ರಾಜ್ಯದಲ್ಲಿಂದು 973 ಜನರಿಗೆ ಕೊರೊನಾ ಪಾಸಿಟಿವ್, ಏಳು ಸಾವು
ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 973 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 9,18,544ಕ್ಕೇರಿದೆ.
ಬೆಂಗಳೂರು: ರಾಜ್ಯದಲ್ಲಿ ಮೂವರಿಗೆ ಇಂಗ್ಲೆಂಡ್ನಲ್ಲಿ ಕಾಣಿಸಿಕೊಂಡಿದ್ದ ರೂಪಾಂತರಗೊಂಡ ಕೊರೊನಾ ಇರುವುದು ದೃಢವಾಗಿದೆ. ಈ ಆತಂಕದ ನಡುವೆಯೇ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖ ಆಗುತ್ತಿರುವುದು ನಿಟ್ಟುಸಿರು ಬಿಡುವಂತಾಗಿದೆ.
ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 973 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 9,18,544ಕ್ಕೇರಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 7 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸಾವಿನ ಸಂಖ್ಯೆ ಕೂಡ ಮಿತಿ ಮೀರಿ ಕಡಿಮೆ ಆಗಿದೆ.
ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 12,081 ಜನರ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ 8,94,834 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 11,610 ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 195 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿತ್ಯ ರಾಜ್ಯದಲ್ಲಿ ಆ್ಯಕ್ಟಿವ್ ಕೇಸ್ಗಳ ಸಂಖ್ಯೆ ಕೂಡ ಕಡಿಮೆ ಆಗುತ್ತಿರುವುದು ಜನರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ.
2020 Year in Review | ರಾಜಕಾರಣದ ಚದುರಂಗ; ಕೊರೊನಾ ಸಂಕಷ್ಟದ ನಡುವೆಯೂ ಮಹತ್ವದ ಮಸೂದೆಗಳ ಮಂಡನೆ
Published On - 9:16 pm, Wed, 30 December 20