ಕೇರಳದಿಂದ ಕರ್ನಾಟಕ ಪ್ರವೇಶಿಸುವವರಿಗೆ 72 ಗಂಟೆಗಳ ಒಳಗಿನ ನೆಗೆಟಿವ್ ರಿಪೋರ್ಟ್ ಕಡ್ಡಾಯ; ದಕ್ಷಿಣ ಕನ್ನಡ ಅನ್​ಲಾಕ್ ಕೆಟಗೆರಿ 1ರ ಪಟ್ಟಿಗೆ ಸೇರ್ಪಡೆ

Kerala to Karnataka: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊವಿಡ್ ಪಾಸಿಟಿವಿಟಿ ದರ ಕಡಿಮೆಯಾದ ಹಿನ್ನೆಲೆಯಲ್ಲಿ ಅನ್‌ಲಾಕ್‌ ಕೆಟಗರಿ-1ರ ಪಟ್ಟಿಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಸೇರ್ಪಡೆಗೊಳಿಸಲಾಗಿದೆ.

ಕೇರಳದಿಂದ ಕರ್ನಾಟಕ ಪ್ರವೇಶಿಸುವವರಿಗೆ 72 ಗಂಟೆಗಳ ಒಳಗಿನ ನೆಗೆಟಿವ್ ರಿಪೋರ್ಟ್ ಕಡ್ಡಾಯ; ದಕ್ಷಿಣ ಕನ್ನಡ ಅನ್​ಲಾಕ್ ಕೆಟಗೆರಿ 1ರ ಪಟ್ಟಿಗೆ ಸೇರ್ಪಡೆ
ಪ್ರಾತಿನಿಧಿಕ ಚಿತ್ರ
Follow us
| Updated By: guruganesh bhat

Updated on:Jul 01, 2021 | 7:40 PM

ಬೆಂಗಳೂರು: ಕೇರಳದಿಂದ ಕರ್ನಾಟಕ ಪ್ರವೇಶಕ್ಕೆ ಪ್ರತ್ಯೇಕ ಮಾರ್ಗಸೂಚಿ ರಚಿಸಿರುವ ಕರ್ನಾಟಕ ಸರ್ಕಾರ ವಿಮಾನ, ರೈಲು, ಬಸ್, ಕಾರು, ಟ್ಯಾಕ್ಸಿ ಸೇರಿದಂತೆ ಯಾವುದೇ ಮಾರ್ಗದ ಪ್ರಯಾಣಿಕರಿಗೆ 72 ಗಂಟೆಗಳ ಒಳಗಿನ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿದೆ. ದಕ್ಷಿಣಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳ ಗಡಿಯಲ್ಲಿ ತಪಾಸಣೆಗೆ ವಿಶೇಷ ಚೆಕ್‌ಪೋಸ್ಟ್ ರಚಿಸಲು ಆದೇಶಿಸಲಾಗಿದೆ. ನಿತ್ಯ ಕರ್ನಾಟಕ ಪ್ರವೇಶಿಸುವ ವಿದ್ಯಾರ್ಥಿಗಳು, ವ್ಯವಹಾರಸ್ಥರು ಮತ್ತು ಇತರರು 15 ದಿನಕ್ಕೊಮ್ಮೆ ಆರ್​ಟಿಪಿಸಿಆರ್ ಪರೀಕ್ಷೆಗೆಗೆ ಒಳಪಡಬೇಕು. 2 ಸಲ ಲಸಿಕೆ ಪಡೆದಿರುವವರಿಗೆ, 2 ವರ್ಷದ ಕೆಳಗಿನ ಮಕ್ಕಳಿಗೆ ಹೆಲ್ತ್ ಕೇರ್ ಸಿಬ್ಬಂದಿ, ಸಾಂವಿಧಾನಿಕ ಹುದ್ದೆಯಲ್ಲಿರುವವರಿಗೆ ಆರ್‌ಟಿಪಿಸಿಆರ್ ನೆಗೆಟಿವ್ ರಿಪೋರ್ಟ್‌ನಿಂದ ವಿನಾಯಿತಿ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊವಿಡ್ ಪಾಸಿಟಿವಿಟಿ ದರ ಕಡಿಮೆಯಾದ ಹಿನ್ನೆಲೆಯಲ್ಲಿ ಅನ್‌ಲಾಕ್‌ ಕೆಟಗರಿ-1ರ ಪಟ್ಟಿಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಸೇರ್ಪಡೆಗೊಳಿಸಲಾಗಿದೆ.

Covid 19 Karnataka Update: ಕರ್ನಾಟಕದಲ್ಲಿ 3203 ಮಂದಿಗೆ ಕೊರೊನಾ ಸೋಂಕು, 94 ಜನರ ಸಾವು ಕರ್ನಾಟಕದಲ್ಲಿ ಗುರುವಾರ 3,203 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 94 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಇಂದು ಒಂದೇ ದಿನ 676 ಜನರಿಗೆ ಸೋಂಕು ಕಾಣಿಸಿಕೊಂಡಿದ್ದು, 18 ಜನರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಪಟ್ಟಿಯಲ್ಲಿ ಕರ್ನಾಟಕ 3ನೇ ಸ್ಥಾನಕ್ಕೆ ಬಂದಿದೆ. ಇದು ಆಶಾದಾಯಕ ಬೆಳವಣಿಗೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿಂದು ಹೊಸದಾಗಿ 3,203 ಜನರಿಗೆ ಕೊರೊನಾ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 28,47,013ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 27,46,544 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 65,312 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 94 ಜನರು ಸಾವನ್ನಪ್ಪಿದ್ದಾರೆ. ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 35,134ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 676 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 18 ಜನರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,14,235ಕ್ಕೆ ಏರಿಕೆಯಾಗಿದೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 15,644 ಜನರು ಸಾವನ್ನಪ್ಪಿದ್ದಾರೆ. ನಗರದ 12,14,235 ಸೋಂಕಿತರ ಪೈಕಿ 11,65,074 ಜನರು ಗುಣಮುಖರಾಗಿದ್ದಾರೆ. 33,516 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಗ್ರಾಮ ಪಂಚಾಯತಿ ಮಟ್ಟದ ನೌಕರರ ಕಾಯಮಾತಿ ಇಲ್ಲ, ಕೊವಿಡ್​ನಿಂದ ಮೃತಪಟ್ಟರೆ 30 ಲಕ್ಷ ಪರಿಹಾರ; ಸಚಿವ ಈಶ್ವರಪ್ಪ

National Doctors Day 2021: ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊವಿಡ್​ ಸಮಯದಲ್ಲಿ ಕೆಲಸ ನಿರ್ವಹಿಸುತ್ತಿರುವ ವೈದ್ಯರು ಎದುರಿಸಿದ ಕೆಲವು ಸಮಸ್ಯೆಗಳು

(Separate Covid 19 Guidelines for Entrants to Karnataka from Kerala)

Published On - 7:33 pm, Thu, 1 July 21

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು