ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಹಳೇ ಪದ್ಧತಿಯನ್ನೇ ಕೈ ಹಿಡಿಯಲು ಪಿಯುಸಿ ಬೋರ್ಡ್ ಮುಂದಾಗಿದ್ದು, ಪರೀಕ್ಷೆ ಇಲ್ಲದೇ ಗ್ರೇಡ್ ಬದಲು ಅಂಕ ನೀಡಲು ಪಿಯು ಪರೀಕ್ಷಾ ಮಂಡಳಿ ನಿರ್ಧಾರ ಮಾಡಿದೆ. ಈ ನಿಟ್ಟಿನಲ್ಲಿ ಈ ಬಾರಿ ಗ್ರೇಡ್ ಬದಲು ಅಂಕಗಳ ಪರಿಗಣನೆ ಮಾಡಲಾಗುತ್ತದೆ ಎಂದು ಟಿವಿ9 ಡಿಜಿಟಲ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್.ಆರ್ ಹೇಳಿಕೆ ನೀಡಿದ್ದಾರೆ.
ವಿದ್ಯಾರ್ಥಿಗಳ ಮುಂದಿನ ಭವಿಷ್ಯ ದೃಷ್ಟಿಯಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ನೀಡುವ ಸಂಬಂಧ 12 ಜನರ ತಜ್ಞರ ಸಮಿತಿ ರಚನೆ ಸಮಿತಿಯಲ್ಲಿ ಈ ಕುರಿತು ಸಹಮತವಿದೆ.ಹೀಗಾಗಿ ಶಿಕ್ಷಣ ತಜ್ಞರು ಹಾಗೂ ಸಮಿತಿ ಸದಸ್ಯರ ಚರ್ಚೆಯ ಅಂತಿಮ ನಿರ್ಧಾರ ಕೊರೊನಾ ಕಾರಣಕ್ಕೆ ಪಿಯುಸಿ ಪರೀಕ್ಷೆ ಇಲ್ಲದೆ ರೆಗ್ಯುಲರ್ ವಿದ್ಯಾರ್ಥಿಗಳು ಪಾಸ್ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್.ಆರ್ ತಿಳಿಸಿದ್ದಾರೆ.
ದ್ವಿತೀಯ ಪಿಯು ಫಲಿತಾಂಶ ಗ್ರೇಡಿಂಗ್ ಮೂಲಕ ಫಲಿತಾಂಶ ನೀಡುವುದಾಗಿ ಶಿಕ್ಷಣ ಸಚಿವ ಘೋಷಿಸಿದ್ದರು ಆದರೀಗ ಫಲಿತಾಂಶದಲ್ಲಿ ಬದಲಾವಣೆಗೆ ಇಲಾಖೆ ಮುಂದಾಗಿದೆ. ಅಂಕಗಳ ಆಧಾರದ ಮೇಲೆ ಫಲಿತಾಂಶ ನೀಡಲು ತಯಾರಿ ನಡೆಸಿದ್ದು, ಜೂನ್ ಕೊನೆ ವಾರದಲ್ಲಿ ಫಲಿತಾಂಶ ನೀಡಲು ಸಿದ್ಧತೆ ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್.ಆರ್ ಮಾಹಿತಿ ನೀಡಿದ್ದಾರೆ.
ಎಸ್‌ಎಸ್‌ಎಲ್‌ಸಿ ಮತ್ತು ಪ್ರಥಮ ಪಿಯುಸಿ ಅವರಿಗೆ ಶೇಕಡಾವಾರು ಮೂಲಕ ಈ ಬಾರಿ ಫಲಿತಾಂಶ ನಿಗದಿ ಮಾಡಲಾಗಿದೆ. ಗ್ರೇಡಿಂಗ್ ನೀಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ. ಅಲ್ಲದೆ ಉದ್ಯೋಗ ಪಡೆಯಲು ಅರ್ಹ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಹಳೆ ಪದ್ಧತಿಯಲ್ಲಿ ದ್ವಿತೀಯ ಪಿಯು ಫಲಿತಾಂಶ ನೀಡಲಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್.ಆರ್ ತಿಳಿಸಿದ್ದಾರೆ.
ಇದನ್ನೂ ಓದಿ:
Published On - 3:03 pm, Fri, 18 June 21