ಕರಾವಳಿ ಭಾಗದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್

| Updated By: ರಾಜೇಶ್ ದುಗ್ಗುಮನೆ

Updated on: Dec 29, 2020 | 8:56 PM

ಡಿಸೆಂಬರ್ 31ರ ಸಂಜೆ 4 ರಿಂದ ಜನವರಿ 1ರ ಬೆಳಗ್ಗೆ 6ರ ವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನಲ್ಲಿ ನಿಷೇಧಾಜ್ಞೆ ಹೇರಲಾಗಿದೆ.

ಕರಾವಳಿ ಭಾಗದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್
ಪ್ರಾತಿನಿಧಿಕ ಚಿತ್ರ
Follow us on

ಉತ್ತರ ಕನ್ನಡ: ಹೊಸ ವರ್ಷ ಸಂಭ್ರಮಾಚರಣೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್ 31ರ ಸಂಜೆ 4 ರಿಂದ ಜನವರಿ 1ರ ಬೆಳಗ್ಗೆ 6ರ ವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಹೋಟೆಲ್, ರೆಸಾರ್ಟ್, ಸಾರ್ವಜನಿಕ ಪ್ರದೇಶದಲ್ಲಿ ನಿರ್ಬಂಧ ಹೇರಿದ್ದು, ಜಿಲ್ಲೆಯ ಕರಾವಳಿ ಭಾಗದ ಕಡಲ ತೀರದಲ್ಲಿ 700 ಕ್ಕೂ ಹೆಚ್ಚಿನ ಪೊಲೀಸ್ ಭದ್ರತೆಗೆ ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ತಿಳಿಸಿದ್ದಾರೆ.

ಅಪ್ಪ-ಅಮ್ಮ ಬೈದಿದ್ದಕ್ಕೆ ಮನೆಯಲ್ಲಿದ್ದ ಲಕ್ಷ ರೂ. ಕದ್ದು ಗೋವಾಗೆ ತೆರಳಿ ಪಾರ್ಟಿ ಮಾಡಿದ ಬಾಲಕ!