IPS officer Pratap Reddy: ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ರಾಜಿನಾಮೆ
ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ಅವರು ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ಅವರ ನಿವೃತ್ತಿಗೆ ಎರಡು ತಿಂಗಳು ಬಾಕಿ ಇತ್ತು. ಇದೇ ವರ್ಷ ಮೇ ತಿಂಗಳು ನಿವೃತ್ತಿಯಾಗುತ್ತಿದ್ದರು.
ಬೆಂಗಳೂರು, ಫೆಬ್ರವರಿ 09: ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ (IPS officer Pratap Reddy) ಅವರು ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ (Government) ಪತ್ರ ಬರೆದಿದ್ದಾರೆ. ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ (DGP) ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ಅವರ ನಿವೃತ್ತಿಗೆ ಎರಡು ತಿಂಗಳು ಬಾಕಿ ಇತ್ತು. ಇದೇ ವರ್ಷ ಮೇ ತಿಂಗಳು ನಿವೃತ್ತಿಯಾಗುತ್ತಿದ್ದರು. ಆದರೆ ಅವರು ವೈಯಕ್ತಿಕ ಕಾರಣವನ್ನು ನೀಡಿ ರಾಜಿನಾಮೆ ಸಲ್ಲಿಕೆ ಮಾಡಿದ್ದಾರೆ. ಇದು ರಾಜ್ಯ ಪೊಲೀಸ್ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಏಪ್ರಿಲ್ 30ಕ್ಕೆ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಹಿರಿಯ ಐಪಿಎಸ್ ಅಧಿಕಾರಿ ಸಿ. ಹೆಚ್ ಪ್ರತಾಪ್ ರೆಡ್ಡಿ ಅವರು ಜು. 01 1964ರಲ್ಲಿ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಜನಸಿದರು. ಪ್ರತಾಪ್ ರೆಡ್ಡಿ ಬಿ.ಟೆಕ್ ಪದವೀಧರರು. ಇವರು 1991ರಲ್ಲಿ ಕರ್ನಾಟಕ ಕೆಡರ್ನ ಐಪಿಎಸ್ ಅಧಿಕಾರಿಯಾಗಿ ಕಾರ್ಯವನ್ನು ಆರಂಭಿಸಿದರು. ಕರ್ನಾಟಕದಲ್ಲಿ ಹಾಸನ ಜಿಲ್ಲೆಯಲ್ಲಿ ಸಹಾಯಕ ಸೂಪರಿಟೆಂಡೆಂಟ್ ಆಗಿ ಪ್ರತಾಪ್ ರೆಡ್ಡಿ ಅವರು ಕೆಲಸ ಆರಂಭಿಸಿದರು. ಉತ್ತರ ಕರ್ನಾಟಕ ಭಾಗದಲ್ಲಿ ಎಸ್ಪಿಯಾಗಿ, ಸಿಐಡಿಯಾಗಿ ಹಲವಾರು ಮಹತ್ವದ ಪ್ರಕರಣಗಳನ್ನು ಭೇದಿಸಿದ್ದಾರೆ.
ಇದನ್ನೂ ಓದಿ: IPS Transferred: ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ
ಪ್ರತಾಪ್ ರೆಡ್ಡಿ ಅವರು ಸಿಬಿಐನ ಭ್ರಷ್ಟಾಚಾರ ನಿಗ್ರಹ ದಳದ ಮುಂಬೈ ಮತ್ತು ಬೆಂಗಳೂರು ವಿಭಾಗದಲ್ಲಿ ಕೆಲಸ ಮಾಡಿದ್ದಾರೆ. ಬ್ಯಾಂಕಿಂಗ್ ಮತ್ತು ಸೈಬರ್ ಸೆಕ್ಯುರಿಟಿ ವಿಭಾಗದ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವ ಮೂಲಕ ರಾಷ್ಟ್ರೀಯ ಮಟ್ಟದಲ್ಲಿಯೂ ಗುರುತಿಸಿಕೊಂಡಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಕಮಲ್ ಪಂತ ಅವರ ಬಳಿಕ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿತ್ತು.
ರಾಜ್ಯದ ಕೂಲ್ ಐಪಿಎಸ್ ಅಧಿಕಾರಿಗಳಲ್ಲಿ ಪ್ರತಾಪ್ ರೆಡ್ಡಿ ಅವರು ಸಹ ಒಬ್ಬರು. ಪ್ರತಾಪ್ ರೆಡ್ಡಿ ಅವರು ರಾಷ್ಟ್ರಪತಿ ಪದಕ ಮತ್ತು ಮುಖ್ಯಮಂತ್ರಿ ಪದಕ ಪಡೆದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ