ಸೇಡಂ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಸವಂತರೆಡ್ಡಿ ಪಾಟೀಲ ನಿಧನ
ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಮಾಜಿ ಶಾಸಕ ಬಸವಂತರೆಡ್ಡಿ ಪಾಟೀಲ (88) ನಿನ್ನೆ(ಜ.4) ಜಿಲ್ಲೆಯ ಸೇಡಂ ತಾಲೂಕಿನ ಮೋತಕಪಲ್ಲಿ ಗ್ರಾಮದಲ್ಲಿ ನಿಧನರಾಗಿದ್ದಾರೆ.

ಸೇಡಂ ವಿಧಾನಸಭಾ ಕ್ಷೇತ್ರ ಮಾಜಿ ಶಾಸಕ ಬಸವಂತ ರೆಡ್ಡಿ ಪಾಟೀಲ
ಕಲಬುರಗಿ: ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಶಾಸಕ ಬಸವಂತರೆಡ್ಡಿ ಪಾಟೀಲ (88) ನಿನ್ನೆ(ಜ.4) ಜಿಲ್ಲೆಯ ಸೇಡಂ ತಾಲೂಕಿನ ಮೋತಕಪಲ್ಲಿ ಗ್ರಾಮದಲ್ಲಿ ನಿಧನರಾಗಿದ್ದಾರೆ.
ಬಸವಂತರೆಡ್ಡಿ ಸೇಡಂ ವಿಧಾನಸಭಾ ಕ್ಷೇತ್ರದಲ್ಲಿ 1989 ಮತ್ತು 1999ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಇವರು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಇಂದು(ಜ.5) ಗ್ರಾಮದಲ್ಲಿರುವ ಜಮೀನಿನಲ್ಲಿ ನಡೆಸಲಾಗುವುದು.
ಹಿರಿಯ ರಾಜಕಾರಣಿ, ಮಾಜಿ ಶಾಸಕ ಕೆ ಮಲ್ಲಪ್ಪ ನಿಧನ



