ಬೆಂಗಳೂರು: ಕೇರಳದಿಂದ ಕರ್ನಾಟಕ ಪ್ರವೇಶಕ್ಕೆ ಪ್ರತ್ಯೇಕ ಮಾರ್ಗಸೂಚಿ ರಚಿಸಿರುವ ಕರ್ನಾಟಕ ಸರ್ಕಾರ ವಿಮಾನ, ರೈಲು, ಬಸ್, ಕಾರು, ಟ್ಯಾಕ್ಸಿ ಸೇರಿದಂತೆ ಯಾವುದೇ ಮಾರ್ಗದ ಪ್ರಯಾಣಿಕರಿಗೆ 72 ಗಂಟೆಗಳ ಒಳಗಿನ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿದೆ. ದಕ್ಷಿಣಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳ ಗಡಿಯಲ್ಲಿ ತಪಾಸಣೆಗೆ ವಿಶೇಷ ಚೆಕ್‌ಪೋಸ್ಟ್ ರಚಿಸಲು ಆದೇಶಿಸಲಾಗಿದೆ. ನಿತ್ಯ ಕರ್ನಾಟಕ ಪ್ರವೇಶಿಸುವ ವಿದ್ಯಾರ್ಥಿಗಳು, ವ್ಯವಹಾರಸ್ಥರು ಮತ್ತು ಇತರರು 15 ದಿನಕ್ಕೊಮ್ಮೆ ಆರ್‌ಟಿಪಿಸಿಆರ್ ಪರೀಕ್ಷೆಗೆಗೆ ಒಳಪಡಬೇಕು. 2 ಸಲ ಲಸಿಕೆ ಪಡೆದಿರುವವರಿಗೆ, 2 ವರ್ಷದ ಕೆಳಗಿನ ಮಕ್ಕಳಿಗೆ ಹೆಲ್ತ್ ಕೇರ್ ಸಿಬ್ಬಂದಿ, ಸಾಂವಿಧಾನಿಕ ಹುದ್ದೆಯಲ್ಲಿರುವವರಿಗೆ ಆರ್‌ಟಿಪಿಸಿಆರ್ ನೆಗೆಟಿವ್ ರಿಪೋರ್ಟ್‌ನಿಂದ ವಿನಾಯಿತಿ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊವಿಡ್ ಪಾಸಿಟಿವಿಟಿ ದರ ಕಡಿಮೆಯಾದ ಹಿನ್ನೆಲೆಯಲ್ಲಿ ಅನ್‌ಲಾಕ್ ಕೆಟಗರಿ-1ರ ಪಟ್ಟಿಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಸೇರ್ಪಡೆಗೊಳಿಸಲಾಗಿದೆ.
Covid 19 Karnataka Update: ಕರ್ನಾಟಕದಲ್ಲಿ 3203 ಮಂದಿಗೆ ಕೊರೊನಾ ಸೋಂಕು, 94 ಜನರ ಸಾವು
ಕರ್ನಾಟಕದಲ್ಲಿ ಗುರುವಾರ 3,203 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 94 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಇಂದು ಒಂದೇ ದಿನ 676 ಜನರಿಗೆ ಸೋಂಕು ಕಾಣಿಸಿಕೊಂಡಿದ್ದು, 18 ಜನರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಪಟ್ಟಿಯಲ್ಲಿ ಕರ್ನಾಟಕ 3ನೇ ಸ್ಥಾನಕ್ಕೆ ಬಂದಿದೆ. ಇದು ಆಶಾದಾಯಕ ಬೆಳವಣಿಗೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿಂದು ಹೊಸದಾಗಿ 3,203 ಜನರಿಗೆ ಕೊರೊನಾ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 28,47,013ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 27,46,544 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 65,312 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 94 ಜನರು ಸಾವನ್ನಪ್ಪಿದ್ದಾರೆ. ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 35,134ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 676 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 18 ಜನರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,14,235ಕ್ಕೆ ಏರಿಕೆಯಾಗಿದೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 15,644 ಜನರು ಸಾವನ್ನಪ್ಪಿದ್ದಾರೆ. ನಗರದ 12,14,235 ಸೋಂಕಿತರ ಪೈಕಿ 11,65,074 ಜನರು ಗುಣಮುಖರಾಗಿದ್ದಾರೆ. 33,516 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಗ್ರಾಮ ಪಂಚಾಯತಿ ಮಟ್ಟದ ನೌಕರರ ಕಾಯಮಾತಿ ಇಲ್ಲ, ಕೊವಿಡ್ನಿಂದ ಮೃತಪಟ್ಟರೆ 30 ಲಕ್ಷ ಪರಿಹಾರ; ಸಚಿವ ಈಶ್ವರಪ್ಪ
(Separate Covid 19 Guidelines for Entrants to Karnataka from Kerala)
Published On - 7:33 pm, Thu, 1 July 21