ಹಿರಿಯರಲ್ಲಿ ಅಸಮಾಧಾನವೇನೂ ಇಲ್ಲ, ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಪ್ರಯತ್ನ ಮಾಡಲಾಗುವುದು: ಬಿಎಸ್ ಯಡಿಯೂರಪ್ಪ
ಯಾವುದೇ ಜವಾಬ್ದಾರಿಯುತ ಸ್ಥಾನ ನಿಭಾಯಿಸುವುದು ಸುಲಭದ ಕೆಲಸವಲ್ಲ, ಬಹಳ ಶ್ರಮ ಪಡಬೇಕಾಗುತ್ತದೆ, ಪಕ್ಷವನ್ನು ಸಂಘಟಿಸಿ ಲೋಕ ಸಭಾ ಚುನಾವಣೆಯಲ್ಲಿ ಮತ್ತೊಮ್ಮೆ 25 ಸ್ಥಾನ ಗೆಲ್ಲುವ ಪ್ರಯತ್ನ ಮಾಡುತ್ತೇವೆ ಅಂತ ಯಡಿಯೂರಪ್ಪ ಹೇಳಿದರು.
ಬೆಂಗಳೂರು: ತಮ್ಮ ಮಗನನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮಾಡಿದ್ದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಲ್ಲಿ (BS Yediyurappa) ಹೊಸ ಹುಮ್ಮಸ್ಸು ಮೂಡಿಸಿದೆ. ಕುಟುಂಬ ರಾಜಕಾರಣವನ್ನು ದ್ವೇಷಿಸುವ ಬಿಜೆಪಿ ವಿಜಯೇಂದ್ರರನ್ನು (BY Vijayendra) ಅಧ್ಯಕ್ಷ ಮಾಡಿದ್ದು ಆಶ್ಚರ್ಯ ಮೂಡಿಸುತ್ತಿದೆ ಅಂತ ಕಾಂಗ್ರೆಸ್ ನಾಯಕರು ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಅವರ ಟೀಕೆ ನಿರೀಕ್ಷಿಸಲಾಗಿತ್ತು, ಅದರಿಂದ ತೊಂದರೆಯೇನೂ ಇಲ್ಲ, ವಿಜಯೇಂದ್ರ ರಾಜ್ಯದೆಲ್ಲೆಡೆ ಓಡಾಡಿ ಪಕ್ಷ ಸಂಘಟನೆ (organise party) ಮಾಡುತ್ತಾರೆ, ಜನರ ಪ್ರತಿಕ್ರಿಯೆ ನೋಡಿದ ಬಳಿಕ ಅವರು ಟೀಕೆ ಮಾಡಲಿ ಎಂದು ಹೇಳಿದರು. ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಹಿರಿಯ ನಾಯಕರು ಆಕಾಂಕ್ಷಿಗಳಾಗಿದ್ದರೂ ಅವರಲ್ಲಿ ಅಸಮಾಧಾನವಿಲ್ಲ, ಎಲ್ಲರನ್ನೂ ಒಟ್ಟ್ಟಿಗೆ ತೆಗೆದುಕೊಂಡು ಹೋಗುವ ಕೆಲಸ ಮಾಡಲಾಗುವುದು ಎಂದು ಯಡಿಯೂರಪ್ಪ ಹೇಳಿದರು. ಯಾವುದೇ ಜವಾಬ್ದಾರಿಯುತ ಸ್ಥಾನ ನಿಭಾಯಿಸುವುದು ಸುಲಭದ ಕೆಲಸವಲ್ಲ, ಬಹಳ ಶ್ರಮ ಪಡಬೇಕಾಗುತ್ತದೆ, ಪಕ್ಷವನ್ನು ಸಂಘಟಿಸಿ ಲೋಕ ಸಭಾ ಚುನಾವಣೆಯಲ್ಲಿ ಮತ್ತೊಮ್ಮೆ 25 ಸ್ಥಾನ ಗೆಲ್ಲುವ ಪ್ರಯತ್ನ ಮಾಡುತ್ತೇವೆ ಅಂತ ಯಡಿಯೂರಪ್ಪ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
