ಹಿರಿಯ ಪತ್ರಕರ್ತ ಕೂಡ್ಲಿ ಗುರುರಾಜ್ ಅವರ ‘ಸುದ್ದಿ ಬರಹ ಮತ್ತು ವರದಿಗಾರಿಕೆ’ ಪುಸ್ತಕ ಬಿಡುಗಡೆ

ಮೈಸೂರು: ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೆಗೌಡ ಹಿರಿಯ ಪತ್ರಕರ್ತ ಡಾ ಕೂಡ್ಲಿ ಗುರುರಾಜ್ ಅವರ ‘ಸುದ್ದಿ ಬರಹ ಮತ್ತು ವರದಿಗಾರಿಕೆ’ ಪುಸ್ತಕವನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ಡಾ ಕೂಡ್ಲಿ ಗುರುರಾಜ್ ಪತ್ರಿಕೋದ್ಯಮದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಈ ಪುಸ್ತಕವನ್ನು ಬರೆದಿದ್ದೇನೆ. ಕ್ಲಾಸ್​ರೂಂ ಹಾಗೂ ನ್ಯೂಸ್​ರೂಂನ ನಡುವೆ ಸಂಪರ್ಕ ಸಾಧಿಸಲು ಈ ಪುಸ್ತಕ ಸಹಕಾರಿಯಾಗಿದೆ ಎಂದು ಹೇಳಿದರು. ಈ ಪುಸ್ತಕದಲ್ಲಿ 11 ಜನ ಹಿರಿಯ […]

ಹಿರಿಯ ಪತ್ರಕರ್ತ ಕೂಡ್ಲಿ ಗುರುರಾಜ್ ಅವರ ‘ಸುದ್ದಿ ಬರಹ ಮತ್ತು ವರದಿಗಾರಿಕೆ’ ಪುಸ್ತಕ ಬಿಡುಗಡೆ
Edited By:

Updated on: Nov 26, 2020 | 6:27 PM

ಮೈಸೂರು: ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೆಗೌಡ ಹಿರಿಯ ಪತ್ರಕರ್ತ ಡಾ ಕೂಡ್ಲಿ ಗುರುರಾಜ್ ಅವರ ‘ಸುದ್ದಿ ಬರಹ ಮತ್ತು ವರದಿಗಾರಿಕೆ’ ಪುಸ್ತಕವನ್ನು ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ಡಾ ಕೂಡ್ಲಿ ಗುರುರಾಜ್ ಪತ್ರಿಕೋದ್ಯಮದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಈ ಪುಸ್ತಕವನ್ನು ಬರೆದಿದ್ದೇನೆ. ಕ್ಲಾಸ್​ರೂಂ ಹಾಗೂ ನ್ಯೂಸ್​ರೂಂನ ನಡುವೆ ಸಂಪರ್ಕ ಸಾಧಿಸಲು ಈ ಪುಸ್ತಕ ಸಹಕಾರಿಯಾಗಿದೆ ಎಂದು ಹೇಳಿದರು.

ಈ ಪುಸ್ತಕದಲ್ಲಿ 11 ಜನ ಹಿರಿಯ ಪತ್ರಕರ್ತರು ತಮ್ಮ ಅನುಭವವನ್ನು ದಾಖಲಿಸಿದ್ದಾರೆ. ‘ಸುದ್ದಿ ಬರಹ ಮತ್ತು ವರದಿಗಾರಿಕೆ’ ಪುಸ್ತಕ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎನ್ನುವುದು ನನ್ನ ಉದ್ದೇಶ ಎಂದು ಅವರು ಹೇಳಿದರು.