ನಮ್ಮ ಪಕ್ಷದ ಈ ಪರಿಸ್ಥಿತಿ ನೋಡಿ ತೀವ್ರ ಬೇಸರ ಮತ್ತು ಆತಂಕವಾಗ್ತಿದೆ: ಅರವಿಂದ ಲಿಂಬಾವಳಿ ಅಚ್ಚರಿ ಹೇಳಿಕೆ

|

Updated on: Jul 26, 2024 | 9:50 PM

ಕರ್ನಾಟಕ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಸಾಬೀತಾಗಿದೆ. ಮಾಜಿ ಸಚಿವ ಅರವಿಂದ್ ಲಿಂಬಾವಳಿ ಅವರೇ ಬಹಿರಂಗವಾಗಿ ಪಕ್ಷದ ನಾಯಕರ ನಡೆಗೆ ಅಸಮಾಧಾನ ಹೊರಹಾಕಿದ್ದಾರೆ. ಅದರಲ್ಲೂ ಪ್ರಮುಖವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟದ ವಿಚಾರವನ್ನು ಪ್ರಸ್ತಾಪಿಸಿ ತಮ್ಮ ನಾಯಕರ ನಡೆ ಬಗ್ಗೆ ತೀವ್ರ ಬೇಸರ ವ್ಯಕ್ತಪಪಡಿಸಿದ್ದಾರೆ.

ನಮ್ಮ ಪಕ್ಷದ ಈ ಪರಿಸ್ಥಿತಿ ನೋಡಿ ತೀವ್ರ ಬೇಸರ ಮತ್ತು ಆತಂಕವಾಗ್ತಿದೆ: ಅರವಿಂದ ಲಿಂಬಾವಳಿ ಅಚ್ಚರಿ ಹೇಳಿಕೆ
ನಮ್ಮ ಪಕ್ಷದ ಈ ಪರಿಸ್ಥಿತಿ ನೋಡಿ ತೀವ್ರ ಬೇಸರ ಮತ್ತು ಆತಂಕವಾಗ್ತಿದೆ: ಅರವಿಂದ ಲಿಂಬಾವಳಿ ಅಚ್ಚರಿ ಹೇಳಿಕೆ
Follow us on

ಬೆಂಗಳೂರು, ಜುಲೈ 26: ಇಂದಿನ ನಮ್ಮ ಪಕ್ಷದ ಈ ಪರಿಸ್ಥಿತಿ ನೋಡಿ ತೀವ್ರ ಬೇಸರ ಮತ್ತು ಆತಂಕವಾಗುತ್ತಿದೆ ಎಂದು ಮಾಜಿ ಮಾಜಿ ಸಚಿವ ಅರವಿಂದ ಲಿಂಬಾವಳಿ (arvind limbavali) ಸ್ವಪಕ್ಷದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ಬಾರಿಯ ಅಧಿವೇಶನದಲ್ಲಿ ಪ್ರತಿಪಕ್ಷವಾಗಿ ಬಿಜೆಪಿ (BJP) ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದ್ದಾರೆ. ಅಧಿವೇಶನದಲ್ಲಿ ನಾಯಕರ ನಡೆ ಗಮನಿಸಿದರೆ, ಮುಂದಿನ ದಿನಗಳಲ್ಲಿ ಬಿಜೆಪಿ ಜನಪರ ಹೋರಾಟಗಳಲ್ಲಿ ಹೇಗೆ ತನ್ನನ್ನು ತೊಡಗಿಸಿಕೊಳ್ಳಬಹುದು ಎಂಬುದು ನಿಷ್ಠಾವಂತ, ದೇವದುರ್ಲಭ ಕಾರ್ಯಕರ್ತರಿಗೆ ಆತಂಕದ ವಿಷಯವಾಗಿದೆ ಎಂದಿದ್ದಾರೆ.

ಬೆರಳೆಣಿಕೆಯಷ್ಟು ಶಾಸಕರನ್ನು ಹೊಂದಿದ್ದ ದಿನಗಳಲ್ಲೂ ಕಲಾಪಗಳಲ್ಲಿ ಆರ್ಭಟಿಸುತ್ತಿದ್ದ, ಜನರ ಆಶೋತ್ತರಗಳಿಗೆ ದನಿಯಾಗುತ್ತಿದ್ದ ಬಿಜೆಪಿಯನ್ನು ನೋಡಿದ್ದ ನನಗೆ, ಸದ್ಯದ ಪಕ್ಷದ ಈ ಪರಿಸ್ಥಿತಿ ನೋಡಿ ತೀವ್ರ ಬೇಸರವಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಬದಲಾವಣೆ ಸೇರಿದಂತೆ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಐಟಿ-ಬಿಟಿ ರಾಜಧಾನಿ ಎನಿಸಿರುವ, ವಿಜ್ಞಾನ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿಯಾಗಿರುವ ಬೆಂಗಳೂರು ಸೇರಿದಂತೆ, ಅನೇಕ ಜಿಲ್ಲೆಗಳಲ್ಲಿ ಡೆಂಗ್ಯೂ ತಾಂಡವವಾಡುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ನೆರೆ ಹಾವಳಿಯಿಂದ ಲಕ್ಷಾಂತರ ಜನ ಮನೆ-ಮಠ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಈ ಬಗ್ಗೆ ಬೆಳಕು ಚೆಲ್ಲಬೇಕು, ಜನರ ಸಂಕಷ್ಟಕ್ಕೆ ಕನ್ನಡಿಯಾಗಬೇಕು ಎಂದು ನಮ್ಮ ಪಕ್ಷದ ನಾಯಕರಿಗೆ ಅನಿಸದೇ ಹೋದುದು ದುರ್ದೈವ! ಪ್ರವಾಹಕ್ಕೂ ಮೊದಲು ಈ ಹಿಂದಿನ ವರ್ಷದ ಬರ ಪರಿಹಾರವೂ ಅನೇಕ ರೈತರಿಗೆ ತಲುಪಿಲ್ಲ. ಆ ಬಗ್ಗೆ ಪ್ರತಿಪಕ್ಷದ ನಾಯಕರು ಮಾತಾಡಲೇ ಇಲ್ಲ ಎಂದಿದ್ದಾರೆ.

ಶಾಸಕರೂ ಆಗಿರುವ ನಮ್ಮ ಪಕ್ಷದ ಅಧ್ಯಕ್ಷರು ಮತ್ತು ಪ್ರತಿಪಕ್ಷ ನಾಯಕರ ಮಧ್ಯೆ ಸಾಮರಸ್ಯ, ಹೊಂದಾಣಿಕೆ ಮತ್ತು ತಾಳ-ಮೇಳ ಇಲ್ಲದೇ ಹೋದದ್ದು ವಿಷಾದನೀಯ. ಇದರ ಸಂಪೂರ್ಣ ಲಾಭವನ್ನು ಆಡಳಿತ ಪಕ್ಷ ಪಡೆಯಲು ಸಹಾಯಕವಾಯಿತು. ಸಿಕ್ಕ ಅವಕಾಶ ಮತ್ತು ಸಮಯವನ್ನು ಸದನದಲ್ಲಿ ಸಮರ್ಪಕವಾಗಿ ಬಳಸಿಕೊಳ್ಳದೇ, ಇಡೀ ಅಧಿವೇಶನದಲ್ಲಿ ವೃಥಾ ಕಾಲಹರಣ ಮಾಡಿ, ಇನ್ನೂ ಒಂದು ದಿನ ಬಾಕಿ ಇರುವಾಗಲೇ ಸದನದ ಕಲಾಪಗಳನ್ನು ಮೊಟಕುಗೊಳಿಸುವಲ್ಲಿ ಆಡಳಿತ ಪಕ್ಷದವರೊಂದಿಗೆ ಕೈಜೋಡಿಸಿದ ನಮ್ಮ ಪಕ್ಷದ ನಾಯಕರ ನಡೆ ಪ್ರಶ್ನಾರ್ಹ.

ಇದನ್ನೂ ಓದಿ: ಗುಡ್​ನ್ಯೂಸ್: ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಕೆ

ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಗ್ಯಾರಂಟಿ ಯೋಜನೆ ಹಣಕ್ಕೆ ಎಸ್‌ಸಿ-ಎಸ್‌ಟಿಗೆ ಮೀಸಲಿಟ್ಟಿರುವ ಅನುದಾನ ದುರ್ಬಳಕೆ ಹೀಗೆ ಯಾವ ವಿಷಯವನ್ನೂ ಒಂದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ನಮ್ಮ ಪಕ್ಷಕ್ಕೆ ಸಾಧ್ಯವಾಗಲಿಲ್ಲ. ಈ ವಿಷಯಗಳ ಬಗ್ಗೆ ಪರಿಣಾಮಕಾರಿಯಾಗಿ ವಿಷಯ ಮಂಡಿಸಲು ಪ್ರತಿಪಕ್ಷದ ನಾಯಕರೂ ವಿಫಲರಾದರು. ಆಡಳಿತ ಪಕ್ಷದೊಂದಿಗೆ ಪ್ರತಿಪಕ್ಷ ಶಾಮೀಲಾಗಿದೆಯಾ ಎಂದು ಜನ ಮಾತಾಡಿಕೊಳ್ಳುವಂತಾಯಿತು. ಮೈಸೂರಿನಲ್ಲಿ ಮುಡಾ ವಿರುದ್ಧ ನಡೆಸಿದ ಹೋರಾಟ ಕಣ್ಣೊರೆಸುವ ತಂತ್ರದಂತೆ ಕಂಡಿತು. ಒಟ್ಟಾರೆ ಪ್ರತಿಪಕ್ಷವಾಗಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.