AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೋಲಾರ ಜಿಲ್ಲೆ ಚೌಡದೇವನಹಳ್ಳಿಯಲ್ಲಿ ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ.

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ
ಹಿರಿಯ ಪತ್ರಕರ್ತ ಅರ್ಜುನ್​ ದೇವ
TV9 Web
| Edited By: |

Updated on: Apr 24, 2024 | 12:08 PM

Share

ಬೆಂಗಳೂರು ಏಪ್ರಿಲ್​ 22: ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರ ಹುಟ್ಟೂರಾದ ಕೋಲಾರ ಜಿಲ್ಲೆ ಚೌಡದೇವನಹಳ್ಳಿಯಲ್ಲಿ ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಕೆಲಸ ಮಾಡಿದ್ದರು.

ಕೆಯುಡಬ್ಲೂಜೆ ಸಂತಾಪ:

ಹಿರಿಯ ಪತ್ರಕರ್ತರದ ಅರ್ಜುನ್ ದೇವ್‌ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಪ್ರಜಾವಾಣಿ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಸಲ್ಲಿಸಿದ್ದ ಸೇವೆ ಅನನ್ಯವಾದದ್ದು. ಪತ್ರಕರ್ತರ ಸಂಘಟನೆಯಲ್ಲಿ ಅವರಿಗಿದ್ದ ಬದ್ಧತೆ, ಸಮಾಜಮುಖಿಯಾಗಿ ತೊಡಗಿಸಿಕೊಳ್ಳುವ ಪರಿ ನಿಜಕ್ಕೂ ಶ್ಲಾಘನೀಯ.

ಸಂಘದ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದ ಅರ್ಜುನ್ ದೇವ್ ಅವರ ನಿಧನದಿಂದ ಸುದ್ದಿಮನೆಗೆ ತುಂಬಲಾರದ ನಷ್ಟವಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಶೋಕಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!