Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆ ಆರಂಭವಾದ ಒಂದೇ ಗಂಟೆಯಲ್ಲಿ PUC ಪ್ರಶ್ನೆ ಪತ್ರಿಕೆ ಲೀಕ್!

ವಿಜಯಪುರ: ಪರೀಕ್ಷೆ ಆರಂಭವಾಗಿ ಒಂದೇ ಗಂಟೆಯಲ್ಲಿ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಲೀಕ್ ಆಗಿರುವ ಘಟನೆ ಇಂಡಿ ಪಟ್ಟಣದಲ್ಲಿ ನಡೆದಿದೆ. ಶಾಂತೇಶ್ವರ ವಿದ್ಯಾವರ್ಧಕ ಸಂಘದ ಪರೀಕ್ಷಾ ಕೇಂದ್ರದಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ. ಪರೀಕ್ಷೆ ಆರಂಭವಾದ ಮೊದಲ ದಿನವೇ ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಬಹಿರಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪ್ರಶ್ನೆ ಪತ್ರಿಕೆ ನೀಡಿದ ಬೆನ್ನಲ್ಲೇ ಪರೀಕ್ಷಾ ಕೊಠಡಿಯಲ್ಲಿ ಕುಳಿತ ಪರೀಕ್ಷಾರ್ಥಿಯ ಕೈನಲ್ಲಿ ಪ್ರಶ್ನೆ ಪತ್ರಿಕೆಯ ಫೋಟೋವನ್ನು ಮೊಬೈಲ್​ನಲ್ಲಿ ಕಿಡಿಗೇಡಿಗಳು ಕ್ಲಿಕ್ಕಿಸಿಕೊಂಡಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತ ಬಿಗಿ ಭದ್ರತೆ ಇದ್ದರೂ […]

ಪರೀಕ್ಷೆ ಆರಂಭವಾದ ಒಂದೇ ಗಂಟೆಯಲ್ಲಿ PUC ಪ್ರಶ್ನೆ ಪತ್ರಿಕೆ ಲೀಕ್!
ಪದವಿ ಪೂರ್ವ ಶಿಕ್ಷಣ ಇಲಾಖೆ
Follow us
ಸಾಧು ಶ್ರೀನಾಥ್​
|

Updated on:Mar 04, 2020 | 3:08 PM

ವಿಜಯಪುರ: ಪರೀಕ್ಷೆ ಆರಂಭವಾಗಿ ಒಂದೇ ಗಂಟೆಯಲ್ಲಿ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಲೀಕ್ ಆಗಿರುವ ಘಟನೆ ಇಂಡಿ ಪಟ್ಟಣದಲ್ಲಿ ನಡೆದಿದೆ. ಶಾಂತೇಶ್ವರ ವಿದ್ಯಾವರ್ಧಕ ಸಂಘದ ಪರೀಕ್ಷಾ ಕೇಂದ್ರದಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ. ಪರೀಕ್ಷೆ ಆರಂಭವಾದ ಮೊದಲ ದಿನವೇ ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಬಹಿರಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಪ್ರಶ್ನೆ ಪತ್ರಿಕೆ ನೀಡಿದ ಬೆನ್ನಲ್ಲೇ ಪರೀಕ್ಷಾ ಕೊಠಡಿಯಲ್ಲಿ ಕುಳಿತ ಪರೀಕ್ಷಾರ್ಥಿಯ ಕೈನಲ್ಲಿ ಪ್ರಶ್ನೆ ಪತ್ರಿಕೆಯ ಫೋಟೋವನ್ನು ಮೊಬೈಲ್​ನಲ್ಲಿ ಕಿಡಿಗೇಡಿಗಳು ಕ್ಲಿಕ್ಕಿಸಿಕೊಂಡಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತ ಬಿಗಿ ಭದ್ರತೆ ಇದ್ದರೂ ಪ್ರಶ್ನೆ ಪತ್ರಿಕೆ ಲೀಕ್ ಆಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಿಂದೆ ಕಾಲೇಜಿನ ಸಿಬ್ಬಂದಿ ಕೈವಾಡವಿರುವ ಶಂಕೆಯಿದೆ.

ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದೆ. ಡಿಡಿಪಿಯು ಜಿ.ಎಸ್.ಪೂಜಾತ ಹಾಗೂ ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಕೃತ್ಯ ಮಾಡಿದವರ ವಿರುದ್ಧ ಕ್ರಮ: ಮೊದಲ ದಿನವೇ ದ್ವಿತೀಯ ಪಿಯು ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಕೇಸ್​ಗೆ ಸಂಬಂಧಿಸಿ ಪಿಯು ಮಂಡಳಿ ನಿರ್ದೇಶಕಿ ಎಂ.ಕನಗವಲ್ಲಿ ಪ್ರತಿಕ್ರಿಯಿಸಿದ್ದಾರೆ. ಇಂದು ಬೆಳಗ್ಗೆ 11.30 ರಲ್ಲಿ ಪ್ರಶ್ನೆ ಪತ್ರಿಕೆ ಫೋಟೋ ಹೊರಬಂದಿದೆ. ನಮ್ಮ ಇಲಾಖೆ, ಡಿಸಿ ಟ್ರೆಷರಿಯಲ್ಲಿ ಇದು ಸೋರಿಕೆಯಾಗಿಲ್ಲ. ವ್ಯಕ್ತಿಯೊಬ್ಬ ಫೋಟೋ ತೆಗೆದು ಸೋರಿಕೆ ಮಾಡಿದ್ದಾನೆ.

ಹೀಗಾಗಿ ಕೇಸ್ ದಾಖಲಿಸಲು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಲಾಗಿದೆ. ಕೂಡಲೇ ಈ ಕೃತ್ಯ ಮಾಡಿದವರ ವಿರುದ್ಧ ಕ್ರಮಕ್ಕೆ ಕೈಗೊಳ್ಳಲಾಗುತ್ತೆ ಎಂದು ಬೆಂಗಳೂರಿನಲ್ಲಿ ಪಿಯು ಮಂಡಳಿ ನಿರ್ದೇಶಕಿ ಕನಗವಲ್ಲಿ ತಿಳಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಹಿಡಿದು ಫೋಸ್ ಕೊಟ್ಟಿದ್ದ ವಿದ್ಯಾರ್ಥಿ ಅರೆಸ್ಟ್​:  ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಪ್ರಶ್ನೆ ಪತ್ರಿಕೆ ಕೈಯಲ್ಲಿಡಿದು ಕ್ಯಾಮರಾಗೆ ಫೋಸ್ ಕೊಟ್ಟಿದ್ದ ವಿದ್ಯಾರ್ಥಿ ಮುರುಘೇಂದ್ರ ಹಿರೇಮಠನನ್ನು ಇಂಡಿ ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಶಾಂತೇಶ್ವರ ವಿದ್ಯಾವರ್ಧಕ ಸಂಘದ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿದ್ದ ವಿದ್ಯಾರ್ಥಿ ಕಿಟಕಿಯಲ್ಲಿ ಪ್ರಶ್ನೆ ಪತ್ರಿಕೆ ಹಿಡಿದು ಫೋಟೋಗೆ ಅವಕಾಶ ಮಾಡಿಕೊಟ್ಟಿದ್ದ. ಫೋಟೋ ತೆಗೆದ ಆರೋಪಿ ಮುರುಗೇಶ ಸಗರನನ್ನೂ ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಪರೀಕ್ಷಾ ಕೇಂದ್ರದ ಸೂಪರ್ ವೈಸರ್ ಅವರನ್ನ ಅಮಾನತು ಮಾಡುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಸೂಚಿಸಿದ್ದಾರೆ. ಪ್ರಶ್ನೆ ಪತ್ರಿಕೆ ಲೀಕ್ ಆದ ಕಾಲೇಜಿನಲ್ಲೇ ಜಿಲ್ಲಾಧಿಕಾರಿ ಹಾಗೂ ಎಸ್​ಪಿ ಅನುಪಮ ಅಗ್ರವಾಲ್ ಬೀಡುಬಿಟ್ಟಿದ್ದು, ತನಿಖೆ ಮುಂದುವರಿಸಿದ್ದಾರೆ.

Published On - 12:14 pm, Wed, 4 March 20