ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಮರಣ ಮೃದಂಗ: ತನಿಖೆಗೆ ತಜ್ಞರ ಸಮಿತಿ ರಚನೆ

ಬಳ್ಳಾರಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವುಗಳ ಸರಣಿ ಘಟನೆಗಳು ಆತಂಕಕ್ಕೆ ಕಾರಣವಾಗಿವೆ. ಒಂದು ವಾರದಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದಾರೆ. ಈ ಸಾವುಗಳಿಗೆ ಕಾರಣ ಏನು ಎಂದು ಪತ್ತೆಹಚ್ಚಲು ಸರ್ಕಾರ ತಜ್ಞರ ಸಮಿತಿಯನ್ನು ರಚಿಸಿದೆ. ಸಮಿತಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಮರಣ ಮೃದಂಗ: ತನಿಖೆಗೆ ತಜ್ಞರ ಸಮಿತಿ ರಚನೆ
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಮರಣ ಮೃದಂಗ: ತನಿಖೆಗೆ ತಜ್ಞರ ಸಮಿತಿ ರಚನೆ
Follow us
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ

Updated on: Nov 28, 2024 | 6:56 PM

ಬಳ್ಳಾರಿ, ನವೆಂಬರ್ 28: ಬಳ್ಳಾರಿಯ ಸರ್ಕಾರಿ ಆಸ್ಪತ್ರೆಗಳಿಗೆ ಅದೇನಾಗಿದೆಯೋ ಗೊತ್ತಿಲ್ಲ. ಬಾಣಂತಿಯರ (bananti) ಸರಣಿ ಸಾವುಗಳಿಗೆ ಕಾರಣವಾಗುತ್ತಿದೆ. ಕಳೆದ ಒಂದು ವಾರದ ಅಂತರದಲ್ಲಷ್ಟೇ ಜಿಲ್ಲಾ ಆಸ್ಪತ್ರೆಯಲ್ಲಿ ಐವರು ಬಾಣಂತಿಯರು ಸರಣಿ ಸಾವನ್ನಪ್ಪಿದ್ದಾರೆ. ಹೀಗಾಗಿ ಈ ಸಾವುಗಳಿಗೆ ಏನು ಕಾರಣ ಎಂದು ತನಿಖೆ ನಡೆಸಲು ಸರ್ಕಾರ ತಜ್ಞರ ಸಮಿತಿಯನ್ನು ರಚನೆ ಮಾಡಿದೆ.

ತಜ್ಞರ ಸಮಿತಿ ರಚನೆ

ಡಾ. ಸವಿತಾ, ಡಾ. ಭಾಸ್ಕರ್ ಮತ್ತು ಡಾ. ಹರ್ಷ ಅವರನ್ನು ಒಳಗೊಂಡ ತಜ್ಞರ ಸಮಿತಿಯನ್ನು ಸರ್ಕಾರ ರಚನೆ ಮಾಡಿದ್ದು, ಈ ಕೂಡಲೇ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸಾವಿಗೆ ಏನು ಕಾರಣ ಎಂದು ತನಿಖೆ ನಡೆಸಬೇಕು. ತನಿಖೆ ಬಳಿಕ ಸರ್ಕಾರಕ್ಕೆ ತುರ್ತು ವರದಿಯನ್ನ ಸಲ್ಲಿಕೆ ಮಾಡಬೇಕೆಂದು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಐವರು ಬಾಣಂತಿಯರು ಸಾವು: ಉಸ್ತುವಾರಿ ಸಚಿವ ಜಮೀರ್ ವಿರುದ್ಧ ಸ್ಥಳೀಯರ ಆಕ್ರೋಶ

ಗಣಿನಾಡು ಬಳ್ಳಾರಿಯ ಜಿಲ್ಲಾ ಆಸ್ಪತ್ರೆ ಅಂದರೆ ಒಂದು ಸಮಯದಲ್ಲಿ ಖಾಸಗಿ ಆಸ್ಪತ್ರೆಗೆ ಶೆಡ್ಡು ಹೊಡೆಯುವ ರೀತಿ ಇತ್ತು. ಆದರೆ ಇತ್ತೀಚಿನ ಘಟನೆಗಳನ್ನ ನೋಡಿದರೆ, ಯಾಕೋ ಜಿಲ್ಲಾ ಆಸ್ಪತ್ರೆ ಅಂದರೆ ಭಯ ಪಡುವಂತಾಗಿದೆ.

ಒಂದು ವಾರದಲ್ಲಿ ನಾಲ್ವರು ಬಾಣಂತಿಯರು ಸಾವು

ಒಂದು ವಾರದ ಅಂತರದಲ್ಲಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ನಿನ್ನೆ ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೆ ಓರ್ವ ಬಾಣಂತಿ ಸಾವನ್ನಪ್ಪಿದ್ದರು. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಸಿಎಸ್‌ಪುರ ಗ್ರಾಮದ ಮಹಾಲಕ್ಷ್ಮಿ (20) ಎಂಬ ಗರ್ಭಿಣಿಯು, ರವಿವಾರ ಬಳ್ಳಾರಿಯ ಬಿಮ್ಸ್‌ ಆಸ್ಪತ್ರೆಗೆ ಹೆರಿಗೆ‌ಗೆ ದಾಖಲಾಗಿದ್ದರು. ಬಳಿಕ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿಯೇ ಮಹಾಲಕ್ಷ್ಮಿ‌ಗೆ ನಾರ್ಮಲ್ ಹೆರಿಗೆ ಮಾಡಲಾಗಿತ್ತು.

ಆದರೆ ಹೆರಿಗೆ ಬಳಿಕ ತೀವ್ರ ರಕ್ತ ಸ್ರಾವ ಹಾಗೂ ನಂಜಾಗಿ ಬಾಣಂತಿ‌ ಸಾವನ್ನಪ್ಪಿದ್ದಾರೆ. ಇದು ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಅಂತಾ ಪೋಷಕರು ಆರೋಪ ಮಾಡಿದರೆ, ಇತ್ತ ತಾಯಿ ಕಳೆದುಕೊಂಡ ಮಗು ಮುಖ‌ ನೋಡಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಇನ್ನು ನವೆಂಬರ್​ 09 ರಂದು ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ 18 ಜನ ಗರ್ಭೀಣಿಯರು ಸಿಸೇರಿಯನ್​ ಹೆರಿಗೆಗೆ ಒಳಗಾಗಿದ್ದರು. ಬಳಿಕ ಏನ್​ ಆಯ್ತು ಗೊತ್ತಿಲ್ಲ. ಅದರಲ್ಲಿ ಏಳು ಬಾಣಂತಿಯರ ಆರೋಗ್ಯದಲ್ಲಿ ಏರುಪೇರಾಗಿತ್ತು. ತಕ್ಷಣ ಏನಾಗಿದೆ ಅಂತಾ ಪರಿಶೀಲನೆ ಮಾಡುವಷ್ಟರಲ್ಲಿ ಇಬ್ಬರು ಬಾಣಂತಿಯರ ಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆ ನೀಡುವಷ್ಟರಲ್ಲೇ ಇಬ್ಬರು ಬಾಣಂತಿಯರು ಮೃತಪಟ್ಟಿದ್ದರು.

ಇದನ್ನೂ ಓದಿ: ಬಳ್ಳಾರಿ ಜಿಲ್ಲಾಸ್ಪ್ರತೆಯಲ್ಲಿ ಮೇಲಿಂದ ಮೇಲೆ ಬಾಣಂತಿರ ಮರಣ: ಸಾವಿನ ಸುತ್ತ ಅನುಮಾನಗಳ ಹುತ್ತ

ಅಷ್ಟರಲ್ಲಿ ಉಳಿದ ಐದು ಬಾಣಂತಿಯರನ್ನ ವಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ವಿಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಐವರಲ್ಲಿ ನವೆಂಬರ್​ 13ರಂದು ರೋಜಮ್ಮ ಅನ್ನುವ ಬಾಣಂತಿ ಸಾವನಪ್ಪಿದ್ದಾರೆ. ಮೂವರು ಬಾಣಂತಿಯರ ಸರಣಿ ಸಾವಿಗೆ ಎಚ್ಚೆತ್ತ ಸರ್ಕಾರ ತನಿಖಾ ತಂಡವನ್ನ ರಚನೆ ಮಾಡಿತ್ತು. ಅದರಂತೆ ನವೆಂಬರ್​ 14 ರಂದು ಬಿಎಂಸಿಆರ್​ಐನ ಮೂವರು ವೈದ್ಯರ ತನಿಖಾ ತಂಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪ್ರಕರಣದ ಸಂಪೂರ್ಣ ವರದಿ ಪಡೆದಿತ್ತು. ಆದರೂ ಬಾಣಂತಿಯರ ಸಾವುಗಳು ನಿಂತ್ತಿಲ್ಲ. ಹೀಗಾಗಿ ಇದೀಗ ಸರ್ಕಾರವೇ ತಜ್ಞರ ಸಮಿತಿ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೋದಿ ವಿಡಿಯೋ; ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಅನಾವರಣ
ಮೋದಿ ವಿಡಿಯೋ; ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಅನಾವರಣ
ಆರ್​ಸಿಬಿಯ ಹಿಂದಿ ಖಾತೆ ವಿರುದ್ಧಕೆರಳಿದ ಕನ್ನಡ ಪರ ಸಂಘಟನೆಗಳು
ಆರ್​ಸಿಬಿಯ ಹಿಂದಿ ಖಾತೆ ವಿರುದ್ಧಕೆರಳಿದ ಕನ್ನಡ ಪರ ಸಂಘಟನೆಗಳು
ಕಾಂಗ್ರೆಸ್​ಗೆ ರಾಜ್ಯದಲ್ಲಿ ಮಹಾರಾಷ್ಟ್ರದಂಥ ಸ್ಥಿತಿ ಎದುರಾಗಲಿದೆ: ಯತ್ನಾಳ್
ಕಾಂಗ್ರೆಸ್​ಗೆ ರಾಜ್ಯದಲ್ಲಿ ಮಹಾರಾಷ್ಟ್ರದಂಥ ಸ್ಥಿತಿ ಎದುರಾಗಲಿದೆ: ಯತ್ನಾಳ್
ಮೋಕ್ಷಿತಾ ಬಗ್ಗೆ ಉಗ್ರಂ ಮಂಜು ಗೇಲಿ, ಥೂ ಎಂದ ‘ಮಹರಾಣಿ’
ಮೋಕ್ಷಿತಾ ಬಗ್ಗೆ ಉಗ್ರಂ ಮಂಜು ಗೇಲಿ, ಥೂ ಎಂದ ‘ಮಹರಾಣಿ’
‘ಮಂಜು ರೋಗಿಷ್ಟ ರಾಜ’: ಬಿಗ್ ಬಾಸ್ ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ರಜತ್
‘ಮಂಜು ರೋಗಿಷ್ಟ ರಾಜ’: ಬಿಗ್ ಬಾಸ್ ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ರಜತ್
ಲಂಚ ಕೇಳಿದ ಅಧಿಕಾರಿಯನ್ನು ಟ್ರಾನ್ಸ್​ಫರ್ ಮಾಡೋದೇ ದೊಡ್ಡ ಶಿಕ್ಷೆ!
ಲಂಚ ಕೇಳಿದ ಅಧಿಕಾರಿಯನ್ನು ಟ್ರಾನ್ಸ್​ಫರ್ ಮಾಡೋದೇ ದೊಡ್ಡ ಶಿಕ್ಷೆ!
IND vs AUS: ಆಸ್ಟ್ರೇಲಿಯಾ ಪ್ರಧಾನಿಯನ್ನ ಭೇಟಿಯಾದ ಟೀಮ್ ಇಂಡಿಯಾ
IND vs AUS: ಆಸ್ಟ್ರೇಲಿಯಾ ಪ್ರಧಾನಿಯನ್ನ ಭೇಟಿಯಾದ ಟೀಮ್ ಇಂಡಿಯಾ
ಗುಂಪುಗಾರಿಕೆ 2 ತಿಂಗಳು ಮುಂದುವರಿಯಲಿದೆ, ಪತ್ರ ಚಳುವಳಿ ಅಗತ್ಯವಿಲ್ಲ: ಶಾಸಕ
ಗುಂಪುಗಾರಿಕೆ 2 ತಿಂಗಳು ಮುಂದುವರಿಯಲಿದೆ, ಪತ್ರ ಚಳುವಳಿ ಅಗತ್ಯವಿಲ್ಲ: ಶಾಸಕ
ಯತ್ನಾಳ್ ತಂಡದ ವಿರುದ್ದ 2 ಪತ್ರ ಬರೆದರೂ ವರಿಷ್ಠರಿಂದ ಕ್ರಮವಿಲ್ಲ: ಡಿವಿಎಸ್
ಯತ್ನಾಳ್ ತಂಡದ ವಿರುದ್ದ 2 ಪತ್ರ ಬರೆದರೂ ವರಿಷ್ಠರಿಂದ ಕ್ರಮವಿಲ್ಲ: ಡಿವಿಎಸ್
ನನ್ನ ಹಾಗೂ ನನ್ನ ಮಗನ ವಿರುದ್ಧ ಒಂದೇ ಒಂದು ದೂರು ದಾಖಲಾಗಿಲ್ಲ: ದೇವೇಗೌಡ
ನನ್ನ ಹಾಗೂ ನನ್ನ ಮಗನ ವಿರುದ್ಧ ಒಂದೇ ಒಂದು ದೂರು ದಾಖಲಾಗಿಲ್ಲ: ದೇವೇಗೌಡ