Jayanthi Death: ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ಇನ್ನಿಲ್ಲ

| Updated By: ಮದನ್​ ಕುಮಾರ್​

Updated on: Jul 26, 2021 | 10:12 AM

Jayanthi Death News: 1945ರ ಜನವರಿ 6ರಂದು ಕರ್ನಾಟಕದ ಬಳ್ಳಾರಿಯಲ್ಲಿ ಜನಿಸಿದ ಜಯಂತಿಯ (actor jayanthi) ಮೂಲ ಹೆಸರು ಕಮಲಾ ಕುಮಾರಿ. ತಂದೆ ಬಾಲಸುಬ್ರಹ್ಮಣ್ಯಂ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಪಕರಾಗಿ ಕಾರ್ಯನಿರ್ವಹಿಸುತ್ತಿದ್ದರೆ, ತಾಯಿ ಸಂತಾನಲಕ್ಷ್ಮೀ ಗೃಹಿಣಿ. ಮನೆಯಲ್ಲಿ ಹಿರಿಯ ಪುತ್ರಿಯಾಗಿ ಜನಿಸಿದ ಜಯಂತಿಗೆ ಇಬ್ಬರು ಕಿರಿಯ ಸಹೋದರರಿದ್ದಾರೆ.

Jayanthi Death: ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ಇನ್ನಿಲ್ಲ
ಹಿರಿಯ ನಟಿ, ಅಭಿನವ ಶಾರದೆ ಜಯಂತಿ ಇನ್ನಿಲ್ಲ
Follow us on

ಬೆಂಗಳೂರು: ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ನಿವಾಸದಲ್ಲಿ ನಟಿ ಜಯಂತಿ ಕೊನೆಯುಸಿರೆಳೆದಿದ್ದಾರೆ ಎಂದು ಟಿವಿ9ಗೆ ನಟಿ ಜಯಂತಿ ಪುತ್ರ ಕೃಷ್ಣ ಕುಮಾರ್ ಮಾಹಿತಿ ನೀಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಅಭಿನಯ ಶಾರದೆ ಎಂದೇ ಕರೆಯಲ್ಪಡುವ ಜಯಂತಿ ದಕ್ಷಿಣ ಭಾರತ ಚಿತ್ರರಂಗದ ಮೇರು ನಟಿ. ಕನ್ನಡ,ತೆಲಗು,ತಮಿಳು,ಮಲಯಾಳಂ,ಹಿಂದಿ ಮತ್ತು ಮರಾಠಿ ಭಾಷೆಗಳೆಲ್ಲ ಸೇರಿ ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಜನವರಿ 6, 1945ರಲ್ಲಿ ಕರ್ನಾಟಕದ ಬಳ್ಳಾರಿಯಲ್ಲಿ ಜನಿಸಿದ ಜಯಂತಿಯ (actor jayanthi) ಮೂಲ ಹೆಸರು ಕಮಲಾ ಕುಮಾರಿ. ತಂದೆ ಬಾಲಸುಬ್ರಹ್ಮಣ್ಯಂ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ತಾಯಿ ಸಂತಾನಲಕ್ಷ್ಮೀ ಗೃಹಿಣಿಯಾಗಿದ್ದರು. ಮನೆಯಲ್ಲಿ ಹಿರಿಯ ಪುತ್ರಿಯಾಗಿ ಜನಿಸಿದ ಜಯಂತಿಗೆ ಇಬ್ಬರು ಕಿರಿಯ ಸಹೋದರರಿದ್ದಾರೆ. ಇವರ ತಂದೆ- ತಾಯಿಗಳು ವಿಚ್ಛೇದನ ಪಡೆದ ಕಾರಣ ಜಯಂತಿ ತಮ್ಮ ತಾಯಿಯ ಜೊತೆ ಮದ್ರಾಸ್‌ನಲ್ಲಿ ಬೆಳೆದರು.

ಜಯಂತಿಯ ತಾಯಿಯವರಿಗೆ ಇವರನ್ನು ಶಾಸ್ತ್ರೀಯ ನೃತ್ಯಗಾರ್ತಿಯನ್ನಾಗಿ ಮಾಡಬೇಕೆಂಬ ಬಯಕೆ ಇದ್ದುದ್ದರಿಂದ ಚಂದ್ರಕಲಾರವರ ನೃತ್ಯಶಾಲೆಗೆ ಸೇರಿಸಿದರು. ಇಲ್ಲಿ ಜಯಂತಿಯವರ ಸಹಪಾಠಿಯಾಗಿದ್ದ ಮನೋರಮಾರವರು ಮುಂದೆ ಪ್ರಖ್ಯಾತ ತಮಿಳು ನಟಿಯಾದರು.

ಕನ್ನಡ ನಿರ್ದೇಶಕ ವೈ.ಆರ್. ಪುಟ್ಟಸ್ವಾಮಿಯವರು ಒಂದು ನೃತ್ಯಾಭ್ಯಾಸದಲ್ಲಿ ಜಯಂತಿಯವರನ್ನು ನೋಡಿ ತಮ್ಮ `ಜೇನು ಗೂಡು’ ಚಿತ್ರದಲ್ಲಿ ನಟಿಸುವ ಅವಕಾಶ ಕೊಟ್ಟರು. ಇಲ್ಲಿಂದ ಜಯಂತಿಯವರ ಅದೃಷ್ಟವೇ ಬದಲಾಯಿತು. ಕಮಲಾ ಕುಮಾರಿಗೆ ಜಯಂತಿ ಎಂದು ನಾಮಕರಣ ಮಾಡಿದ್ದು ಪುಟ್ಟಸ್ವಾಮಿಯವರೇ.

ಕನ್ನಡದಲ್ಲಿ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ ಇವರು ಡಾ.ರಾಜ್ ಜೊತೆ ದಾಖಲೆಯ 45 ಚಿತ್ರಗಳಲ್ಲಿ ನಟಿಸಿದ್ದಾರೆ.

(Senior sandalwood actor jayanthi died)

Published On - 9:00 am, Mon, 26 July 21