ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಸೆ. 15 ಡೆಡ್​​ಲೈನ್: ಕೇವಲ 52 ಲಕ್ಷ ವಾಹನಗಳಿಗಷ್ಟೇ ಅಳವಡಿಕೆ

ಮೂರು ಬಾರಿಯ ಗಡುವು ವಿಸ್ತರಣೆಯ ನಂತರ ಕೊನೆಗೂ ಇದೀಗ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಯ ಕೊನೆಯ ಡೆಡ್​​ಲೈನ್ ಸೆಪ್ಟೆಂಬರ್ 15ರಂದು ಕೊನೆಗೊಳ್ಳಲಿದೆ. ನಿಯಮದ ಪ್ರಕಾರ, ಎಚ್‌ಎಸ್‌ಆರ್‌ಪಿ ಅಳವಡಿಸದ ವಾಹನ ಮಾಲೀಕರಿಗೆ ಸೆಪ್ಟೆಂಬರ್ 16ರಿಂದ 500 ರೂ. ದಂಡ ವಿಧಿಸಲಾಗುತ್ತದೆ. ಆದರೆ, ಸೆಪ್ಟೆಂಬರ್ 18ರ ವರೆಗೆ ಬಲವಂತದ ಕ್ರಮ ಇಲ್ಲ ಎಂದಿದ್ದಾರೆ ಕರ್ನಾಟಕ ಸಾರಿಗೆ ಆಯುಕ್ತ ಯೋಗೇಶ್! ಕಾರಣ ಇಲ್ಲಿದೆ.

ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಸೆ. 15 ಡೆಡ್​​ಲೈನ್: ಕೇವಲ 52 ಲಕ್ಷ ವಾಹನಗಳಿಗಷ್ಟೇ ಅಳವಡಿಕೆ
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ (ಸಾಂದರ್ಭಿಕ ಚಿತ್ರ)
Follow us
|

Updated on: Sep 14, 2024 | 3:02 PM

ಬೆಂಗಳೂರು, ಸೆಪ್ಟೆಂಬರ್ 14: ಕರ್ನಾಟಕದಲ್ಲಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಕೊನೆಯ ದಿನ ಸೆಪ್ಟೆಂಬರ್ 15 ಆಗಿದ್ದು, ಈವರೆಗೆ ಕೇವಲ 52 ಲಕ್ಷ ವಾಹನಗಳಿಗಷ್ಟೇ ಎಚ್‌ಎಸ್‌ಆರ್‌ಪಿ ಅಳವಡಿಸಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಕೆಲವು ಬಾರಿ ಅವಧಿ ವಿಸ್ತರಣೆ ಮಾಡಲಾಗಿದ್ದು, ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಮಾಲೀಕರಿಗೆ ಸೆಪ್ಟೆಂಬರ್ 15ರ ನಂತರ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಹೇಳಿದೆ.

ಆದಾಗ್ಯೂ, ಸೆಪ್ಟೆಂಬರ್ 18 ರಂದು ಕರ್ನಾಟಕ ಹೈಕೋರ್ಟ್‌ನಲ್ಲಿ ಎಚ್‌ಎಸ್‌ಆರ್‌ಪಿ ಅಳವಡಿಕೆ ಸಂಬಂಧಿಸಿದ ಅರ್ಜಿ ವಿಚಾರಣೆಗೆ ಬರಲಿದೆ. ಹೀಗಾಗಿ ಅಲ್ಲಿಯವರೆಗೆ ವಾಹನ ಮಾಲೀಕರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಕರ್ನಾಟಕ ಸಾರಿಗೆ ಆಯುಕ್ತ ಯೋಗೇಶ್ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ. ಗಡುವನ್ನು ಮತ್ತೊಮ್ಮೆ ವಿಸ್ತರಿಸುವ ಅಥವಾ ವಾಹನ ಚಾಲಕರಿಗೆ ದಂಡ ವಿಧಿಸುವ ನಿರ್ಧಾರವನ್ನು ಸೆಪ್ಟೆಂಬರ್ 18ರ ನಂತರವೇ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

ಒಟ್ಟಿನಲ್ಲಿ, ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವು ವಿಸ್ತರಣೆ ಬಗ್ಗೆ ಸೆಪ್ಟೆಂಬರ್ 18 ಹೈಕೋರ್ಟ್ ವಿಚಾರಣೆಯ ನಂತರವೇ ಕರ್ನಾಟಕ ರಾಜ್ಯ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇಲಾಖೆ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ಶೇ 26ರಷ್ಟು ವಾಹನಗಳಿಗೆ ಮಾತ್ರ ಅಳವಡಿಕೆ

ಸಾರಿಗೆ ಇಲಾಖೆ ಅಂಕಿಅಂಶ ಪ್ರಕಾರ, ರಾಜ್ಯದಲ್ಲಿರುವ ಹಳೆಯ ಎರಡು ಕೋಟಿ ವಾಹನಗಳ ಪೈಕಿ ಶೇ 26ರಷ್ಟು ವಾಹನಗಳಿಗೆ ಮಾತ್ರ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ವಾಹನ ಮಾಲೀಕರ ನೀರಸ ಪ್ರತಿಕ್ರಿಯೆಯಿಂದಾಗಿ ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವನ್ನು ಈ ಹಿಂದೆ ಹಲವಾರು ಬಾರಿ ವಿಸ್ತರಿಸಲಾಗಿತ್ತು.

ಎಚ್‌ಎಸ್‌ಆರ್‌ಪಿ ಅಳವಡಿಸದವರಿಗೆ ದಂಡ ಎಷ್ಟು?

ಗಡುವು ಮುಕ್ತಾಯದ ನಂತರವೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಇಲ್ಲದೆ ಸಂಚರಿಸುವ ವಾಹನ ಮಾಲೀಕರು 500 ರೂ. ದಂಡ ಪಾವತಿಸಬೇಕಾಗುತ್ತದೆ. ಸೆಪ್ಟೆಂಬರ್ 16 ರಿಂದ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಲಿದ್ದಾರೆ. ಕರ್ನಾಟಕದಾದ್ಯಂತ, ವಿಶೇಷವಾಗಿ ಹೆಚ್ಚಿನ ಪ್ರಮಾಣದ ವಾಹನಗಳಿರುವ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಯಲಿದೆ ಎಂದು ಎಂದು ಹೆಚ್ಚುವರಿ ಸಾರಿಗೆ ಆಯುಕ್ತ (ಜಾರಿ ದಕ್ಷಿಣ) ಮಲ್ಲಿಕಾರ್ಜುನ ಸಿ ಇತ್ತೀಚೆಗಷ್ಟೇ ಹೇಳಿದ್ದರು. ಆದಾಗ್ಯೂ, ಸೆಪ್ಟೆಂಬರ್ 18ರ ವರೆಗೆ ವಾಹನ ಮಾಲೀಕರು ತುಸು ನಿರಾಳವಾಗಿರಬಹುದಾಗಿದೆ.

ಇದನ್ನೂ ಓದಿ: ರೈತರ ಕಾರಣ ಹೇಳಿ ನಂದಿನಿ ಹಾಲಿನ ದರ ಹೆಚ್ಚಿಸುತ್ತಿದ್ದಾರೆ, ಅವರಿಗೆ ಕೊಡುವುದು ಅನುಮಾನ: ಪ್ರಲ್ಹಾದ್ ಜೋಶಿ

ಸಾರಿಗೆ ಇಲಾಖೆಯು 2019ರ ಏಪ್ರಿಲ್ 1 ರ ಮೊದಲು ನೋಂದಾಯಿಸಲ್ಪಟ್ಟ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯಗೊಳಿಸುವ ಅಧಿಸೂಚನೆಯನ್ನು 2023ರ ಆಗಸ್ಟ್​​ನಲ್ಲಿ ಹೊರಡಿಸಿತ್ತು. ಆರಂಭದಲ್ಲಿ 2023 ರ ನವೆಂಬರ್ 17 ರ ಗಡುವನ್ನು ನಿಗದಿಪಡಿಸಲಾಗಿತ್ತು. ಆದಾಗ್ಯೂ, ನಿಧಾನಗತಿಯ ಅಳವಡಿಕೆಯ ಕಾರಣ ಗಡುವನ್ನು ಮೂರು ಬಾರಿ ವಿಸ್ತರಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ