ಕೆಎಸ್​​ ಈಶ್ವರಪ್ಪ ಪುತ್ರನಿಗೂ ಅಶ್ಲೀಲ ಸಿಡಿ ಭೀತಿ, ಕೋರ್ಟ್​ನಿಂದ ಸ್ಟೇ ತಂದ​ ಕಾಂತೇಶ್​

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್​ಡ್ರೈವ್​ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ, ಕೆಎಸ್ ಈಶ್ವರಪ್ಪ ಅವರ ಪುತ್ರನಿಗೂ ಅಶ್ಲೀಲ ಸಿಡಿ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್​ನಿಂದ ಸ್ಟೇ ತಂದಿದ್ದಾರೆ.

ಕೆಎಸ್​​ ಈಶ್ವರಪ್ಪ ಪುತ್ರನಿಗೂ ಅಶ್ಲೀಲ ಸಿಡಿ ಭೀತಿ, ಕೋರ್ಟ್​ನಿಂದ ಸ್ಟೇ ತಂದ​ ಕಾಂತೇಶ್​
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Apr 30, 2024 | 10:01 PM

ಬೆಂಗಳೂರು, (ಏಪ್ರಿಲ್ 30): ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆಎಸ್ ಈಶ್ವರಪ್ಪ (senior politician KS Eshwarappa) ಪುತ್ರ ಕಾಂತೇಶ್​ಗೂ (kanthesh )ಸಹ ಅಶ್ಲೀಲ ಸಿಡಿ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದು, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ನಿರ್ಬಂಧಕಾಜ್ಞೆ ಹೊರಡಿಸಿದೆ.

ಲೋಕಸಭೆ ಚುನಾವಣೆ ವೇಳೆ ತಮ್ಮ ಹೆಸರಿಗೆ ಮಸಿ ಬಳಿಯುವ ಯತ್ನ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತವಾಗಿ ಕಾಂತೇಶ್​ ಅವರು ಮಾಧ್ಯಮಗಳಲ್ಲಿ ಮಾನಹಾನಿಕರ ದೃಶ್ಯ ಪ್ರಸಾರಕ್ಕೆ ನಿರ್ಬಂಧ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪರಿಗಣಿಸಿದ ಕೋರ್ಟ್, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ಹೊರಡಿಸಿದೆ.

ಇದನ್ನೂ ಓದಿ: 3 ತಿಂಗಳ ಹಿಂದೆಯೇ ಪ್ರಜ್ವಲ್ ರೇವಣ್ಣ ವಿಡಿಯೋ ಗುಟ್ಟು ರಟ್ಟು ಮಾಡಿದ್ದ ಬಿಜೆಪಿ ನಾಯಕ

ಕೆಎಸ್​ ಈಶ್ವರಪ್ಪ ಪುತ್ರ ಕಾಂತೇಶ್ ಅವರು ಈ ಬಾರಿ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಹೈಕಮಾಂಡ್​ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಿದೆ. ಇದರಿಂದ ಆಕ್ರೋಶಗೊಂಡಿರುವ ಕೆಎಸ್ ಈಶ್ವರಪ್ಪ ಯಡಿಯೂರಪ್ಪ ಹಾಗೂ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಸಿಡಿದೆದ್ದಿದ್ದಾರೆ. ಅಲ್ಲದೇ ಕುಟುಂಬ ರಾಜಕಾರಣವನ್ನು ಕೊನೆಗಾಣಿಸಬೇಕೆಂದು ಶಿವಮೊಗ್ಗದಲ್ಲಿ ಬಿಎಸ್​ವೈ ಪುತ್ರ ರಾಘವೇಂದ್ರ ವಿರುದ್ಧ ಸ್ಪರ್ಧೆಗಿಳಿದಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರಿಂದ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿದೆ. ಇದೀಗ ಪಕ್ಷೇತರವಾಗಿ ಕಣಕ್ಕಿಳಿದಿರುವ ಈಶ್ವರಪ್ಪ ರಾಘವೇಂದ್ರ ಅವರನ್ನು ಸೋಲಿಸಬೇಕೆಂದು ಪಣತೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:38 pm, Tue, 30 April 24

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್