ಪ್ರಸಿದ್ಧ ಲೇಖಕ, ಹಾಯ್ ಬೆಂಗಳೂರ್ ಸಂಪಾದಕ ರವಿ ಬೆಳಗೆರೆ ಇನ್ನಿಲ್ಲ

ಬೆಂಗಳೂರು: ಪ್ರಸಿದ್ಧ ಲೇಖಕ, ಹಾಯ್ ಬೆಂಗಳೂರ್ ಸಂಪಾದಕ ರವಿ ಬೆಳೆಗೆರೆ (62) ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪದ್ಮನಾಭನಗರದ ಆಫೀಸ್​ನಲ್ಲಿ ತಡ ರಾತ್ರಿ 12 ಗಂಟೆ ಸುಮಾರಿಗೆ ಹೃದಯಾಘಾತವಾಗಿದೆ. ಕೂಡಲೇ ರವಿ ಬೆಳಗೆರೆ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬೆಳಗೆರೆ ಅವರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರವಿ ಬೆಳಗೆರೆ ಅವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದು, ಬೆಳಗೆರೆ ಪಾರ್ಥಿವ ಶರೀರವನ್ನು ಆಸ್ಪತ್ರೆಯಿಂದ ಕನಕಪುರ ರಸ್ತೆಯಲ್ಲಿರುವ ಅವರ ನಿವಾಸ ಕರಿಷ್ಮಾ ಹಿಲ್ಸ್​ಗೆ ಶಿಫ್ಟ್ […]

ಪ್ರಸಿದ್ಧ ಲೇಖಕ, ಹಾಯ್ ಬೆಂಗಳೂರ್ ಸಂಪಾದಕ ರವಿ ಬೆಳಗೆರೆ ಇನ್ನಿಲ್ಲ
ಸಾಧು ಶ್ರೀನಾಥ್​

Updated on: Nov 13, 2020 | 7:54 AM

ಬೆಂಗಳೂರು: ಪ್ರಸಿದ್ಧ ಲೇಖಕ, ಹಾಯ್ ಬೆಂಗಳೂರ್ ಸಂಪಾದಕ ರವಿ ಬೆಳೆಗೆರೆ (62) ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪದ್ಮನಾಭನಗರದ ಆಫೀಸ್​ನಲ್ಲಿ ತಡ ರಾತ್ರಿ 12 ಗಂಟೆ ಸುಮಾರಿಗೆ ಹೃದಯಾಘಾತವಾಗಿದೆ. ಕೂಡಲೇ ರವಿ ಬೆಳಗೆರೆ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬೆಳಗೆರೆ ಅವರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ರವಿ ಬೆಳಗೆರೆ ಅವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದು, ಬೆಳಗೆರೆ ಪಾರ್ಥಿವ ಶರೀರವನ್ನು ಆಸ್ಪತ್ರೆಯಿಂದ ಕನಕಪುರ ರಸ್ತೆಯಲ್ಲಿರುವ ಅವರ ನಿವಾಸ ಕರಿಷ್ಮಾ ಹಿಲ್ಸ್​ಗೆ ಶಿಫ್ಟ್ ಮಾಡಲಾಗಿದೆ. ಬೆಳಗ್ಗೆ 9 ಗಂಟೆಯಿಂದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಪ್ರಾರ್ಥನಾ ಶಾಲೆ ಮೈದಾನದಲ್ಲಿ ರವಿ ಬೆಳಗೆರೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ರವಿ ಬೆಳಗೆರೆ ತಮ್ಮ ಆತ್ಮೀಯ ಬರಹಗಳ ಮೂಲಕ ದೊಡ್ಡ ಅಭಿಮಾನಿಗಳ ಬಳಗವನ್ನೇ ನಿರ್ಮಿಸಿಕೊಂಡಿದ್ದರು. ರವಿಯನ್ನು ಕಳೆದುಕೊಂಡ ಅವರ ಅಭಿಮಾನಿ ಬಳಗ ಹಾಗೂ ಕುಟುಂಬಸ್ಥರು ಶೋಕಸಾಗರದಲ್ಲಿ ಮುಳುಗಿದ್ದಾರೆ.

ಪತ್ರಕರ್ತ ರವಿ ಬೆಳಗೆರೆ ನಿಧನ: Ravi Belagere Passed Away

Published On - 7:51 am, Fri, 13 November 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us