ಸೆಪ್ಟೆಂಬರ್ ತಿಂಗಳಲ್ಲಿ ಕೃಪೆ ತೋರುವ ವರುಣ, ರಾಜ್ಯಾದ್ಯಂತ ಮುಂದಿನ ಒಂದು ವಾರ ಮಳೆ ಸಾಧ್ಯತೆ
ರಾಜ್ಯದ ಉತ್ತರ ಒಳನಾಡಿನಲ್ಲೂ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ರಾಜ್ಯದಲ್ಲಿ ವಾಡಿಕೆಗಿಂತ ಶೇ 22 ರಷ್ಟು ಕಡಿಮೆ ಮಳೆಯಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಹೇಳಿದರು.
ಬೆಂಗಳೂರು: ಕರ್ನಾಟಕದಲ್ಲಿ ತೀವ್ರ ಮಳೆ ಕೊರತೆಯಾಗಿದ್ದು (Karnataka Rain), ನೀರಿಲ್ಲದೆ ಜನರು ಪರದಾಡುವಂತಾಗಿದೆ. ಜಲಾಶಯಗಳಲ್ಲೂ ನೀರಿನ ಮಟ್ಟ (Karnataka Dam Water Level) ಕಡಿಮೆಯಾಗಿದ್ದು, ಬೆಳೆಹಾನಿ ಆಗಿದೆ. ಜುಲೈ ಆರಂಭದ ಮೊದಲೆರಡು ವಾರ ಉತ್ತಮ ಮಳೆಯಾಗಿತ್ತು. ಆದರೆ ನಂತರದ ದಿನಗಳಲ್ಲಿ ಆಗಸ್ಟ್ ಅಂತ್ಯದವರೆಗೂ ಮಳೆಯಾಗದೆ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ರಾಜ್ಯಾದ್ಯಂತ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಮಾಹಿತಿ ನೀಡಿದ್ದಾರೆ.
ಬೆಂಗಳೂರಲ್ಲಿ ಟಿವಿ9 ಜೊತೆ ಮಾತನಾಡಿದ ಅವರು ಕರಾವಳಿ ಭಾಗದಲ್ಲಿ ಇಂದು (ಸೆ.01) ಅಧಿಕ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉತ್ತರ ಒಳನಾಡಿನಲ್ಲೂ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ರಾಜ್ಯದಲ್ಲಿ ವಾಡಿಕೆಗಿಂತ ಶೇ 22 ರಷ್ಟು ಕಡಿಮೆ ಮಳೆಯಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ನಿರೀಕ್ಷೆಯಿದೆ ಎಂದರು.
ಇದನ್ನೂ ಓದಿ: ಸೆಪ್ಟೆಂಬರ್ 4 ರಂದು ರಾಜ್ಯದ ಬರ ಪೀಡಿತ ತಾಲೂಕು ಘೋಷಣೆ : ಚೆಲುವರಾಯಸ್ವಾಮಿ
ಯಾವ ಪ್ರದೇಶದಲ್ಲಿ ಎಷ್ಟು ಮಳೆ ಕೊರತೆ | |
ಪ್ರದೇಶ | ಕೊರತೆ %ದಲ್ಲಿ |
ಬೆಂಗಳೂರು | 42 |
ಉತ್ತರ ಒಳನಾಡು | 12 |
ಕರಾವಳಿ | 18 |
ದಕ್ಷಿಣ ಒಳನಾಡು | 31 |
ಇನ್ನು ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ನೀರೀಕ್ಷೆ ಇದೆ. ಕಾರಾವಳಿ 32 ಸೆಂ.ಮೀ, ಉತ್ತರ ಒಳನಾಡಿಗೆ -14 ಸೆಂ.ಮೀ, ದಕ್ಷಿಣ ಒಳನಾಡಿನಲ್ಲಿ 14.9 ಸೆಂ.ಮೀ, ಬೆಂಗಳೂರು ನಗರ 20.8 ಸೆಂ.ಮೀ ಮಳೆಯಾಗಲಿದೆ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ