Sign In

By signing in or creating an account, you agree with Associated Broadcasting Company's Terms & Conditions and Privacy Policy.

5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ: ಕರ್ನಾಟಕ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ಈ ವಿಚಾರವಾಗಿ ಮಾರ್ಚ್​ 22ರಂದು ಕರ್ನಾಟಕ ಹೈಕೋರ್ಟ್​ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.

5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ: ಕರ್ನಾಟಕ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ
ಸುಪ್ರೀಂ ಕೋರ್ಟ್
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: Ganapathi Sharma

Updated on:Apr 08, 2024 | 12:42 PM

ನವದೆಹಲಿ, ಏಪ್ರಿಲ್ 8: ರಾಜ್ಯದ ಪಠ್ಯಕ್ರಮ (Karnataka State Curriculum) ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ (Supreme Court) ಸೋಮವಾರ ತಡೆಯಾಜ್ಞೆ ನೀಡಿದೆ. 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮಾರ್ಚ್​ 22ರಂದು ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಎತ್ತಿಹಿಡಿದಿತ್ತು.

ಫಲಿತಾಂಶ ಪ್ರಕಟಿಸದಂತೆ ಸೂಚನೆ

ಸದ್ಯ ಯಾವುದೇ ಶಾಲೆಗಳು ಸಹ ಫಲಿತಾಂಶ ಪ್ರಕಟಿಸಬಾರದು. ಮುಂದಿನ ಆದೇಶದ ವರೆಗೆ ಕಾಯಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮಾರ್ಚ್​ನಲ್ಲಿ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶ ನೀಡಿದ್ದ ಹೈಕೋರ್ಟ್, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿತ್ತು. ಅದರಂತೆ ಬಳಿಕ ಶಾಲೆಗಳು ಪರೀಕ್ಷೆಗಳನ್ನು ನಡೆಸಿದ್ದವು. ಇದೀಗ ಫಲಿತಾಂಶ ಪ್ರಕಟವಾಗುವ ಸಂದರ್ಭದಲ್ಲೇ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಬಂದಿದೆ.

ಇದನ್ನೂ ಓದಿ: 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್​​ ಅಸ್ತು

ಏನಿದು ಪ್ರಕರಣ?

​2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5, 8, 9ನೇ ಹಾಗೂ 11 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್​ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್​ ಪರೀಕ್ಷೆಯನ್ನು ರದ್ದುಪಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಮೇಲ್ಮನವಿ ಸಲ್ಲಿಸಿತ್ತು. ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಸರ್ಕಾರದ ಪರ ಎಎಜಿ ವಿಕ್ರಮ್ ಹುಯಿಲಗೋಳ್‌ ಅವರು ಮೇಲ್ಮನವಿಯಲ್ಲಿ ಉಲ್ಲೇಖಿಸಿದ್ದರು. ಬಳಿಕ ಮೇಲ್ಮನವಿಯನ್ನು ಪುರಸ್ಕರಿಸಿದ್ದ ಹೈಕೋರ್ಟ್, ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Mon, 8 April 24

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ