AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾತ್ರೆ, ಸಭೆ, ಸಮಾರಂಭಕ್ಕೆ ನಿಷೇಧ; ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ ಜಾರಿ

ಪ್ರಸ್ತುತ ಆದೇಶದ ಪ್ರಕಾರ ಸದ್ಯ ಯುಗಾದಿ, ಹೋಳಿ ಹಬ್ಬ, ಷಬ್-ಎ-ಬರಾತ್, ಗುಡ್‌ಫ್ರೈಡೆ ಇತ್ಯಾದಿ ಸಂದರ್ಭಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಚರಿಸವಂತಿಲ್ಲ. ಎಲ್ಲಾ ರೀತಿಯ ಧಾರ್ಮಿಕ ಕಾರ್ಯಕ್ರಮಗಳನ್ನು ಸಾಂಕೇತಿಕವಾಗಿ ಆಚರಿಸಲು ಸೂಚನೆ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾತ್ರೆ, ಸಭೆ, ಸಮಾರಂಭಕ್ಕೆ ನಿಷೇಧ; ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ ಜಾರಿ
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on:Apr 05, 2022 | 1:04 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾತ್ರೆ, ಸಭೆ, ಸಮಾರಂಭಕ್ಕೆ ನಿಷೇಧ ಹೇರಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಜಾತ್ರೆ, ಸಭೆ, ಸಮಾರಂಭಗಳಿಗೆ ನಿಷೇಧ ಹೇರಿ ಆದೇಶ ಹೊರಡಿಸಿದ್ದಾರೆ. ಕೊರೊನಾ ಹಿನ್ನೆಲೆ ತಕ್ಷಣದಿಂದಲೇ ಆದೇಶ ಜಾರಿಯಾಗಲಿದ್ದು, ಮುಂದಿನ ಆದೇಶದವರೆಗೆ ಜಾತ್ರೆ, ಸಭೆ, ಸಮಾರಂಭಗಳನ್ನು ನಡೆಸುವಂತಿಲ್ಲ.

ಪ್ರಸ್ತುತ ಆದೇಶದ ಪ್ರಕಾರ ಸದ್ಯ ಯುಗಾದಿ, ಹೋಳಿ ಹಬ್ಬ, ಷಬ್-ಎ-ಬರಾತ್, ಗುಡ್‌ಫ್ರೈಡೆ ಇತ್ಯಾದಿ ಸಂದರ್ಭಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಚರಿಸವಂತಿಲ್ಲ. ಎಲ್ಲಾ ರೀತಿಯ ಧಾರ್ಮಿಕ ಕಾರ್ಯಕ್ರಮಗಳನ್ನು ಸಾಂಕೇತಿಕವಾಗಿ ಆಚರಿಸಲು ಸೂಚನೆ ನೀಡಲಾಗಿದೆ. ಆದೇಶ ಉಲ್ಲಂಘನೆ ಆದಲ್ಲಿ ಸಂಬಂಧಿತ ಅಧಿಕಾರಿಗಳಿಂದ ಸರ್ಕಾರದ ಆದೇಶದಂತೆ ಕಾನೂನು ಕ್ರಮ ಕೈಗೊಳ್ಳಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಉಡುಪಿಗೆ ಭೇಟಿ ನೀಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದೆ. ಈ ಬೆನ್ನಲ್ಲೇ ಮಣಿಪಾಲಕ್ಕೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭೇಟಿ ನೀಡಿದ್ದಾರೆ. ಒಂದೇ ಸಂಸ್ಥೆಯಲ್ಲಿ 950ಕ್ಕಿಂತಲೂ ಹೆಚ್ಚು ಕೊರೊನಾ ಪ್ರಕರಣ ಪತ್ತೆಯಾಗಿದೆ. ಒಂದೇ ಕ್ಯಾಂಪಸ್​ನಲ್ಲಿ 11 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿ ಮತ್ತು ಸಿಬ್ಬಂದಿಗಳಿದ್ದಾರೆ. ಕೊರೊನಾ ತಡೆಗೆ ನಿರ್ದಿಷ್ಟ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಅತಿ ಹೆಚ್ಚು ವಿದ್ಯಾರ್ಥಿಗಳು ಇರುವ ಕಾರಣ ಸೋಂಕು ಹೆಚ್ಚಳವಾಗಿದೆ. ಕೊರೊನಾ ನಿಯಮ ಪಾಲಿಸದಿರುವ ಹಿನ್ನೆಲೆ ಸೋಂಕು ಹಬ್ಬಿದೆ. ಪರೀಕ್ಷೆ ನಂತರ ಪಾರ್ಟಿಗಳನ್ನು ಮಾಡಿರುವ ಕಾರಣ ಸೋಂಕು ಹಬ್ಬಿರುವ ಸಾಧ್ಯತೆಯಿದೆ ಎಂದು ಮಣಿಪಾಲದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ವಿದ್ಯಾರ್ಥಿಗಳು ಕೊರೊನಾ ಪಸರಿಸುವ ವಾಹಕವಾಗುತ್ತಿದ್ದಾರೆ. ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ಮುಗಿದ ಮೇಲೆ ಮನೆಗೆ ಕಳುಹಿಸಲಾಗುವುದು. ಪೂರ್ಣ ಮಾಹೆ ವಿವಿಗೂ ಸೂಕ್ತ ಮುಂಜಾಗೃತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ 2ನೇ ಅಲೆ ಆರ್ಭಟ.. ಬಿಬಿಎಂಪಿ ವಿದ್ಯಾರ್ಥಿಗಳಿಗೆ ಕಂಟಕವಾಯ್ತು ಕೊರೊನಾ

ಕೇವಲ 8ದಿನಕ್ಕೆ 700ಕ್ಕೂ ಹೆಚ್ಚು ಜನರಿಗೆ ಕೊರೊನಾ, 10 ಮಂದಿ ಸಾವು.. ಮೈಸೂರಿನಲ್ಲಿ ಅಬ್ಬರಿಸುತ್ತಿದೆ ಸೋಂಕು

Published On - 3:58 pm, Tue, 30 March 21

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ