ವಿಧಾನಸಭೆಯಲ್ಲಿ ಭದ್ರತಾ ಲೋಪ: ಬಜೆಟ್ ಮಂಡನೆ ವೇಳೆ ಸದನದಲ್ಲಿ ಬಂದು ಕುಳಿತ ಅನಾಮಿಕ ವ್ಯಕ್ತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ವೇಳೆ ಭದ್ರತಾ ಲೋಪವಾಗಿದೆ. ಅನಾಮಿಕ ವ್ಯಕ್ತಿಯೋರ್ವ ಸದನದೊಳಗೆ ಪ್ರವೇಶಿಸಿ ಶಾಸಕರ ಆಸನದಲ್ಲಿ ಕುಳಿತುಕೊಂಡಿದ್ದಾನೆ.

ವಿಧಾನಸಭೆಯಲ್ಲಿ ಭದ್ರತಾ ಲೋಪ: ಬಜೆಟ್ ಮಂಡನೆ ವೇಳೆ ಸದನದಲ್ಲಿ ಬಂದು ಕುಳಿತ ಅನಾಮಿಕ ವ್ಯಕ್ತಿ
ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಿರುವುದು
Edited By:

Updated on: Jul 07, 2023 | 4:19 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು( ಜುಲೈ 07) ಬಜೆಟ್ (Karnataka Budget 2023) ಮಂಡನೆ ವೇಳೆ ಭದ್ರತಾ ಲೋಪವಾಗಿದೆ. ಶಾಸಕರಲ್ಲದ ವ್ಯಕ್ತಿಯೋರ್ವ ವಿಧಾನಸಭೆ ಪ್ರವೇಶಿಸಿದ್ದಾನೆ. ಅಲ್ಲದೇ ಬಜೆಟ್​ ಮಂಡನೆ ವೇಳೆ ಸಮಾರು 15 ನಿಮಿಷಗಳ ಜಾಲ ದೇವದುರ್ಗ ಶಾಸಕಿ ಕರೆಯಮ್ಮ ಆಸನದಲ್ಲಿ ಕುಳಿತಿದ್ದಾನೆ. ಇದನ್ನು ಗಮನಿಸಿದ ಜೆಡಿಎಸ್​ ಶಾಸಕ ಶರಣಗೌಡ ಕಂದಕೂರು ಅವರಿಗೆ ವ್ಯಕ್ತಿ ಬಗ್ಗೆ ಅನುಮಾನ ಬಂದಿದೆ. ಕೂಡಲೇ  ಅವರು ಎದ್ದು ಹೋಗಿ ಸ್ಪೀಕರ್ ಯುಟಿ ಖಾದರ್ ಅವರ ಗಮನಕ್ಕೆ ತಂದಿದ್ದಾರೆ. ಆದ್ರೆ, ಅಷ್ಟರೊಳಗೆ ಆ ಅನಾಮಿಕ ವ್ಯಕ್ತಿ ಅಲ್ಲಿಂದ ನಾಪತ್ತೆಯಾಗಿದ್ದಾನೆ. ಇದರಿಂದ ಆ ವ್ಯಕ್ತಿ ಯಾರು? ಏಕೆ ಬಂದಿದ್ದ? ಇಷ್ಟೊಂದು ಭದ್ರತೆ ನಡುವೆಯೂ ಆ ವ್ಯಕ್ತಿ ಹೇಗೆ ಸದನದೊಳಗೆ ಪ್ರವೇಶಿಸಿದ್ದ ಅಂತೆಲ್ಲ ಪ್ರಶ್ನೆಗಳು ಉದ್ಭವಿಸಿವೆ. ಹಾಗೇ ಆತಂಕಕ್ಕೂ ಕಾರಣವಾಗಿದೆ.

ಅನಾಮಿಕ ವ್ಯಕ್ತಿಯನ್ನು ಪತ್ತೆ ಮಾಡಿದ ಪೊಲೀಸರು

ಸದನದೊಳಗೆ ಸುಮಾರು 15ರಿಂದ 20 ನಿಮಷಗಳ ಕಾಲ ಕುಳಿತು ಬಳಿಕ ದಿಢೀರ್ ನಾಪತ್ತೆಯಾಗಿದ್ದ ಅನಾಮಿಕ ವ್ಯಕ್ತಿ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಆ ಅನಾಮಿಕ ವ್ಯಕ್ತಿಯನ್ನು ಪೊಲೀಸರು ಪತ್ತೆ ಮಾಡಿ ವಶಕ್ಕೆ ಪಡೆದುಕೊಮಡಿದ್ದಾರೆ. ಅನಾಮಿಕ ವ್ಯಕ್ತಿಯ ಹೆಸರು ತಿಪ್ಪೇರುದ್ರ (72) ಎಂದು ಗುರುತಿಸಲಾಗಿದೆ.

ತಿಪ್ಪೇರುದ್ರ ಸದನದೊಳಗೆ ಪ್ರವೇಶಿಸುವ ವೇಳೆ ಮಾರ್ಷಲ್​ಗಳು ವಿಚಾರಿಸಿದ್ದರು. ಆ ಸಂದರ್ಭದಲ್ಲಿ ತಿಪ್ಪೇರುದ್ರ, ಶಾಸಕ  ಎನ್​ವೈ ಗೋಪಾಲಕೃಷ್ಣ ಹೆಸರು ಹೇಳಿದ್ದಲ್ಲೇ ಮಾರ್ಷಲ್​ಗೆ ಅವಾಜ್​ ಹಾಕಿ ಸದನದೊಳಗೆ ಪ್ರವೇಶಿಸಿದ್ದ. ಜೊತೆಗೆ ಒಂದು ಬ್ಯಾಗ್​ ತಂದಿದ್ದ ಎಂದು ಪೊಲೀಸರ ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ. ಇನ್ನು ಈ ಬಗ್ಗೆ ಜಂಟಿ ಪೊಲೀಸ್ ಆಯುಕ್ತ ಶರಣಪ್ಪ ಅವರು ತಿಪ್ಪೇರುದ್ರನನ್ನು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ತೀವ್ರ ವಿಚಾರಣೆಗೊಳಪಡಿಸಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:55 pm, Fri, 7 July 23

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us