Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ಪಿಯುಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಘೋಷಿಸಿದ ಕೆಎಸ್​ಆರ್​ಟಿಸಿ

ಕೆಎಸ್​ಆರ್​ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಕೋರಿಕೆ ಮೇರೆಗೆ ನಿಲುಗಡೆ ನೀಡಬೇಕು ಎಂದು ಚಾಲಕ ಮತ್ತು ನಿರ್ವಾಹಕರಿಗೂ ಸೂಚನೆ ನೀಡಿದೆ.

ದ್ವಿತೀಯ ಪಿಯುಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಘೋಷಿಸಿದ ಕೆಎಸ್​ಆರ್​ಟಿಸಿ
ಕೆಎಸ್​ಆರ್​ಟಿ ಬಸ್​ (ಸಾಂದರ್ಭಿಕ ಚಿತ್ರ)
Follow us
Ganapathi Sharma
|

Updated on: Mar 03, 2023 | 6:33 PM

ಬೆಂಗಳೂರು: ದ್ವಿತೀಯ ಪಿಯುಸಿ (Second PU) ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಶುಭ ಸುದ್ದಿ ನೀಡಿದೆ. ಪರೀಕ್ಷೆ ಬರೆಯಲು (PUC Exam) ತೆರಳುವ ವಿದ್ಯಾರ್ಥಿಗಳು ಉಚಿತವಾಗಿ ಕೆಎಸ್ಆರ್​​ಟಿಸಿ ಬಸ್​​ನಲ್ಲಿ ಸಂಚರಿಸಬಹುದು ಎಂದು ನಿಗಮ ತಿಳಿಸಿದೆ. ಪರೀಕ್ಷೆ ಬರೆಯುವುದಕ್ಕಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ತೆರಳುವವರಿಗೂ ಇದು ಅನ್ವಯವಾಗಲಿದೆ. ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಸಂಚರಿಸಬಹುದು ಎಂದು ನಿಗಮ ತಿಳಿಸಿದೆ. ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಬಸ್​​ನಲ್ಲಿ ಪ್ರಯಾಣಿಸಬಹುದಾಗಿದೆ ಎಂದು ತಿಳಿಸಿರುವ ನಿಗಮ, ಬಸ್ ಚಾಲಕರಿಗೆ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರಗಳ ಮುಂದೆ ನಿಲುಗಡೆ ನೀಡುವಂತೆ ಸೂಚಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯನ ಮಂಡಳಿಯ ಅಧ್ಯಕ್ಷರು ಪರೀಕ್ಷೆ ಬರೆಯಲು ತೆರಳುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣದ ವ್ಯವಸ್ಥೆ ಮಾಡುವಂತೆ ಕೆಎಸ್​ಆರ್​ಟಿಸಿಗೆ ಮನವಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿರುವ ಕೆಎಸ್​ಆರ್​ಟಿಸಿ, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಿಗೆ ಮತ್ತು ಅಲ್ಲಿಂದ ವಾಪಸಾಗಲು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿದೆ.

ಯಾವೆಲ್ಲಾ ಬಸ್​​ಗಳಲ್ಲಿ ಉಚಿತ ಪ್ರಯಾಣ?

ಕೆಎಸ್​ಆರ್​ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಕೋರಿಕೆ ಮೇರೆಗೆ ನಿಲುಗಡೆ ನೀಡಬೇಕು ಎಂದು ಚಾಲಕ ಮತ್ತು ನಿರ್ವಾಹಕರಿಗೂ ಸೂಚನೆ ನೀಡಿದೆ.

ಈ ಮಧ್ಯೆ, ಮಾರ್ಚ್​​ 8ಕ್ಕೆ ಮಹಿಳಾ ದಿನಾಚರಣೆಯಂದು ಮಹಿಳೆಯರು ಬಸ್​​​ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ತಿಳಿಸಿದೆ. ಆ ದಿನ ಮಹಿಳೆಯರು ನಗರದ ಎಲ್ಲಿಂದ ಎಲ್ಲಿಗೆ ಬೇಕಾದರೂ ಉಚಿತವಾಗಿ ಬಿಎಂಟಿಸಿ ಬಸ್​​ಗಳಲ್ಲಿ ಪ್ರಯಾಣಿಸಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ