AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗೊಳ್ಳಿ ರಾಯಣ್ಣ ಪುತ್ಥಳಿ ದ್ವಂಸ ಪ್ರಕರಣ: ಕರವೇ ಕಾರ್ಯಕರ್ತರಿಂದ ಸೋಮವಾರ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ; ಬೆಂಗಳೂರಿನಲ್ಲಿರುವ ಶಿವಾಜಿ ಪ್ರತಿಮೆಗಳಿಗೆ ಭದ್ರತೆ

ಸೋಮವಾರ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಚೆನ್ನಮ್ಮ ಸರ್ಕಲ್​ನಿಂದ ಸುವರ್ಣಸೌಧಕ್ಕೆ ಪಾದಯಾತ್ರೆ ನಡೆಸಿ ಬೃಹತ್​ ಮಟ್ಟದಲ್ಲಿ ಪ್ರತಿಭಟನೆ, ರ್ಯಾಲಿ ಮಾಡುತ್ತೇವೆ ಎಂದು ಟಿವಿ9ಗೆ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ತಿಳಿಸಿದ್ದಾರೆ.

ಸಂಗೊಳ್ಳಿ ರಾಯಣ್ಣ ಪುತ್ಥಳಿ ದ್ವಂಸ ಪ್ರಕರಣ: ಕರವೇ ಕಾರ್ಯಕರ್ತರಿಂದ ಸೋಮವಾರ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ; ಬೆಂಗಳೂರಿನಲ್ಲಿರುವ ಶಿವಾಜಿ ಪ್ರತಿಮೆಗಳಿಗೆ ಭದ್ರತೆ
ಸಂಗೊಳ್ಳಿ ರಾಯಣ್ಣ ಹಾಗೂ ಛತ್ರಪತಿ ಶಿವಾಜಿ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Dec 18, 2021 | 4:57 PM

Share

ಬೆಳಗಾವಿಯಲ್ಲಿ ಎಂಇಎಸ್​ ಕಾರ್ಯಕರ್ತರು ಸಂಗೊಳ್ಳಿ ರಾಯಣ್ಣ ಪ್ರತಿಮೆ ದ್ವಂಸ ಮಾಡಿದ ಘಟನೆಯಿಂದ ರಾಜ್ಯದಲ್ಲಿ ಪರಿಸ್ಥತಿ ಉದ್ವಗ್ನಗೊಂಡಿದೆ. ಈ ನಡುವೆ ಬೆಂಗಳೂರಿನಲ್ಲಿರುವ ಶಿವಾಜಿ ಪ್ರತಿಮೆಗಳಿಗೆ ಭದ್ರತೆ ನೀಡಲು ಬೆಂಗಳೂರು ನಗರದ ಹಿರಿಯ ಪೊಲೀಸ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಅಲ್ಲದೆ ಆಯಾ ಠಾಣಾ ವ್ಯಾಪ್ತಿಯಲ್ಲಿ ಮಹಾರಾಷ್ಟ್ರದಿಂದ ಬರುವ ಬಸ್, ವಾಹನಗಳಿಗೆ ಭದ್ರತೆ ನೀಡುವಂತೆ ಸೂಚನೆ ನೀಡಲಾಗಿದೆ. ಶುಕ್ರವಾರ ರಾತ್ರಿ ಎಂಇಎಸ್​ ಕಾರ್ಯಕರ್ತರು ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ದ್ವಂಸಗೊಳಿಸಿದ್ದರು. ಈ ಹಿನ್ನಲೆಯಲ್ಲಿ ಕನ್ನಡಪರ ಹೋರಾಟಗಾರರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಬೆಂಗಳೂರಿನಲ್ಲಿ ಮರಾಠಿ ಜನ ವಾಸಿಸುವ ಕಾಲೋನಿ ಸೇರಿದಂತೆ ಎಲ್ಲೆಡೆ ಪೊಲೀಸರನ್ನು ನಿಯೋಜನೆ ಮಾಡಿ ಬಂದೋಬಸ್ತ್ ಮಾಡಲು ಸೂಚನೆ ನೀಡಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಸೋಮವಾರ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಚೆನ್ನಮ್ಮ ಸರ್ಕಲ್​ನಿಂದ ಸುವರ್ಣಸೌಧಕ್ಕೆ ಪಾದಯಾತ್ರೆ ನಡೆಸಿ ಬೃಹತ್​ ಮಟ್ಟದಲ್ಲಿ ಪ್ರತಿಭಟನೆ, ರ್ಯಾಲಿ ಮಾಡುತ್ತೇವೆ ಎಂದು ಟಿವಿ9ಗೆ ಕರವೇ ಅಧ್ಯಕ್ಷ ಟಿ..ನಾರಾಯಣಗೌಡ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಶಾಂತಿ ಸಭೆ

ಛತ್ರಪತಿ ಶಿವಾಜಿ ಪುತ್ತಳಿಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಸಲಾಯಿತು. ಪುತ್ತಳಿಗೆ ಮಸಿ ಬಳಿದ ಹಿನ್ನಲೆ ನಾಳೆ ಬೆಂಗಳೂರಿನಲ್ಲಿ ಮರಾಠ ಸಂಘಟನೆಗಳು ಪ್ರತಿಭಟನೆ ಮಾಡಲು ನಿರ್ಧರಿಸಿದ್ದ ಹಿನ್ನೆಲೆಯಲ್ಲಿ ಮರಾಠ ಸಮಾಜದ ಮುಖಂಡರನ್ನ ಕರೆದು ಶಾಂತಿ ಸಭೆ ನಡೆಸಿದ ಪೊಲೀಸರು,144 ಸೆಕ್ಷನ್ ಜಾರಿ ಮಾಡಿರುವ ಹಿನ್ನಲೆ ಪ್ರತಿಭಟನೆಯನ್ನು ತಡೆದಿದ್ದಾರೆ. ಪೊಲೀಸರ ಆದೇಶಕ್ಕೆ ತಲೆ ಬಾಗಿದ ಮರಾಠ ಸಂಘಟನೆಗಳು ಕರ್ನಾಟಕದಲ್ಲಿ ಮರಾಠರು ಕನ್ನಡಿಗರು ಒಟ್ಟಿಗೆ ಬದುಕುತ್ತಿದ್ದೇವೆ, ನಾವೆಲ್ಲ ಒಂದೇ ಕುಟುಂಬದವರು. ಕೆಲ ಕಿಡಿಗೇಡಿಗಳು ಬೆಂಕಿ ಹಚ್ಚುವ ಕೆಲಸಕ್ಕೆ ಮುಂದಾಗಿದ್ದಾರೆ. ಸಂಗೊಳ್ಳಿರಾಯಣ್ಣ ಛತ್ರಪತಿ ಶಿವಾಜಿ ಇಬ್ಬರು ದೇಶಕ್ಕಾಗಿ ಹೋರಾಡಿದ ಮಹಾತ್ಮರು. ಯಾರೇ ಆಗಲಿ ಇಂತ ದುಷ್ಕೃತ್ಯಕ್ಕೆ ಕೈ ಹಾಕಬಾರದು ಎಂದು ಮರಾಠ ಸಂಘದ ಸದಸ್ಯರ ಹೇಳಿಕೆ ನೀಡಿದ್ದು ಪ್ರತಿಭಟನೆ ನಡೆಸುವುದಿಲ್ಲವೆಂದು ತಿಳಿಸಿದ್ದಾರೆ.

ಡಿಕೆ ಶಿವಕುಮಾರ್​ ಪ್ರತಿಕ್ರಿಯೆ ಸಂಗೊಳ್ಳಿ ರಾಯಣ್ಣ ಪುತ್ಥಳಿ ದ್ವಂಸ ಪ್ರಕರಣಕ್ಕೆ ಸಂಬಂಧಸಿ ಡಿಕೆ ಶಿವಕುಮಾರ್​ ಮಾತನಾಡಿ, ಕೆಲ ಪುಂಡರು ಈ ಕೆಲಸ ಮಾಡಿದ್ದಾರೆ, ಎಂಇಎಸ್ ಅವರು ಈ ಕೆಲಸ ಮಾಡಿದ್ದಾರೆ ಅಂತ ನಾನು ಹೇಳಲ್ಲ ಈ ಬಗ್ಗೆ ತನಿಖೆಯಾಗಬೇಕು,ಸಂಗೋಳ್ಳಿ‌ರಾಯಣ್ಣ ನಮ್ಮ ದೇಶದ ಸ್ವಾತಂತ್ರ್ಯ ಹೋರಾಟಗಾರರು, ಕೆಲ ಪೊಲೀಸರಿಂದ ನೈತಿಕ ಪೊಲೀಸ್ ಗಿರಿ ಅವಕಾಶ ಸಿಕ್ಕಿದೆ ಎಂಬ ವಿಚಾರವಿದೆ ಅದನ್ನು ಈಗ ಚರ್ಚೆ ಮಾಡುವುದು ಬೇಡ ಕರ್ನಾಟಕ ಶಾಂತಿಯ ತೋಟ ಅದನ್ನೆಲ್ಲ ನಾವು ಉಳಿಸಬೇಕು ಎಂದು ದೊಡ್ಡಬಳ್ಳಾಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸಿದ್ದರಾಮಯ್ಯ ಪ್ರತಿಕ್ರಿಯೆ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ದ್ವಂಸಗೊಳಿಸಿದ್ದರ ಬಗ್ಗೆ ಇದು ದೇಶ ದ್ರೋಹದ ಕೃತ್ಯವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿದ್ದು,,ಸಂಗೊಳ್ಳಿ ರಾಯಣ್ಣ ಈ ದೇಶದ ಸ್ವಾಭಿಮಾನಿ, ದೇಶ ಭಕ್ತ. ಇಂತಹ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಪ್ರಮುಖ ಸಭೆ ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಹಾನಿ ಮಾಡಿದ ಹಿನ್ನಲೆಯಲ್ಲಿ ಪ್ರವೀಣ್ ಶೆಟ್ಟಿ ಅವರ ನೇತೃತ್ವದಲ್ಲಿ ಇಂದು ಪ್ರಮುಖ ಸಭೆ ಕರೆಯಲಾಗಿದೆ. ಚಾಲುಕ್ಯ ಸರ್ಕಲ್ ಬಳಿಯಿರುವ ಗಾಲ್ಪ್ ಕ್ಲಬ್ ನಲ್ಲಿ ಸಭೆ ಆಯೋಜಿಸಲಾಗಿದ್ದು, ಮನಸ್ಥಾಪ ಬಿಟ್ಟು ಕನ್ನಡ ಪರ ಹೋರಾಟಗಾರರು ಒಂದಾಗುವಂತೆ ಮನವಿ ಮಾಡಿದ್ದಾರೆ. ಸಭೆಯಲ್ಲಿಕರ್ನಾಟಕ ಬಂದ್ ಮಾಡುವ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

 ಇದನ್ನೂ ಓದಿ:

ಕನ್ನಡಿಗರು ಮರಾಠಿಗರ ಗುದ್ದಾಟ, ಗಡಿ ವಿವಾದ; ಡಿಸೆಂಬರ್ 13 ರಿಂದ ಏನೇನಾಯ್ತು? ಇಲ್ಲಿದೆ ಸಂಪೂರ್ಣ ವಿವರ

ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಸುರಿದ ಪ್ರಕರಣ: ಬೆಳಗಾವಿಯಲ್ಲಿ ದಿಢೀರ್ ಪ್ರತಿಭಟನೆ; ಬಿಗುವಿನ ವಾತಾವರಣ ನಿರ್ಮಾಣ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ