ರಾಜ್ಯದಲ್ಲಿಂದು 973 ಜನರಿಗೆ ಕೊರೊನಾ ಪಾಸಿಟಿವ್​, ಏಳು ಸಾವು

|

Updated on: Dec 30, 2020 | 9:47 PM

ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.  ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 973 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 9,18,544ಕ್ಕೇರಿದೆ.

ರಾಜ್ಯದಲ್ಲಿಂದು 973 ಜನರಿಗೆ ಕೊರೊನಾ ಪಾಸಿಟಿವ್​, ಏಳು ಸಾವು
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ರಾಜ್ಯದಲ್ಲಿ ಮೂವರಿಗೆ ಇಂಗ್ಲೆಂಡ್​ನಲ್ಲಿ ಕಾಣಿಸಿಕೊಂಡಿದ್ದ ರೂಪಾಂತರಗೊಂಡ ಕೊರೊನಾ ಇರುವುದು ದೃಢವಾಗಿದೆ. ಈ ಆತಂಕದ ನಡುವೆಯೇ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖ ಆಗುತ್ತಿರುವುದು ನಿಟ್ಟುಸಿರು ಬಿಡುವಂತಾಗಿದೆ.

ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.  ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 973 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 9,18,544ಕ್ಕೇರಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 7 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸಾವಿನ ಸಂಖ್ಯೆ ಕೂಡ  ಮಿತಿ ಮೀರಿ ಕಡಿಮೆ ಆಗಿದೆ.

ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 12,081 ಜನರ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ 8,94,834 ಜನ ಗುಣಮುಖರಾಗಿ ಡಿಸ್​ಚಾರ್ಜ್ ಆಗಿದ್ದಾರೆ. 11,610 ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 195 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿತ್ಯ ರಾಜ್ಯದಲ್ಲಿ ಆ್ಯಕ್ಟಿವ್​ ಕೇಸ್​ಗಳ ಸಂಖ್ಯೆ ಕೂಡ ಕಡಿಮೆ ಆಗುತ್ತಿರುವುದು ಜನರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ.

2020 Year in Review | ರಾಜಕಾರಣದ ಚದುರಂಗ; ಕೊರೊನಾ ಸಂಕಷ್ಟದ ನಡುವೆಯೂ ಮಹತ್ವದ ಮಸೂದೆಗಳ ಮಂಡನೆ

Published On - 9:16 pm, Wed, 30 December 20