ನಾಳೆ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ: 39,378 ಸ್ಥಾನಗಳಿಗೆ ಮತದಾನ

| Updated By: Lakshmi Hegde

Updated on: Dec 26, 2020 | 2:49 PM

ಡಿಸೆಂಬರ್ 23ರಂದು ಮೊದಲ ಹಂತದ ಚುನಾವಣೆ ನಡೆದಿತ್ತು. ಒಟ್ಟು 43,238 ಸ್ಥಾನಗಳಿಗೆ ಮತದಾನ ನಡೆದಿದ್ದು, 1,17,383 ಅಭ್ಯರ್ಥಿಗಳು ಕಣದಲ್ಲಿದ್ದರು. ಡಿ.30ರಂದು ಮತ ಎಣಿಕೆ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ನಾಳೆ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ: 39,378 ಸ್ಥಾನಗಳಿಗೆ ಮತದಾನ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಶಾಂತಿಯುತವಾಗಿ ನಡೆದ ಬೆನ್ನಲ್ಲೇ ಚುನಾವಣಾ ಆಯೋಗ ಎರಡನೇ ಹಂತದ ಮತದಾನಕ್ಕೆ ಸಿದ್ಧತೆ ಮಾಡಿಕೊಂಡಿದೆ. ಭಾನುವಾರ (ಡಿ 27)ದಂದು ರಾಜ್ಯದಲ್ಲಿ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ನಡೆಯುತ್ತಿದೆ. ರಾಜ್ಯದ 109 ತಾಲೂಕುಗಳ 2709 ಗ್ರಾಮಗಳಲ್ಲಿ ಒಟ್ಟೂ 39,378 ಸ್ಥಾನಗಳಿಗೆ ಮತದಾನ ನಡೆಯಲಿದೆ.

ಮುಂಜಾನೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಕೊರೊನಾ ವೈರಸ್​ ಪ್ರಕರಣಗಳು ಇನ್ನೂ ಜೀವಂತವಾಗಿರುವುದರಿಂದ ಮತಗಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್​ ಧರಿಸುವುದು ಕಡ್ಡಾಯ. ಇನ್ನು, ಕೊರೊನಾ ಪಾಸಿಟಿವ್​ ಇರುವ ವ್ಯಕ್ತಿಗಳಿಗೆ ಕೊನೆಯ ಒಂದು ಗಂಟೆ ಅವಧಿಯಲ್ಲಿ ಮತದಾನಕ್ಕೆ ಅವಕಾಶ ಮಾಡಿಕೊಡಲು ಚುನಾವಣಾ ಆಯೋಗ ನಿರ್ಧರಿಸಿದೆ.

ಡಿಸೆಂಬರ್​ 30ಕ್ಕೆ ಫಲಿತಾಂಶ
ಡಿಸೆಂಬರ್ 22ರಂದು ಮೊದಲ ಹಂತದ ಚುನಾವಣೆ ನಡೆದಿತ್ತು. ಒಟ್ಟು 43,238 ಸ್ಥಾನಗಳಿಗೆ ಮತದಾನ ನಡೆದಿದ್ದು, 1,17,383 ಅಭ್ಯರ್ಥಿಗಳು ಕಣದಲ್ಲಿದ್ದರು. ಡಿ.30ರಂದು ಮತ ಎಣಿಕೆ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಶಾಂತಿಯುತವಾಗಿ ನಡೆದ ಮೊದಲೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ

Published On - 2:49 pm, Sat, 26 December 20