AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: 10 ಜನರಿಗೆ ಗಾಯ

ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಹೊಸೂರು ಸಮೀಪದ ಪೆರಂಡಪಲ್ಲಿ ಬಳಿ 3 ಲಾರಿ, 1 ಬಸ್ ಮತ್ತು 6 ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಕಾರುಗಳಲ್ಲಿದ್ದ ಒಟ್ಟು 10 ಜನರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಸದ್ಯ ಗಾಯಾಳುಗಳನ್ನು ಕೃಷ್ಣಗಿರಿ, ಹೊಸೂರು ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: 10 ಜನರಿಗೆ ಗಾಯ
ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: 10 ಜನರಿಗೆ ಗಾಯ
ರಾಮು, ಆನೇಕಲ್​
| Edited By: |

Updated on: Aug 25, 2024 | 9:50 PM

Share

ಆನೇಕಲ್​, ಆಗಸ್ಟ್​ 25: ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ (Serial accident) ಸಂಭವಿಸಿದ್ದು 10 ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಹೊಸೂರು ಸಮೀಪದ ಪೆರಂಡಪಲ್ಲಿ ಬಳಿ 3 ಲಾರಿ, 1 ಬಸ್ ಮತ್ತು 6 ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಕೃಷ್ಣಗಿರಿ, ಹೊಸೂರು ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅಪಘಾತ ಹಿನ್ನೆಲೆ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್‌ ಜಾಮ್ ಉಂಟಾಗಿತ್ತು.

ಹತ್ತಾರು ಜನರು ಸೇರಿ ಓರ್ವ ಯುವಕನಿಗೆ ಮನಬಂದಂತೆ ಹಲ್ಲೆ

ಹಣಕಾಸಿನ ವಿಚಾರಕ್ಕೆ ಗಲಾಟೆ ನಡೆದಿದ್ದು, ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಗೆರಟಿಗನಬೆಲೆ ಗ್ರಾಮದ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಹತ್ತಾರು ಜನರು ಸೇರಿ ಓರ್ವ ಯುವಕನ ಮೇಲೆ ಮನಬಂದಂತೆ ಹಲ್ಲೆ ಮಾಡಲಾಗಿದೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಲಭಾದೆ: ಮನೆಯಲ್ಲಿ ನೇಣು ಬಿಗಿದುಕೊಂಡು ಕೂಲಿ ಕಾರ್ಮಿಕ ಆತ್ಮಹತ್ಯೆ

ತುಮಕೂರು: ಸಾಲಭಾದೆಗೆ ಕೂಲಿ ಕಾರ್ಮಿಕ ಮನೆಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ‌ ಮಾಡಿರುವಂತಹ ಜಿಲ್ಲೆಯ ಕೊರಟಗೆರೆ ಪಟ್ಟಣದಲ್ಲಿ ಘಟನೆ ನಡೆದಿದೆ. ಕಾರ್ತಿಕ್ (35) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಹೋಟೆಲ್ ಪ್ರಾರಂಭಿಸಿ ಸಾಲದ ಸುಳಿಗೆ ಕಾರ್ತಿಕ್ ಸಿಲುಕಿದ್ದರು ಎನ್ನಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾರವಾರದ ಬೈತ್‌ಕೋಲಾದಲ್ಲಿ ಅಪರಿಚಿತ ಮೃತದೇಹ ಪತ್ತೆ

ಕಾರವಾರ: ಬೈತ್‌ಕೋಲಾದ ಬಳಿ ಸಮುದ್ರ ತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಮೀನುಗಾರಿಕೆ ನಡೆಸಲು ಹೊರರಾಜ್ಯದಿಂದ ಆಗಮಿಸಿದ್ದ ಕಾರ್ಮಿಕನ ಶವ ಇರಬಹುದೆಂದು ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿ ಶವದ ಗುರುತು ಪತ್ತೆಗಾಗಿ ಕಾರವಾರ ನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ವಿಜಯನಗರ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವಂತಹ ಘಟನೆ ಜಿಲ್ಲೆಯ ಹೊಸಪೇಟೆ ಪಟ್ಟಣದಲ್ಲಿ ನಡೆದಿದೆ. ಕೊಪ್ಪಳ ಮೂಲದ ರಾಘವೇಂದ್ರ ನಾಯಕ, ಮಂಜಪ್ಪ ಹಾಗೂ ಹೊಸಪೇಟೆ ಪಟ್ಟಣದ ಹುಸೇನ್ ಬಾಷಾ ಬಂಧಿತರು.

ಇದನ್ನೂ ಓದಿ: ರಾಯಚೂರಿನಲ್ಲಿ ಪತ್ನಿ, ಅಜ್ಜಿ ಜೋಡಿ ಕೊಲೆ ಪ್ರಕರಣಕ್ಕೆ ಟ್ವೀಸ್ಟ್​! ಪೊಲೀಸ್ ತನಿಖೆ ವೇಳೆ ಬಯಲಾಯ್ತು ಹತ್ಯೆಯ ಸತ್ಯಾಂಶ

ಹೊಸಪೇಟೆ ಪೊಲೀಸರ ಕಾರ್ಯಾಚರಣೆ ನಡೆಸಿ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ 378 ಗ್ರಾಂ ಗಾಂಜಾ ಜಪ್ತಿ ಮಾಡಿದ್ದಾರೆ. ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.