್ಲಿ ಒಟ್ಟು ಎಂಟು ಆರೋಗ್ಯ ಕೇಂದ್ರಗಳಲ್ಲಿ ಡ್ರೈ ರನ್ ನಡೆಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಬೆಂಗಳೂರು ವ್ಯಾಪ್ತಿಯಲ್ಲಿ, ಕೆ.ಆರ್ ಪುರಂ, ಕುಂಬಳಗೋಡು, ಆನೇಕಲ್ನ ಆಕ್ಸ್ ಫರ್ಡ್ ಮೆಡಿಕಲ್ ಕಾಲೇಜು, ಕಗ್ಗಲೀಪುರ ಪ್ರಾಥಮಿಕ ಆರೋಗ್ಯ ಕೇಂದ್ರ, ಕಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಪಾಲನಾಯಕನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವ್ಯಾಕ್ಸಿನ್ ಡ್ರೈ ರನ್ ನಡೆಸಲಾಗುತ್ತದೆ. ಒಟ್ಟು 8 ಕಡೆಗಳಲ್ಲಿ ಡ್ರೈ ರನ್ ಕಾರ್ಯ ಹಮ್ಮಿಕೊಂಡಿದ್ದು, ಇನ್ನು ಎರಡು ಸ್ಥಳಗಳಿಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ಹುಡುಕಾಟ ನಡೆಸುತ್ತಿದೆ.
ಎಲ್ಲ ರಾಜ್ಯಗಳಲ್ಲಿ ಜ.2ರಿಂದ ಲಸಿಕೆಗಳ ಪ್ರಾಯೋಗಿಕ ವಿತರಣೆಗೆ ಕೇಂದ್ರ ಸರ್ಕಾರ ನಿರ್ಧಾರ